ಅಕ್ರಮ ಹಣ ವರ್ಗಾವಣೆ ಪ್ರಕರಣ: ಮಹಾರಾಷ್ಟ್ರ ಮಾಜಿ ಸಚಿವ ಅನಿಲ್ ದೇಶಮುಖ್ ನವೆಂಬರ್ 6 ರವರೆಗೆ ಇಡಿ ವಶಕ್ಕೆ
ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಮಹಾರಾಷ್ಟ್ರದ ಮಾಜಿ ಗೃಹ ಸಚಿವ ಅನಿಲ್ ದೇಶಮುಖ್ ಅವರನ್ನು ಮುಂಬೈ ನ್ಯಾಯಾಲಯ ಮಂಗಳವಾರ ನವೆಂಬರ್ 6 ರವರೆಗೆ ಜಾರಿ ನಿರ್ದೇಶನಾಲಯ(ಇಡಿ)ದ ಕಸ್ಟಡಿಗೆ ಒಪ್ಪಿಸಿದೆ.

ಮುಂಬೈ: ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಮಹಾರಾಷ್ಟ್ರದ ಮಾಜಿ ಗೃಹ ಸಚಿವ ಅನಿಲ್ ದೇಶಮುಖ್ ಅವರನ್ನು ಮುಂಬೈ ನ್ಯಾಯಾಲಯ ಮಂಗಳವಾರ ನವೆಂಬರ್ 6 ರವರೆಗೆ ಜಾರಿ ನಿರ್ದೇಶನಾಲಯ(ಇಡಿ)ದ ಕಸ್ಟಡಿಗೆ ಒಪ್ಪಿಸಿದೆ.
ರಾಜ್ಯ ಪೊಲೀಸ್ ಇಲಾಖೆಯ ಮೂಲಕ ಹಣ ಸುಲಿಗೆ ಪ್ರಕರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಸುಮಾರು 12 ಗಂಟೆಗಳ ಕಾಲ ವಿಚಾರಣೆಯ ನಂತರ ಸೋಮವಾರ ತಡರಾತ್ರಿ ದೇಶಮುಖ್ ಅವರನ್ನು ಇಡಿ ಬಂಧಿಸಿದ್ದು, ಇಂದು ವಿಶೇಷ ರಜಾ ನ್ಯಾಯಾಲಯಕ್ಕೆ ಹಾಜರುಪಡಿಸಿತು ಮತ್ತು ಹೆಚ್ಚಿನ ವಿಚಾರಣೆಗಾಗಿ ಆರೋಪಿಯನ್ನು 14 ದಿನ ತನ್ನ ವಶಕ್ಕೆ ನೀಡುವಂತೆ ಮನವಿ ಮಾಡಿತು.
ಆರೋಪಿಯ ವಿಚಾರಣೆ ನಡೆಸಿದ ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ ಪಿಬಿ ಜಾಧವ್ ಅವರು ಮಹಾರಾಷ್ಟ್ರ ಮಾಜಿ ಗೃಹ ಸಚಿವರನ್ನು ಹೆಚ್ಚಿನ ವಿಚಾರಣೆಗಾಗಿ ನವೆಂಬರ್ 6 ರವರೆಗೆ ಇಡಿ ವಶಕ್ಕೆ ನೀಡಿ ಆದೇಶಿಸಿದ್ದಾರೆ.
ದೇಶಮುಖ್ ಅವರು ರಾಜ್ಯದ ಗೃಹ ಸಚಿವರಾಗಿದ್ದಾಗ ತಮ್ಮ ಅಧಿಕೃತ ಸ್ಥಾನವನ್ನು ದುರುಪಯೋಗಪಡಿಸಿಕೊಂಡು, ವಜಾಗೊಂಡ ಪೊಲೀಸ್ ಅಧಿಕಾರಿ ಸಚಿನ್ ವಾಜೆ ಮೂಲಕ ಮುಂಬೈನ ವಿವಿಧ ಬಾರ್ ಮತ್ತು ರೆಸ್ಟೋರೆಂಟ್ಗಳಿಂದ 4.70 ಕೋಟಿ ರೂಪಾಯಿ ಸಂಗ್ರಹಿಸಿದ್ದಾರೆ ಎಂದು ಇಡಿ ಆರೋಪಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


