ದೇಶ

ಉತ್ತರ ಪ್ರದೇಶ: ದಂತವೈದ್ಯನಿಂದ ಮಹಿಳೆ ಪ್ರಜ್ಞಾಹೀನಗೊಳಿಸಿ ಅತ್ಯಾಚಾರ, ವಿಡಿಯೋ ಚಿತ್ರೀಕರಣ!

ದಂತವೈದ್ಯನೊಬ್ಬ 32 ವರ್ಷದ ಮಹಿಳೆಯನ್ನು ಪ್ರಜ್ಞಾಹೀನಗೊಳಿಸಿ, ಆಕೆಯ ಮೇಲೆ ಅತ್ಯಾಚಾರವೆಸಗಿರುವ ಘಟನೆ ಉತ್ತರಪ್ರದೇಶದಲ್ಲಿ ನಡೆದಿದೆ.

ಉತ್ತರ ಪ್ರದೇಶ: ದಂತವೈದ್ಯನಿಂದ ಮಹಿಳೆ ಪ್ರಜ್ಞಾಹೀನಗೊಳಿಸಿ ಅತ್ಯಾಚಾರ, ವಿಡಿಯೋ ಚಿತ್ರೀಕರಣ!
ಸಂಗ್ರಹ ಚಿತ್ರ
Published On :

ಲಖನೌ: ದಂತವೈದ್ಯನೊಬ್ಬ 32 ವರ್ಷದ ಮಹಿಳೆಯನ್ನು ಪ್ರಜ್ಞಾಹೀನಗೊಳಿಸಿ, ಆಕೆಯ ಮೇಲೆ ಅತ್ಯಾಚಾರವೆಸಗಿರುವ ಘಟನೆ ಉತ್ತರಪ್ರದೇಶದಲ್ಲಿ ನಡೆದಿದೆ.

ಮಹಿಳೆಗೆ ಚುಚ್ಚುಮದ್ದನ್ನು ನೀಡಿ ಆಕೆಯನ್ನು ಪ್ರಜ್ಞಾಹೀನಗೊಳಿಸಿ ಆರೋಪಿ ಈ ಕೃತ್ಯವೆಸಗಿದ್ದಾನೆ. ಅಲ್ಲದೇ  ಘಟನೆಯ ವಿಡಿಯೋವನ್ನು ಕೂಡ ಚಿತ್ರೀಕರಿಸಿದ್ದಾರೆ. ದಂತವೈದ್ಯನನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಸಂತ್ರಸ್ತೆ ಹಲ್ಲುನೋವಿನಿಂದ ಬಳಲುತ್ತಿದ್ದು, ಅಕ್ಟೋಬರ್ 16 ರಂದು ಸೈದ್ ಪುರ ಹಾಕಿನ್ಸ್ ಪ್ರದೇಶದ ದಂತ ಚಿಕಿತ್ಸಾಲಯಕ್ಕೆ ಬಂದಿದ್ದರು. ಅಲ್ಲಿ ದಂತವೈದ್ಯ ಆಕೆಯ ಹಲ್ಲು ತೆಗೆಯಬೇಕು ಎಂದು ಹೇಳಿದ್ದಾನೆ ಎಂದು ಪೊಲೀಸ್ ವರಿಷ್ಠಾಧಿಕಾರಿ(ನಗರ) ರವೀಂದ್ರ ಕುಮಾರ್ ತಿಳಿಸಿದ್ದಾರೆ.

ವೈದ್ಯರ ವಿರುದ್ಧ ಇಜ್ಜತ್‌ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಠಾಣೆ ಪೊಲೀಸರು ಆತನನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಅಲ್ಲಿಂದ ಅವರನ್ನು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಕಳುಹಿಸಲಾಗಿದೆ.

ಮಹಿಳೆಯ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪ್ರಾಥಮಿಕ ತನಿಖೆಯಲ್ಲಿ ಮಹಿಳೆ ಮೇಲೆ ಅತ್ಯಾಚಾರ ನಡೆದಿರುವುದು ದೃಢಪಟ್ಟಿದೆ. ನ್ಯಾಯಾಲಯಕ್ಕೆ ಹಾಜರುಪಡಿಸಿದ ನಂತರ ವೈದ್ಯರನ್ನು ಜೈಲಿಗೆ ಕಳುಹಿಸಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.