ಈ ಬಾರಿಯೂ ಸೇನೆಯೊಂದಿಗೆ ದೀಪಾವಳಿ ಆಚರಣೆ: ನೌಶೆರಾ ತಲುಪಿದ ಪ್ರಧಾನಿ ಮೋದಿ, ಹುತಾತ್ಮ ಯೋಧರಿಗೆ ಗೌರವ ನಮನ
ಪ್ರತೀ ವರ್ಷದಂತೆ ಈ ವರ್ಷ ಕೂಡ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ದೇಶ ಕಾಯುವ ವೀರ ಯೋಧರೊಂದಿಗೆ ದೀಪಾವಳಿ ಆಚರಿಸಲಿದ್ದು, ಈ ಹಿನ್ನೆಲೆಯಲ್ಲಿ ರಜೌರಿಯ ನೌಶೆರಾಗೆ ಭೇಟಿ ನೀಡಿದ್ದಾರೆಂದು ತಿಳಿದುಬಂದಿದೆ.

ನವದೆಹಲಿ: ಪ್ರತೀ ವರ್ಷದಂತೆ ಈ ವರ್ಷ ಕೂಡ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ದೇಶ ಕಾಯುವ ವೀರ ಯೋಧರೊಂದಿಗೆ ದೀಪಾವಳಿ ಆಚರಿಸಲಿದ್ದು, ಈ ಹಿನ್ನೆಲೆಯಲ್ಲಿ ರಜೌರಿಯ ನೌಶೆರಾಗೆ ಭೇಟಿ ನೀಡಿದ್ದಾರೆಂದು ತಿಳಿದುಬಂದಿದೆ.
ಇಂದು ಪ್ರಧಾನಿ ಮೋದಿಯವರು ರಜೌರಿಯ ನೌಶೇರಾದಲ್ಲಿರುವ ಎಲ್‌ಒಸಿಯ ಫಾರ್ವರ್ಡ್ ಪೋಸ್ಟ್‌ಗಳಲ್ಲಿ ಸೈನಿಕರ ನಡುವೆ ದೀಪಾವಳಿ ಆಚರಿಸಲಿದ್ದಾರೆ.
2019ರಲ್ಲಿಯೂ ಪ್ರಧಾನಿಯವರು ರಾಜೌರಿಯ ಮುಂಭಾಗದ ಪ್ರದೇಶದಲ್ಲಿ ದೀಪಾವಳಿಯನ್ನು ಆಚರಿಸುವ ಮೂಲಕ ಸೈನಿಕರ ಸ್ಥೈರ್ಯವನ್ನು ಹೆಚ್ಚಿಸಿದ್ದರು.
ರಜೌರಿ-ಪೂಂಚ್ ಗಡಿ ಪ್ರದೇಶದಲ್ಲಿ ಉಗ್ರರ ವಿರುದ್ಧ 3 ವಾರಗಳ ಸುದೀರ್ಘ ಕಾರ್ಯಾಚರಣೆಯ ನಡುವೆಯೇ ಪ್ರಧಾನಿ ಭೇಟಿ ನೀಡುತ್ತಿದ್ದು ಈ ಹಿನ್ನೆಲೆಯಲ್ಲಿ ಸ್ಥಳದಲ್ಲಿ ತೀವ್ರ ಭದ್ರತಾ ವ್ಯವಸ್ಥೆಗಳನ್ನು ಕೈಗೊಳ್ಳಲಾಗಿದೆ.
ಹುತಾತ್ಮರ ಯೋಧರಿಗೆ ಗೌರವ ನಮನ
ದೇಶದ ಗಡಿ ಕಾಯುವ ವೀರ ಯೋಧರೊಂದಿಗೆ ದೀಪಾವಳಿ ಆಚರಣೆ ಮಾಡುವ ಸಲುವಾಗಿ ಜಮ್ಮು ಮತ್ತು ಕಾಶ್ಮೀರದ ನೌಶೆರಾಗೆ ಭೇಟಿ ನೀಡಿರುವ ಪ್ರಧಾನಮಂತ್ರಿ ನರೇಂದ್ರ ಮೋದಿಯವರು, ಇದೇ ವೇಳೆ ಹುತಾತ್ಮ ಯೋಧರಿಗೆ ಗೌರವ ನಮನಗಳನ್ನು ಸಲ್ಲಿಸಿದ್ದಾರೆ.
ದೇಶದ ಪ್ರಧಾನಮಂತ್ರಿಗಳಾದ ಬಳಿಕ ಮೋದಿ ಅವರು ಜಮ್ಮು ಮತ್ತು ಕಾಶ್ಮೀರ ಮತ್ತು ಲಡಾಖ್ ಗಡಿಯಲ್ಲಿ 5ನೇ ಬಾರಿಗೆ ದೀಪಾವಳಿಯನ್ನು ಆಚರಿಸಲಿದ್ದಾರೆ. ಇದಕ್ಕೂ ಮುನ್ನ ಅವರು 2014ರಲ್ಲಿ ಸಿಯಾಚಿನ್ ಗೆ ತೆರಳಿದ್ದರು. ಇಲ್ಲಿ ದೀಪಾವಳಿ ಆಚರಿಸಿ ಶ್ರೀನಗರಕ್ಕೂ ಹೋಗಿದ್ದರು. 2017 ರಲ್ಲಿ ಅವರು ಕಾಶ್ಮೀರದ ಬಂಡಿಪೋರಾದಲ್ಲಿ ಸೇನೆ ಮತ್ತು ಬಿಎಸ್‌ಎಫ್ ಸಿಬ್ಬಂದಿಯೊಂದಿಗೆ ದೀಪಾವಳಿಯನ್ನು ಆಚರಿಸಿದ್ದರು.
2019 ರಲ್ಲಿ, ಅವರು ರಜೌರಿಯ ಪದಾತಿ ದಳಕ್ಕೆ ತೆರಳಿ ಸೈನಿಕರೊಂದಿಗೆ ದೀಪಾವಳಿಯನ್ನು ಸಂಭ್ರಮಿಸಿದ್ದರು. ಅದೇ ರೀತಿ, 2020 ರಲ್ಲಿ ರಾಜಸ್ಥಾನದ ಜೈಸಲ್ಮೇರ್‌ನಲ್ಲಿರುವ ಲಾಂಗಾವಾಲಾ ಗಡಿಯಲ್ಲಿ ಸೈನಿಕರೊಂದಿಗೆ ದೀಪಾವಳಿಯನ್ನು ಆಚರಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


