ಅತ್ಯಾಚಾರ-ಕೊಲೆ ಪ್ರಕರಣದಲ್ಲಿ ಸಂತ್ರಸ್ತರ ಕಡಿಮೆ ವಯಸ್ಸು ಮರಣದಂಡನೆ ವಿಧಿಸಲು ಮುಖ್ಯವಾಗುವುದಿಲ್ಲ: ಸುಪ್ರೀಂ ಕೋರ್ಟ್
ಅತ್ಯಾಚಾರ ಮತ್ತು ಕೊಲೆ ಪ್ರಕರಣಗಳಲ್ಲಿ ಸಂತ್ರಸ್ತರ ಕಡಿಮೆ ವಯಸ್ಸು ಮರಣದಂಡನೆ ವಿಧಿಸಲು ಈ ನ್ಯಾಯಾಲಯವು ಏಕೈಕ ಅಥವಾ ಮುಖ್ಯ ಅಂಶ ಎಂದು ಪರಿಗಣಿಸಿಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿದೆ.

ನವದೆಹಲಿ: ಅತ್ಯಾಚಾರ ಮತ್ತು ಕೊಲೆ ಪ್ರಕರಣಗಳಲ್ಲಿ ಸಂತ್ರಸ್ತರ ಕಡಿಮೆ ವಯಸ್ಸು ಮರಣದಂಡನೆ ವಿಧಿಸಲು ಈ ನ್ಯಾಯಾಲಯವು ಏಕೈಕ ಅಥವಾ ಮುಖ್ಯ ಅಂಶ ಎಂದು ಪರಿಗಣಿಸಿಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿದೆ.
ಕಳೆದ 40 ವರ್ಷಗಳಲ್ಲಿ ವಿಚಾರಣೆಗೆ ಕೈಗೆತ್ತಿಕೊಂಡ ಇದೇ ರೀತಿಯ 67 ಪ್ರಕರಣಗಳನ್ನು ಉಲ್ಲೇಖಿಸಿ ಕೋರ್ಟ್ ಈ ರೀತಿ ಹೇಳಿದೆ. ಕರ್ನಾಟಕದ ಬೆಳಗಾವಿಯ ಖಾನಾಪುರದ ಈರಪ್ಪ ಸಿದ್ದಪ್ಪ ಎಂಬುವವರು ಬಾಲಕಿಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಮರಣ ದಂಡನೆಗೆ ಗುರಿಯಾಗಿದ್ದರು. ಕರ್ನಾಟಕ ಹೈಕೋರ್ಟ್ ಮಾರ್ಚ್ 6, 2017 ರಂದು ಅವರಿಗೆ ಈ ಶಿಕ್ಷೆ ವಿಧಿಸಿತ್ತು. ಇದನ್ನು ಪ್ರಶ್ನಿಸಿ ಅರ್ಜಿ ಸಲ್ಲಿಸಲಾಗಿದ್ದು, ಇದರ ವಿಚಾರಣೆ ವೇಳೆ ಸುಪ್ರೀಂಕೋರ್ಟ್ ಈ ಅಭಿಪ್ರಾಯ ವ್ಯಕ್ತಪಡಿಸಿತು.
2010 ರಲ್ಲಿ ಕರ್ನಾಟಕದ ಖಾನಾಪುರ ಗ್ರಾಮದಲ್ಲಿ ಐದು ವರ್ಷದ ಬಾಲಕಿಯನ್ನು ಅಪಹರಿಸಿ, ಅತ್ಯಾಚಾರ ಮತ್ತು ಕೊಲೆ ಮಾಡಿದ ಪ್ರಕರಣದಲ್ಲಿ ಅಪರಾಧಿ ಎಂದು ಕೋರ್ಟ್ ತೀರ್ಪು ನೀಡಿತ್ತು. ಅಲ್ಲದೇ ಅಪರಾಧಿ ಸಂತ್ರಸ್ತೆಯ ಶವವನ್ನು ಚೀಲದಲ್ಲಿ ಕಟ್ಟಿಹಾಕಿ ಬೆನ್ನಿಹಳ್ಳ ಹೊಳೆಗೆ ಎಸೆದಿದ್ದ.
ಹೈಕೋರ್ಟ್ನ ನ್ಯಾಯಮೂರ್ತಿಗಳಾದ ಎಲ್ ನಾಗೇಶ್ವರ ರಾವ್, ಸಂಜೀವ್ ಖನ್ನಾ ಮತ್ತು ಬಿಆರ್ ಗವಾಯಿ ಅವರನ್ನೊಳಗೊಂಡ ಪೀಠವು ಸಿದ್ದಪ್ಪನಿಗೆ ಸೆಷನ್ಸ್ ನ್ಯಾಯಾಲಯ ವಿಧಿಸಿದ್ದ ಗಲ್ಲು ಶಿಕ್ಷೆಯನ್ನು ರದ್ದುಗೊಳಿಸಿತ್ತು. ಕಾರಣ ಸಂತ್ರಸ್ತೆ ಅಪ್ರಾಪ್ತೆ ಎಂದು 30 ವರ್ಷಗಳ ಅವಧಿಗೆ ಜೀವಾವಧಿ ಶಿಕ್ಷೆ ನೀಡಿತ್ತು.
ಈ ಸಂಬಂಧ ಸುಪ್ರೀಕೋರ್ಟ್ಗೆ ಅರ್ಜಿ ಸಲ್ಲಿಸಲಾಗಿತ್ತು. ಕೋರ್ಟ್ ಸುಮಾರು 40 ವರ್ಷಗಳ 67 ಪ್ರಕರಣಗಳ ತೀರ್ಪುಗಳನ್ನು ಪರಿಶೀಲಿಸಿ, ಸಂತ್ರಸ್ತೆ ವಯಸ್ಸು ಮರಣದಂಡನೆಗೆ ಮುಖ್ಯವಾಗುವುದಿಲ್ಲ ಎಂದಿದೆ. ಈ 67 ಪ್ರಕರಣಗಳಲ್ಲಿ ನ್ಯಾಯಾಲಯವು 15 ಪ್ರಕರಣಗಳಲ್ಲಿ ಆರೋಪಿಗಳಿಗೆ ಮರಣದಂಡನೆ ಶಿಕ್ಷೆಯನ್ನು ನೀಡಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


