ದೇಶ

ಜೈ ಶ್ರೀ ರಾಮ್ ಎಂದು ಕೂಗುವವರೆಲ್ಲಾ ಸಾಧುಗಳಲ್ಲ: ಕಾಂಗ್ರೆಸ್ ನಾಯಕನ ವಿವಾದಾತ್ಮಕ ಹೇಳಿಕೆ

ಉತ್ತರ ಪ್ರದೇಶ ಚುನಾವಣೆಯ ಹೊತ್ತಿನಲ್ಲಿ ಕಾಂಗ್ರೆಸ್ ಪಕ್ಷದ ನಾಯಕರು ಹಿಂದೂ ಧರ್ಮದ ಬಗ್ಗೆ ಅನಾವಶ್ಯಕ ಹೇಳಿಕೆ ನೀಡುವ ಮೂಲಕ ವಿವಾದ ಸೃಷ್ಟಿಸುತ್ತಿದ್ದಾರೆ.

ಜೈ ಶ್ರೀ ರಾಮ್ ಎಂದು ಕೂಗುವವರೆಲ್ಲಾ ಸಾಧುಗಳಲ್ಲ: ಕಾಂಗ್ರೆಸ್ ನಾಯಕನ ವಿವಾದಾತ್ಮಕ ಹೇಳಿಕೆ
ಕಾಂಗ್ರೆಸ್ ಹಿರಿಯ ನಾಯಕ ರಶೀದ್ ಅಳ್ವಿ
Published On :

ಸಂಭಾಲ್: ಉತ್ತರ ಪ್ರದೇಶ ಚುನಾವಣೆಯ ಹೊತ್ತಿನಲ್ಲಿ ಕಾಂಗ್ರೆಸ್ ಪಕ್ಷದ ನಾಯಕರು ಹಿಂದೂ ಧರ್ಮದ ಬಗ್ಗೆ ಅನಾವಶ್ಯಕ ಹೇಳಿಕೆ ನೀಡುವ ಮೂಲಕ ವಿವಾದ ಸೃಷ್ಟಿಸುತ್ತಿದ್ದಾರೆ. 

ಇತ್ತೀಚೆಗಷ್ಟೇ ತಮ್ಮ ಪುಸ್ತಕದಲ್ಲಿ ಕಾಂಗ್ರೆಸ್ ನ ಹಿರಿಯ ನಾಯಕ ಸಲ್ಮಾನ್ ಖುರ್ಷಿದ್ ಹಿಂದುತ್ವವನ್ನು ಇಸೀಸ್ ಹಾಗೂ ಬೊಕೊ ಹರಾಮ್ ಉಗ್ರ ಸಂಘಟನೆಗಳಿಗೆ ಹೋಲಿಕೆ ಮಾಡಿ ವಿವಾದಕ್ಕೆ ಕಾರಣರಾಗಿದ್ದರು.

ಈಗ ಈ ಸಾಲಿಗೆ ಮತ್ತೋರ್ವ ಕಾಂಗ್ರೆಸ್ ನಾಯಕ ಸೇರ್ಪಡೆಯಾಗಿದ್ದಾರೆ.  ಜೈ ಶ್ರೀ ರಾಮ್ ಎಂದು ಘೋಷಣೆ ಕೂಗುವವರೆಲ್ಲಾ ಸಾಧುಗಳಲ್ಲ ಎಂದು ಕಾಂಗ್ರೆಸ್ ಹಿರಿಯ ನಾಯಕ ರಶೀದ್ ಅಳ್ವಿ ರಾಮಾಯಣದ ರಾಕ್ಷಸ ಪಾತ್ರವನ್ನು ಉಲ್ಲೇಖಿಸಿ ಈ ರೀತಿ ಹೇಳಿದ್ದಾರೆ.

ಅಳ್ವಿಯವರ ಈ ಹೇಳಿಕೆಗೆ ಬಿಜೆಪಿ ನಾಯಕ ಅಮಿತ್ ಮಾಳವಿಯಾ ಅವರಿಂದ ತೀಕ್ಷ್ಣವಾದ ಪ್ರತಿಕ್ರಿಯೆ ಬಂದಿದ್ದು, ಈ ರೀತಿ ಹೇಳುವವರೆಲ್ಲಾ; ರಾಕ್ಷಸರು"; ಎಂದಿದ್ದಾರೆ ಎಂದು ಆರೋಪ ಮಾಡಿದ್ದಾರೆ.

ಉತ್ತರಪ್ರದೇಶದ ಸಂಭಾಲ್​ನಲ್ಲಿ ಗುರುವಾರ ರಾತ್ರಿ ನಡೆದ "ಕಲ್ಕಿ ಮಹೋತ್ಸವದಲ್ಲಿ ಅಳ್ವಿ ಈ ಹೇಳಿಕೆ ನೀಡಿದ್ದಾರೆ. ಜೈ ಶ್ರೀ ರಾಮ್ ಘೋಷಣೆ ಕೂಗುವ ಮೂಲಕ ಕೆಲವರು ಜನರ ದಾರಿ ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ. ಆದರೆ ಅವರೆಲ್ಲಾರು ಮುನಿಗಳು (ಋಷಿಗಳು) ಅಲ್ಲ" ಮತ್ತು ಇಂತಹವರಿಂದ ಎಚ್ಚರವಾಗಿರಬೇಕಾದ ಅಗತ್ಯವಿದೆ. ರಾಮರಾಜ್ಯದಲ್ಲಿ ದ್ವೇಷಕ್ಕೆ ಯಾವುದೇ ಅವಕಾಶವಿಲ್ಲ ಎಂದು ಕಾಂಗ್ರೆಸ್ ನಾಯಕ ಅಳ್ವಿ ಹೇಳಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.