ಕುಲ್ಗಾಂನಲ್ಲಿ ಎನ್ಕೌಂಟರ್: ಹಿಜ್ಬುಲ್ ಮುಜಾಹಿದ್ದೀನ್ ಸಂಘಟನೆಯ ಇಬ್ಬರು ಉಗ್ರರ ಹೊಡೆದುರುಳಿಸಿದ ಸೇನಾಪಡೆ
ಜಮ್ಮು ಮತ್ತು ಕಾಶ್ಮೀರದ ಕುಲ್ಗಾಂನಲ್ಲಿ ಭಾರತೀಯ ಸೇನಾಪಡೆ ಎನ್ಕೌಂಟರ್ ನಡೆಸಿದ್ದು, ಹಿಜ್ಬುಲ್ ಮುಜಹಿದ್ದೀನ್ ಸಂಘಟನೆಯ ಇಬ್ಬರು ಉಗ್ರರನ್ನು ಹೊಡೆದುರುಳಿಸಿದೆ ಎಂದು ತಿಳಿದುಬಂದಿದೆ.

ಕುಲ್ಗಾಂ: ಜಮ್ಮು ಮತ್ತು ಕಾಶ್ಮೀರದ ಕುಲ್ಗಾಂನಲ್ಲಿ ಭಾರತೀಯ ಸೇನಾಪಡೆ ಎನ್ಕೌಂಟರ್ ನಡೆಸಿದ್ದು, ಹಿಜ್ಬುಲ್ ಮುಜಹಿದ್ದೀನ್ ಸಂಘಟನೆಯ ಇಬ್ಬರು ಉಗ್ರರನ್ನು ಹೊಡೆದುರುಳಿಸಿದೆ ಎಂದು ತಿಳಿದುಬಂದಿದೆ.
ಕುಲ್ಗಾಂನ ಛಾವಲ್ಗಾಂ ಎಂಬ ಪ್ರದೇಶದಲ್ಲಿ ಉಗ್ರರು ಅಡಗಿ ಕುಳಿತಿರುವ ಖಚಿತ ಮಾಹಿತಿ ಲಭ್ಯವಾದ ಹಿನ್ನೆಲೆಯಲ್ಲಿ ಸೇನಾಪಡೆಗಳು ಸ್ಥಳದಲ್ಲಿ ಕಾರ್ಯಾಚರಣೆ ನಡೆಸಲು ಆರಂಭಿಸಿತ್ತು.
ಈ ವೇಳೆ ಉಗ್ರರು ಏಕಾಏಕಿ ಸೇನಾಪಡೆಗಳ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ. ಕೂಡಲೇ ಸ್ಥಳವನ್ನು ಸುತ್ತುವರೆದ ಸೇನಾಪಡೆ ಎನ್ಕೌಂಟರ್ ನಡೆಸಿ ಇಬ್ಬರು ಉಗ್ರರನ್ನು ಹತ್ಯೆ ಮಾಡಿದ್ದಾರೆಂದು ವರದಿಗಳು ತಿಳಿಸಿವೆ.
ಸ್ಥಳದಲ್ಲಿ ಕಾರ್ಯಾಚರಣೆ ಮುಂದುವರೆದಿದ್ದು, ಹತ್ಯೆಯಾದ ಉಗ್ರರಿಂದ ಶಸ್ತ್ರಾಸ್ತ್ರಗಳು ಹಾಗೂ ಸ್ಫೋಟಕ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆಂದು ತಿಳಿದುಹಂದಿದೆ.
ಹತ್ಯೆಯಾದ ಉಗ್ರರನ್ನು ಹಿಜ್ಬುಲ್ ಮುಜಾಹಿದ್ದೀನ್'ನ ಜಿಲ್ಲಾ ಕಮಾಂಡರ್, ಹೆಚ್.ಎಂ.ಶಿರಾಜ್ ಮೊಲ್ವಿ ಹಾಗೂ ಯಾವರ್ ಭಟ್ ಎಂದು ಗುರ್ತಿಸಲಾಗಿದೆ.
2016ರಿಂದಲೂ ಉಗ್ರ ಚಟುವಟಿಕೆಗಳಲ್ಲಿ ಸಕ್ರಿಯವಾಗಿದ್ದ ಶಿರಾಜ್, ಯುವಕರನ್ನು ಉಗ್ರ ಸಂಘಟನೆಗಳಲ್ಲಿ ನೇಮಕ ಮಾಡುವುದು, ನಾಗರೀಕರ ಹತ್ಯೆಯಲ್ಲಿ ತೊಡಗಿದ್ದ. ಈತನ ಹತ್ಯೆಯಿಂದ ದೊಡ್ಡ ಯಶಸ್ಸು ದೊರೆತಂತಾಗಿದೆ ಎಂದು ಕಾಶ್ಮೀರದ ಐಜಿಪಿ ವಿಜಯ್ ಕುಮಾರ್ ಅವರು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


