ದೇಶ

ಉಪಚುನಾವಣೆ ಮತ ಎಣಿಕೆ: ವಿಜಯೋತ್ಸವ ಮೆರವಣಿಗೆಗಳ ಮೇಲೆ ಚುನಾವಣಾ ಆಯೋಗ ನಿಷೇಧ

ವಿವಿಧ ರಾಜ್ಯಗಳಲ್ಲಿ ಲೋಕಸಭಾ ಹಾಗೂ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ಮತ ಎಣಿಕೆ ಪ್ರಕ್ರಿಯೆ ಮುಂದುವರೆದಿದ್ದು, ಫಲಿತಾಂಶ ಹೊರಬಿದ್ದ ನಂತರ ವಿಜಯೋತ್ಸವದ ಮೆರವಣಿಗೆಗಳನ್ನು ನಡೆಸದಂತೆ ಕ್ರಮ ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಚುನಾವಣಾ ಆಯೋಗ ಮಂಗಳವಾರ ಸೂಚನೆ ನೀಡಿದೆ.

ಉಪಚುನಾವಣೆ ಮತ ಎಣಿಕೆ: ವಿಜಯೋತ್ಸವ ಮೆರವಣಿಗೆಗಳ ಮೇಲೆ ಚುನಾವಣಾ ಆಯೋಗ ನಿಷೇಧ
ಸಂಗ್ರಹ ಚಿತ್ರ
Published On :

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಲೋಕಸಭಾ ಹಾಗೂ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ಮತ ಎಣಿಕೆ ಪ್ರಕ್ರಿಯೆ ಮುಂದುವರೆದಿದ್ದು, ಫಲಿತಾಂಶ ಹೊರಬಿದ್ದ ನಂತರ ವಿಜಯೋತ್ಸವದ ಮೆರವಣಿಗೆಗಳನ್ನು ನಡೆಸದಂತೆ ಕ್ರಮ ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಚುನಾವಣಾ ಆಯೋಗ ಮಂಗಳವಾರ ಸೂಚನೆ ನೀಡಿದೆ.

ಕೋವಿಡ್‌–19 ಪ್ರಸರಣ ತಡೆಯುವ ಸಂಬಂಧ ವಿಜಯೋತ್ಸವ ಹಾಗೂ ಮೆರವಣಿಗೆಗಳ ಮೇಲೆ ಈಗಾಗಲೇ ನಿಷೇಧ ಹೇರಿರುವುದನ್ನು ಆಯೋಗವು ಚುನಾವಣಾ ಕರ್ತವ್ಯ ನಿರತ ಅಧಿಕಾರಿಗಳಿಗೆ ನೆನಪಿಸಿದೆ.

ಕರ್ನಾಟಕದ ಹಾನಗಲ್‌, ಸಿಂದಗಿ ಸೇರಿದಂತೆ ವಿವಿಧ ರಾಜ್ಯಗಳ 29 ವಿಧಾನಸಭಾ ಕ್ಷೇತ್ರಗಳು ಹಾಗೂ 3 ಲೋಕಸಭಾ ಕ್ಷೇತ್ರಗಳಿಗೆ ನಡೆದ ಉಪಚುನಾವಣೆಯ ಮತ ಎಣಿಕೆ ಕಾರ್ಯ ಪ್ರಗತಿಯಲ್ಲಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.