ದೇಶ

ಸುಪ್ರೀಂ ಕೋರ್ಟಿನ ಅಯೋಧ್ಯೆ ತೀರ್ಪನ್ನು ನನ್ನ ಬಾಂಧವರಿಗೆ ವಿವರಿಸಬೇಕಾಗಿದ್ದು ನನ್ನ ಹೊಣೆಯಾಗಿತ್ತು: ಸಲ್ಮಾನ್ ಖುರ್ಷಿದ್

ಅಯೋಧ್ಯೆ ತೀರ್ಪು ಹೊರಬೀಳಲು 100 ವರ್ಷಗಳು ಬೇಕಾಗುತ್ತದೆ ಎಂದು ಜನರು ಮಾತಾಡಿಕೊಳ್ಳುತ್ತಿದ್ದರು. ಆದರೆ ಅಯೋಧ್ಯೆ ತೀರ್ಪು ಹೊರಬಿದ್ದ ನಂತರ ಜನರು ತೀರ್ಪಿನಲ್ಲಿ ಏನಿದೆ ಎಂಬುದನ್ನು ತಿಳಿದುಕೊಳ್ಳದೆಯೇ ಅದರ ಬಗ್ಗೆ ನಾನಾ ರೀತಿಯಲ್ಲಿ ಮಾತಾಡಿಕೊಂಡರು.

ಸುಪ್ರೀಂ ಕೋರ್ಟಿನ ಅಯೋಧ್ಯೆ ತೀರ್ಪನ್ನು ನನ್ನ ಬಾಂಧವರಿಗೆ ವಿವರಿಸಬೇಕಾಗಿದ್ದು ನನ್ನ ಹೊಣೆಯಾಗಿತ್ತು: ಸಲ್ಮಾನ್ ಖುರ್ಷಿದ್
ಕಾಂಗ್ರೆಸ್ ಮುಖಂಡ ಸಲ್ಮಾನ್ ಖುರ್ಷಿದ್
Published On :

ನವದೆಹಲಿ: ಮಾಜಿ ಕೇಂದ್ರ ಸಚಿವ, ಕಾಂಗ್ರೆಸ್ ಮುಖಂಡ ಸಲ್ಮಾನ್ ಖುರ್ಷಿದ್ ಅವರು ಅಯೋಧ್ಯೆ ತೀರ್ಪು ಕುರಿತು ಪುಸ್ತಕವೊಂದನ್ನು ಹೊರತಂದಿದ್ದಾರೆ. ಬಿಡುಗಡೆ ಸಂದರ್ಭ ಸುದ್ದಿಗಾರರೊಡನೆ ಮಾತನಾಡಿದ ಅವರು ಸುಪ್ರೀಂ ಕೋರ್ಟ್ ನೀಡಿದ ಅಯೋಧ್ಯೆ ತೀರ್ಪನ್ನು ತಮ್ಮ ಬಾಂಧವರಿಗೆ ವಿವರಿಸುವ ಗುರುತರವಾದ ಜವಾಬ್ದಾರಿ ತಮ್ಮ ಮೇಲಿತ್ತು ಎಂದು ಹೇಳಿದ್ದಾರೆ.

ಅಯೋಧ್ಯೆ ತೀರ್ಪು ಹೊರಬೀಳಲು 100 ವರ್ಷಗಳು ಬೇಕಾಗುತ್ತದೆ ಎಂದು ಜನರು ಮಾತಾಡಿಕೊಳ್ಳುತ್ತಿದ್ದರು. ಆದರೆ ಅಯೋಧ್ಯೆ ತೀರ್ಪು ಹೊರಬಿದ್ದ ನಂತರ ಜನರು ತೀರ್ಪಿನಲ್ಲಿ ಏನಿದೆ ಎಂಬುದನ್ನು ತಿಳಿದುಕೊಳ್ಳದೆಯೇ ಅದರ ಬಗ್ಗೆ ನಾನಾ ರೀತಿಯಲ್ಲಿ ಮಾತಾಡಿಕೊಂಡರು. 

ಆ ಸಮಯದಲ್ಲಿ ತೀರ್ಪಿನ ಬಗ್ಗೆ ವಿವರಣೆ ನೀಡಬೇಕಾದ ಅಗತ್ಯತೆ ಇತ್ತು. ಮೊದಲು ನ್ಯಾಯಾಲಯದ ತೀರ್ಪನ್ನು ಸ್ವೀಕರಿಸಿದೆ. ಈಗಾಗಲೇ ದೇಶದಲ್ಲಿ ಉದ್ಭವವಾಗಿರುವ ಧಾರ್ಮಿಕ ಸಂಧಿಗ್ಧತೆ ವಾತಾವರಣ ಇರುವುದರಿಂದ ಅದಕ್ಕೆ ಮುಲಾಮು ಹಚ್ಚುವ ಪ್ರಯತ್ನವಾಗಿತ್ತು ಅದು ಎಂದು ಅವರು ತಿಳಿಸಿದ್ದಾರೆ. 

ಸುಪ್ರೀಂ ಕೋರ್ಟ್ ನವೆಂಬರ್ 9, 2019ರಂದು 2.77 ಎಕರೆಯಷ್ಟು ವಿವಾದಾತ್ಮಕ ಪ್ರದೇಶವನ್ನು ಟ್ರಸ್ಟ್ ಗೆ ಹಸ್ತಾಂತರಿಸಲು ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಿತ್ತು. 

Related Article

'ಕಾಂಗ್ರೆಸ್ ಆಡಳಿತದಲ್ಲಿ ರಫೇಲ್ ಕಿಕ್ ಬ್ಯಾಕ್, 'ಐಎನ್‌ಸಿ ಎಂದರೆ ಐ ನೀಡ್ ಕಮಿಷನ್': ಬಿಜೆಪಿ ತಿರುಗೇಟು

ರಾಜಕೀಯ ಲಾಭಕ್ಕಾಗಿ ಮೇಕೆದಾಟು ಪಾದಯಾತ್ರೆ ಹೈಜಾಕ್: ಕಾಂಗ್ರೆಸ್ ವಿರುದ್ಧ ದೇವೇಗೌಡ ಕಿಡಿ!

ರಾಜ್ಯ ನಾಯಕತ್ವ ಬದಲಾವಣೆ ಕುರಿತು ಕಾಂಗ್ರೆಸ್ ವದಂತಿ ಹಬ್ಬಿಸುತ್ತಿದೆ: ಅರುಣ್ ಸಿಂಗ್

ಯುಪಿಎ ವಿರುದ್ಧ ಷಡ್ಯಂತ್ರ ರೂಪಿಸಿದ್ದಕ್ಕೆ ಪ್ರಧಾನಿ ನರೇಂದ್ರ ಮೋದಿ, ಮಾಜಿ ಸಿಎಜಿ ವಿನೋದ್ ರಾಯ್ ಕ್ಷಮೆ ಕೋರಬೇಕು: ಕಾಂಗ್ರೆಸ್

ಸಿದ್ದರಾಮಯ್ಯ 'ನಾಯಕತ್ವ' ಹಾಗೂ ಶಿವಕುಮಾರ್ 'ಮಾರ್ಗದರ್ಶನದಲ್ಲಿ' ಚುನಾವಣೆ: ಉರಿವ ಬೆಂಕಿಗೆ ತುಪ್ಪ ಸುರಿದ ಕಾಂಗ್ರೆಸ್ ಶಾಸಕ!

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.