ದೇಶ

ರೈತರ ನೋವನ್ನು ಅರ್ಥಮಾಡಿಕೊಳ್ಳಲು ಅವರ ಮಾತನ್ನು ಆಲಿಸಬೇಕು: ಪಕ್ಷದ ವಿರುದ್ಧ ಮತ್ತೆ ಕಿಡಿಕಾರಿದ ವರುಣ್ ಗಾಂಧಿ!

ಬಿಜೆಪಿಯ ಲೋಕಸಭಾ ಸಂಸದ ವರುಣ್ ಗಾಂಧಿ ಮತ್ತೆ ರೈತರ ಪರ ಧ್ವನಿ ಎತ್ತಿದ್ದಾರೆ. ಸೋಮವಾರ ಅವರು ಲಖಿಂಪುರ ಮತ್ತು ಪಿಲಿಭಿತ್ ಗಡಿಭಾಗದ ರೈತರೊಂದಿಗೆ ಅವರ ಸಮಸ್ಯೆಗಳ ಕುರಿತು ಚರ್ಚಿಸಿದರು.

ರೈತರ ನೋವನ್ನು ಅರ್ಥಮಾಡಿಕೊಳ್ಳಲು ಅವರ ಮಾತನ್ನು ಆಲಿಸಬೇಕು: ಪಕ್ಷದ ವಿರುದ್ಧ ಮತ್ತೆ ಕಿಡಿಕಾರಿದ ವರುಣ್ ಗಾಂಧಿ!
ವರುಣ್ ಗಾಂಧಿ (ಸಂಗ್ರಹ ಚಿತ್ರ)
Published On :

ನವದೆಹಲಿ: ಬಿಜೆಪಿಯ ಲೋಕಸಭಾ ಸಂಸದ ವರುಣ್ ಗಾಂಧಿ ಮತ್ತೆ ರೈತರ ಪರ ಧ್ವನಿ ಎತ್ತಿದ್ದಾರೆ.

ಸೋಮವಾರ ಅವರು ಲಖಿಂಪುರ ಮತ್ತು ಪಿಲಿಭಿತ್ ಗಡಿಭಾಗದ ರೈತರೊಂದಿಗೆ ಅವರ ಸಮಸ್ಯೆಗಳ ಕುರಿತು ಚರ್ಚಿಸಿದರು.

ಈ ಕುರಿತು ಮಾತನಾಡಿದ ಅವರು, ರೈತರ ನೋವಿಗೆ ಕಿವಿಗೊಡಬೇಕು. ರೈತರ ಕಷ್ಟ ತಿಳಿಯಲು ಮೊದಲು ಅವರ ಮಾತುಗಳನ್ನು ಕೇಳಿಸಿಕೊಳ್ಳಬೇಕು. ಕನಿಷ್ಠ ಬೆಂಬಲ ಬೆಲೆ ಸಿಗಲಿದೆ ಎಂಬುದಕ್ಕೆ ಕಾನೂನು ರಕ್ಷಣೆ ಬೇಕಾಗಿದೆ.

ಇದರಿಂದ ಮಾತ್ರವೇ ಸಗಟು ಮಾರುಕಟ್ಟೆಯಲ್ಲಿ ರೈತರ ಶೋಷಣೆ ತಪ್ಪಲಿದೆ ಎಂದು ಹೇಳಿದರು. ಕಳೆದ ಕೆಲವು ದಿನಗಳಿಂದ ವರುಣಗಾಂಧಿ ಸತತವಾಗಿ ರೈತರ ಬೇಡಿಕೆಗಳಿಗೆ ಬೆಂಬಲ ನೀಡುತ್ತಿದ್ದಾರೆ.

ಇದಕ್ಕೂ ಮುನ್ನ ಅಕ್ಟೋಬರ್ 29ರಂದು ಮಂಡಿಗೆ ಭೇಟಿ ನೀಡಿ ಪರಿಸ್ಥಿತಿ ಅವಲೋಕಿಸಿದ್ದರು. ಪಿಲಿಭಿತ್ ಸೇರಿದಂತೆ 17 ಜಿಲ್ಲೆಗಳಲ್ಲಿ ರೈತ ತನ್ನ ಭತ್ತದ ಬೆಳೆಗೆ ತಾನೇ ಬೆಂಕಿ ಹಚ್ಚುತ್ತಿದ್ದಾನೆ ಎಂದು ಮಂಡಿ ನೌಕರರಿಗೆ ಹೇಳಿದ್ದರು. ಇದು ಇಡೀ ರಾಜ್ಯಕ್ಕೆ ದೊಡ್ಡ ಅವಮಾನ ಎಂದು ಅವರು ಹೇಳಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.