ದೇಶ

ದೆಹಲಿಯಲ್ಲಿ ಪಟಾಕಿ ಮಾರಾಟಕ್ಕೆ ಸಂಪೂರ್ಣ ಬ್ರೇಕ್, ಅರ್ಜಿ ಹಿಂಪಡೆದ ವ್ಯಾಪಾರಸ್ಥರು

ದೆಹಲಿಯಲ್ಲಿ ಪಟಾಕಿ ಮಾರಾಟಕ್ಕೆ ಸಂಪೂರ್ಣ ಬ್ರೇಕ್ ಬಿದ್ದಿದೆ. ರಾಷ್ಟ್ರ ರಾಜಧಾನಿಯ ಹೊರಗೆ ಪಟಾಕಿಗಳನ್ನು ಬಳಸಲು ಬಯಸುವವರಿಗೂ ಸಹ ದೆಹಲಿಯೊಳಗೆ ಪಟಾಕಿ ಖರೀದಿ ಅಥವಾ ಮಾರಾಟಕ್ಕೆ ಅನುಮತಿಸಲಾಗುವುದಿಲ್ಲ...

ದೆಹಲಿಯಲ್ಲಿ ಪಟಾಕಿ ಮಾರಾಟಕ್ಕೆ ಸಂಪೂರ್ಣ ಬ್ರೇಕ್, ಅರ್ಜಿ ಹಿಂಪಡೆದ ವ್ಯಾಪಾರಸ್ಥರು
ಸಾಂದರ್ಭಿಕ ಚಿತ್ರ
Published On :

ನವದೆಹಲಿ: ದೆಹಲಿಯಲ್ಲಿ ಪಟಾಕಿ ಮಾರಾಟಕ್ಕೆ ಸಂಪೂರ್ಣ ಬ್ರೇಕ್ ಬಿದ್ದಿದೆ. ರಾಷ್ಟ್ರ ರಾಜಧಾನಿಯ ಹೊರಗೆ ಪಟಾಕಿಗಳನ್ನು ಬಳಸಲು ಬಯಸುವವರಿಗೂ ಸಹ ದೆಹಲಿಯೊಳಗೆ ಪಟಾಕಿ ಖರೀದಿ ಅಥವಾ ಮಾರಾಟಕ್ಕೆ ಅನುಮತಿಸಲಾಗುವುದಿಲ್ಲ ಎಂದು ದೆಹಲಿ ಹೈಕೋರ್ಟ್ ಸೋಮವಾರ ಹೇಳಿದೆ.

ಪಟಾಕಿ ವ್ಯಾಪಾರಸ್ಥರ ಬಳಿ ಇರುವ ದಾಸ್ತಾನನ್ನು ನಗರದ ಹೊರಗೆ ಹೋಗಿ ಮಾರಾಟ ಮಾಡಲು ಅಥವಾ ಹೊರ ಭಾಗದಿಂದ ನಗರಕ್ಕೆ ಬಂದು ಪಟಾಕಿ ಖರೀದಿಸಲು ಅನುಮತಿ ನೀಡಬೇಕೆಂದು ಕೋರಿ 53 ಪಟಾಕಿ ತಯಾರಕರು ಹಾಗೂ ವ್ಯಾಪಾರಿಗಳು ದೆಹಲಿ ಹೈಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದರು.

ಈ ಕುರಿತು ವಿಚಾರಣೆ ನಡೆಸಿದ ಹೈಕೋರ್ಟ್, ಪಟಾಕಿ ಮಾರಾಟ ನಿಷೇಧ ಕುರಿತಂತೆ ರಾಷ್ಟ್ರೀಯ ಹಸಿರು ನ್ಯಾಯಮಂಡಳಿ ಮತ್ತು ಸುಪ್ರೀಕೋರ್ಟ್ ಆದೇಶ ಹಾಗೂ ಮಾರ್ಗಸೂಚಿ ಪರಿಶೀಲಿಸುವುದಿಲ್ಲ ಎಂದು ವಿಚಾರಣೆ ವೇಳೆ ತಿಳಿಸಿದೆ.

ಈ ಹಿನ್ನೆಲೆಯಲ್ಲಿ ದೆಹಲಿಯಲ್ಲಿನ ಪಟಾಕಿ ದಾಸ್ತಾನನ್ನು ನಗರದ ಹೊರಭಾಗಕ್ಕೆ ಅಥವಾ ಉತ್ತಮ ಹವಾಮಾನದ ಪ್ರದೇಶದ ಖರೀದಿದಾರರು ದೆಹಲಿಗೆ ಆಗಮಿಸಿ ಪಟಾಕಿ ಕೊಂಡುಕೊಳ್ಳುವುದು ಸುಪ್ರೀಂಕೋರ್ಟ್ ತೀರ್ಪಿನ ಸ್ಪಷ್ಟ ಉಲ್ಲಂಘನೆಯಾಗುತ್ತದೆ. ಈ ವಿಚಾರದಲ್ಲಿ ಅರ್ಜಿದಾರರು ಸ್ಪಷ್ಟನೆ ಕೋರಿ ಸುಪ್ರೀಂ ಕೋರ್ಟ್‌ಗೆ ಹೋಗಬೇಕು ಎಂದು ಹೈಕೋರ್ಟ್ ಸೂಚಿಸಿದೆ. ಈ ಹಿನ್ನೆಲೆಯಲ್ಲಿ ಅರ್ಜಿದಾರರು, ಹೈಕೋರ್ಟ್ ನಲ್ಲಿ ಸಲ್ಲಿಸಿದ್ದ ಅರ್ಜಿಯನ್ನು ಹಿಂಪಡೆದುಕೊಂಡಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.