'ಪಂಜಾಬ್ ಲೋಕ್ ಕಾಂಗ್ರೆಸ್': ಕಾಂಗ್ರೆಸ್ ತೊರೆದ ಅಮರಿಂದರ್ ಸಿಂಗ್ ರಿಂದ ಹೊಸ ಪಕ್ಷ ಘೋಷಣೆ
ಪಂಜಾಬ್ ಮಾಜಿ ಮುಖ್ಯಮಂತ್ರಿ ಕ್ಯಾಪ್ಟನ್ ಅಮರಿಂದರ್ ಸಿಂಗ್ ಅವರು ಮಂಗಳವಾರ ಕಾಂಗ್ರೆಸ್ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದು, ತಮ್ಮದೇ ಹೊಸ ರಾಜಕೀಯ ಪಕ್ಷವನ್ನು ಘೋಷಿಸಿದ್ದಾರೆ.

ಚಂಡೀಗಢ: ಪಂಜಾಬ್ ಮಾಜಿ ಮುಖ್ಯಮಂತ್ರಿ ಕ್ಯಾಪ್ಟನ್ ಅಮರಿಂದರ್ ಸಿಂಗ್ ಅವರು ಮಂಗಳವಾರ ಕಾಂಗ್ರೆಸ್ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದು, ತಮ್ಮದೇ ಹೊಸ ರಾಜಕೀಯ ಪಕ್ಷವನ್ನು ಘೋಷಿಸಿದ್ದಾರೆ.
ಕ್ಯಾಪ್ಟನ್ ಅಮರಿಂದರ್ ಸಿಂಗ್ ಅವರು ತಮ್ಮ ಹೊಸ ಪಕ್ಷದ ಹೆಸರು ಪಂಜಾಬ್ ಲೋಕ್ ಕಾಂಗ್ರೆಸ್ ಎಂದು ಘೋಷಿಸಿದ್ದಾರೆ.
ತಮ್ಮ ಹೊಸ ಪಕ್ಷದ ಹೆಸರನ್ನು ಬಹಿರಂಗಪಡಿಸಿದ ಕ್ಯಾಪ್ಟನ್ ಅಮರಿಂದರ್ ಸಿಂಗ್, ನಾವು ನಮ್ಮದೇ ಆದ ಪಕ್ಷವನ್ನು ರಚಿಸುವುದಾಗಿ ಮೊದಲೇ ಘೋಷಿಸಿದ್ದರಿಂದ, ನಮ್ಮ ವಕೀಲರ ತಂಡವು ಈ ಪ್ರಕ್ರಿಯೆಯಲ್ಲಿ ಕೆಲಸ ಮಾಡುತ್ತಿದೆ. ನೋಂದಣಿಗಾಗಿ ಭಾರತದ ಚುನಾವಣಾ ಆಯೋಗಕ್ಕೆ ಅರ್ಜಿ ಸಲ್ಲಿಸಲಾಗಿದೆ. ಪ್ರಸ್ತಾವಿತ ಹೆಸರಿಗೆ ಚುನಾವಣಾ ಆಯೋಗದ ಅಭ್ಯಂತರವಿಲ್ಲ ಎಂದರು.
ಪಂಜಾಬ್ ಮಾಜಿ ಸಿಎಂ ಏಳು ಪುಟಗಳ ರಾಜೀನಾಮೆ ಪತ್ರವನ್ನು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ಕಳುಹಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಇದನ್ನು ಓದಿ: ಬಿಜೆಪಿ ಮತ್ತು ಬಂಡಾಯ ಅಕಾಲಿ ನಾಯಕರೊಂದಿಗೆ ಮೈತ್ರಿಗೆ ಮುಕ್ತ: ಪಕ್ಷ ರಚನೆ ಘೋಷಣೆ ನಂತರ ಕ್ಯಾ.ಅಮರಿಂದರ್ ಸಿಂಗ್ ಹೇಳಿಕೆ
ಪಂಜಾಬ್ ವಿಧಾನಸಭಾ ಚುನಾವಣೆಗೆ ಕೆಲವೇ ತಿಂಗಳುಗಳು ಬಾಕಿ ಇರುವ ಹಿನ್ನೆಲೆಯಲ್ಲಿ ಅಮರಿಂದರ್ ಸಿಂಗ್ ಅವರು ತಮ್ಮದೇ ಆದ ರಾಜಕೀಯ ಪಕ್ಷ ಸ್ಥಾಪಿಸಿದ್ದು, ಬಿಜೆಪಿ ಜೊತೆ ಮೈತ್ರಿ ಮಾಡಿಕೊಂಡು ಚುನಾವಣೆ ಎದುರಿಸುವ ಸಾಧ್ಯತೆ ಇದೆ.
ಕೆಲವು ದಿನಗಳ ಹಿಂದಷ್ಟೇ ಕೇಂದ್ರದ ವಿವಾದಿತ ಕೃಷಿ ಕಾನೂನುಗಳ ವಿರುದ್ಧ ನಡೆಯುತ್ತಿರುವ ರೈತರ ಹೋರಾಟವನ್ನು ರೈತ ಹಿತಾಸಕ್ತಿಯಿಂದ ಬಗೆಹರಿಸಿದರೆ ಬಿಜೆಪಿಯೊಂದಿಗೆ ಸೀಟು ಹೊಂದಾಣಿಕೆ ಮಾಡಿಕೊಳ್ಳುವುದಾಗಿ ಅಮರಿಂದರ್ ಸಿಂಗ್ ಅವರು ಹೇಳಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


