ಕನಿಷ್ಟ 22 ರಾಜ್ಯ, ಕೇಂದ್ರಾಡಳಿತ ಪ್ರದೇಶಗಳು ಎಲ್ಲಾ ವಿದ್ಯಾರ್ಥಿಗಳಿಗೂ ಶಾಲೆ ತೆರೆದಿವೆ, ಶೇ.92 ರಷ್ಟು ಶಿಕ್ಷಕರಿಗೆ ಲಸಿಕೆ
ಕೋವಿಡ್-19 ನ ಉಪಟಳದ ನಂತರ ದೇಶಾದ್ಯಂತ ಕನಿಷ್ಟ 22 ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳು ಎಲ್ಲಾ ವಿದ್ಯಾರ್ಥಿಗಳಿಗೂ ಶಾಲೆಗಳನ್ನು ತೆರೆದಿದ್ದು ಭಾರತದಾದ್ಯಂತ ಶೇ.92 ರಷ್ಟು ಶಿಕ್ಷಕರಿಗೆ ಲಸಿಕೆ ನೀಡಲಾಗಿದೆ.

ನವದೆಹಲಿ: ಕೋವಿಡ್-19 ನ ಉಪಟಳದ ನಂತರ ದೇಶಾದ್ಯಂತ ಕನಿಷ್ಟ 22 ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳು ಎಲ್ಲಾ ವಿದ್ಯಾರ್ಥಿಗಳಿಗೂ ಶಾಲೆಗಳನ್ನು ತೆರೆದಿದ್ದು ಭಾರತದಾದ್ಯಂತ ಶೇ.92 ರಷ್ಟು ಶಿಕ್ಷಕರಿಗೆ ಲಸಿಕೆ ನೀಡಲಾಗಿದೆ ಎಂದು ಕೇಂದ್ರ ಶಿಕ್ಷಣ ಸಚಿವಾಲಯ ತಿಳಿಸಿದೆ.
ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಶಾಲೆಗಳ ಪುನಾರಂಭವನ್ನು ನ.02 ರಂದು ಪರಿಶೀಲನೆ ಮಾಡಿದ್ದು, ಶಿಕ್ಷಣ ಕ್ಷೇತ್ರದಲ್ಲಿ ಸಹಜ ಸ್ಥಿತಿಯನ್ನು ಮರಳಿ ತರಬೇಕು ಹಾಗೂ ಲಸಿಕೆ ಪ್ರಮಾಣ ಹೆಚ್ಚಳವಾಗಬೇಕು ಎಂದು ಕರೆ ನೀಡಿದ್ದಾರೆ.
ಸಚಿವಾಲಯ ಹಂಚಿಕೊಂಡಿರುವ ಅಂಕಿ-ಅಂಶಗಳ ಪ್ರಕಾರ ಶೇ.92 ರಷ್ಟು ಬೋಧಕ ಸಿಬ್ಬಂದಿಗಳಿಗೆ ಈಗಾಗಲೇ ಲಸಿಕೆ ನೀಡಲಾಗಿದೆ. ಕೇಂದ್ರ ಸರ್ಕಾರಿ ಸ್ವಾಮ್ಯದ ಶಿಕ್ಷಣ ಸಂಸ್ಥೆಗಳ ಬೋಧಕ ಸಿಬ್ಬಂದಿಗಳ ಪೈಕಿ ಶೇ.96 ರಷ್ಟು ಮಂದಿಗೆ ಲಸಿಕೆ ನೀಡಲಾಗಿದ್ದರೆ, ಶೇ.86 ರಷ್ಟು ಬೋಧಕೇತರ ಸಿಬ್ಬಂದಿಗಳು ಲಸಿಕೆ ಪಡೆದಿದ್ದಾರೆ.
ಕೋವಿಡ್-19 ಸೋಂಕು ತೀವ್ರವಾಗಿದ್ದರಿಂದ ಕಳೆದ ವರ್ಷ ಮಾರ್ಚ್ ನಿಂದ ರಾಷ್ಟ್ರವ್ಯಾಪಿ ಲಾಕ್ ಡೌನ್ ನ ಪರಿಣಾಮದಿಂದ ಶಾಲೆಗಳು ಮುಚ್ಚಲ್ಪಟ್ಟಿದ್ದವು. ಆನ್ ಲೈನ್ ತರಗತಿಗಳನ್ನು ನಡೆಸಲಾಗುತ್ತಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


