ವಿರಾಟ್ ಕೊಹ್ಲಿ ಮಗುವಿಗೆ ಅತ್ಯಾಚಾರದ ಬೆದರಿಕೆ: ವರದಿ ಕೇಳಿದ ಡಿಸಿಡಬ್ಲ್ಯು
ವಿರಾಟ್ ಕೊಹ್ಲಿ-ಅನುಷ್ಕಾ ಶರ್ಮಾ ಅವರ 9 ತಿಂಗಳ ಹಸುಗೂಸಿಗೆ ಅತ್ಯಾಚಾರದ ಬೆದರಿಕೆ ಹಾಕಿದ್ದ ಪ್ರಕರಣದಲ್ಲಿ ತೆಗೆದುಕೊಂಡಿರುವ ಕ್ರಮಗಳ ಬಗ್ಗೆ ದೆಹಲಿ ಮಹಿಳಾ ಆಯೋಗ ವಿವರಣೆಯನ್ನು ಕೇಳಿದೆ.

ವಿರಾಟ್ ಕೊಹ್ಲಿ-ಅನುಷ್ಕಾ ಶರ್ಮಾ ಅವರ 9 ತಿಂಗಳ ಹಸುಗೂಸಿಗೆ ಅತ್ಯಾಚಾರದ ಬೆದರಿಕೆ ಹಾಕಿದ್ದ ಪ್ರಕರಣದಲ್ಲಿ ತೆಗೆದುಕೊಂಡಿರುವ ಕ್ರಮಗಳ ಬಗ್ಗೆ ದೆಹಲಿ ಮಹಿಳಾ ಆಯೋಗ ವಿವರಣೆಯನ್ನು ಕೇಳಿದೆ.
ಟಿ20 ವಿಶ್ವಕಪ್ ಟೂರ್ನಿಯಲ್ಲಿ ಭಾರತ-ಪಾಕಿಸ್ತಾನ ಪಂದ್ಯದಲ್ಲಿ ಭಾರತ ತಂಡ ಸೋಲು ಕಂಡಿತ್ತು. ಇದು ಕ್ರಿಕೆಟ್ ಅಭಿಮಾನಿಗಳ ಪೈಕಿ ಕೆಲವರಲ್ಲಿ ಅತಿರೇಕದ ವರ್ತನೆಗೆ ಕಾರಣವಾಗಿ ಟ್ವಿಟರ್ ನಲ್ಲಿ ವ್ಯಕ್ತಿಯೋರ್ವ ವಿರಾಟ್ ಕೊಹ್ಲಿ- ಅನುಷ್ಕಾ ಶರ್ಮಾ ಮಗುವಿಗೆ ಅತ್ಯಾಚಾರದ ಬೆದರಿಕೆ ಹಾಕಿದ್ದ.
ಈ ಘಟನೆಯ ಬಗ್ಗೆ ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡಿದ್ದ ದೆಹಲಿಯ ಮಹಿಳಾ ಆಯೋಗ ಪ್ರಕರಣದಲ್ಲಿ ಎಫ್ಐಆರ್ ದಾಖಲಿಸಿರುವುದು, ಆರೋಪಿಯ ಗುರುತು, ಬಂಧನ, ಕೈಗೊಳ್ಳಲಾಗಿರುವ ಕ್ರಮಗಳ ಬಗ್ಗೆ ವಿವರವಾಗಿ ನ.08 ರ ವೇಳೆಗೆ ತಿಳಿಸಬೇಕೆಂದು ದೆಹಲಿಯ ಡಿಸಿಪಿ ಅವರನ್ನು ಕೇಳಿದೆ.
ಕೊಹ್ಲಿ ಪುತ್ರಿಗೆ ಅತ್ಯಾಚಾರದ ಬೆದರಿಕೆ ಹಾಕಿದ್ದ ಟ್ವಿಟರ್ ಹ್ಯಾಂಡಲ್ ಈಗ ಡಿಲೀಟ್ ಆಗಿದೆ. ಆ ವ್ಯಕ್ತಿಯ ಗುರುತನ್ನು ಇನ್ನಷ್ಟೇ ಪತ್ತೆ ಮಾಡಬೇಕಿದ್ದು, ಸ್ಕ್ರೀನ್ ಶಾಟ್ ಗಳು ವೈರಲ್ ಆಗತೊಡಗಿವೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


