2022ರ ಹಜ್ ಪ್ರಕ್ರಿಯೆ ಘೋಷಣೆ, ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು 2022 ಜನವರಿ 31 ಕೊನೆ ದಿನ
ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಮುಖ್ತಾರ್ ಅಬ್ಬಾಸ್ ನಖ್ವಿ ಅವರು ಸೋಮವಾರ 2022ನೇ ಸಾಲಿನ ಹಜ್ ಪ್ರಕ್ರಿಯೆಯನ್ನು ಘೋಷಿಸಿದ್ದು, ಇದರೊಂದಿಗೆ ಹಜ್ ಗೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸುವ ಪ್ರಕ್ರಿಯೆ ಆರಂಭವಾಗಲಿದೆ.

ಮುಂಬೈ: ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಮುಖ್ತಾರ್ ಅಬ್ಬಾಸ್ ನಖ್ವಿ ಅವರು ಸೋಮವಾರ 2022ನೇ ಸಾಲಿನ ಹಜ್ ಪ್ರಕ್ರಿಯೆಯನ್ನು ಘೋಷಿಸಿದ್ದು, ಇದರೊಂದಿಗೆ ಹಜ್ ಗೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸುವ ಪ್ರಕ್ರಿಯೆ ಆರಂಭವಾಗಲಿದೆ.
ಇದು ಪ್ರತಿಶತ 100ರಷ್ಟು ಡಿಜಿಟಲ್ ವ್ಯವಹಾರವಾಗಿದ್ದು, ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು 2022 ಜನವರಿ 31ಕೊನೆಯ ದಿನಾಂಕವಾಗಿದೆ ಎಂದು ಮುಖ್ತಾರ್ ಅಬ್ಬಾಸ್ ನಖ್ವಿ ಅವರು ಹೇಳಿದ್ದಾರೆ.
ಭಾರತೀಯ ಹಜ್ ಯಾತ್ರಿಕರು ಸ್ಥಳೀಯ ಉತ್ಪನ್ನಗಳೊಂದಿಗೆ ಅಲ್ಲಿಗೆ ಹೋಗುತ್ತಾರೆ. ಹಜ್ ಯಾತ್ರಿಕರು ಇದುವರೆಗೆ ಸೌದಿ ಅರೇಬಿಯಾದಲ್ಲಿ ಬೆಡ್ ಶೀಟ್‌ಗಳು, ದಿಂಬುಗಳು, ಟವೆಲ್‌ಗಳು, ಛತ್ರಿಗಳು ಮತ್ತು ಇತರ ವಸ್ತುಗಳನ್ನು ವಿದೇಶಿ ಕರೆನ್ಸಿಯಲ್ಲಿ ಖರೀದಿಸುತ್ತಿದ್ದರು. ಆದರೆ ಈ ಬಾರಿ ಹೆಚ್ಚಿನ ಸರಕುಗಳನ್ನು ಭಾರತೀಯ ಕರೆನ್ಸಿಯಲ್ಲಿ ಭಾರತದಲ್ಲಿ ಖರೀದಿಸಲಾಗುತ್ತದೆ ಎಂದು ನಖ್ವಿ ತಿಳಿಸಿದ್ದಾರೆ.
ಈ ಸರಕುಗಳು ಸೌದಿ ಅರೇಬಿಯಾದಲ್ಲಿ ಅವರ ವೆಚ್ಚಕ್ಕೆ ಹೋಲಿಸಿದರೆ ಸುಮಾರು ಶೇ. 50 ರಷ್ಟು ಕಡಿಮೆ ಬೆಲೆಯಲ್ಲಿ ಲಭ್ಯವಿರುತ್ತವೆ ಎಂದಿದ್ದಾರೆ.
"ಕೋವಿಡ್ ಪಿಡುಗು ಹಿನ್ನೆಲೆಯಲ್ಲಿ ಸೌದಿ ಅರೇಬಿಯಾ ಸರ್ಕಾರ ಮತ್ತು ಭಾರತ ಸರ್ಕಾರವು ನೀಡಬೇಕಾದ ಅಗತ್ಯ ಮಾರ್ಗಸೂಚಿಗಳ ಪ್ರಕಾರ ಸಂಪೂರ್ಣ ಹಜ್ 2022 ಪ್ರಕ್ರಿಯೆಯು ನಡೆಯಲಿದೆ ಎಂದು ಅವರು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


