ದೇವೇಂದ್ರ ಫಡ್ನವಿಸ್ ವಿರುದ್ಧ 5 ಕೋಟಿ ರೂ. ಮಾನನಷ್ಟ ಮೊಕದ್ದಮೆ ಹೂಡಿದ ಸಮೀರ್ ಖಾನ್: ಕಾರಣ ಏನು?
ಮಹಾರಾಷ್ಟ್ರ ಸಚಿವ ನವಾಬ್ ಮಲಿಕ್ ಅವರ ಅಳಿಯ ಸಮೀರ್ ಖಾನ್ ಅವರು ಮಾಜಿ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿದ್ದಾರೆ.

ಮುಂಬೈ: ಮಹಾರಾಷ್ಟ್ರ ಸಚಿವ ನವಾಬ್ ಮಲಿಕ್ ಅವರ ಅಳಿಯ ಸಮೀರ್ ಖಾನ್ ಅವರು ಮಾಜಿ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿದ್ದಾರೆ.
ಈ ಸಂಬಂಧ ನೋಟಿಸ್‌ಗೆ ಕಾನೂನಾತ್ಮಕವಾಗಿ ಪ್ರತಿಕ್ರಿಯಿಸುತ್ತೇವೆ ಎಂದು ರಾಜ್ಯ ಬಿಜೆಪಿ ವಕ್ತಾರರು ಮಾಹಿತಿ ನೀಡಿದ್ದಾರೆ. ಇನ್ನು ನವಾಬ್ ಮಲಿಕ್ ಅವರ ಪುತ್ರಿ ನಿಲೋಫರ್ ಮಲಿಕ್ ಖಾನ್ ಅವರು ನವೆಂಬರ್ 10 ರಂದು ನೋಟಿಸಿನ ಸ್ಕ್ರೀನ್ ಶಾಟ್ ಅನ್ನು ತಮ್ಮ ಟ್ವಿಟರ್ ನಲ್ಲಿ ಪೋಸ್ಟ್ ಮಾಡಿದ್ದರು.
ಸುಳ್ಳು ಆರೋಪಗಳು ಜೀವನವನ್ನು ಹಾಳುಮಾಡುತ್ತವೆ. ಆರೋಪಿಸುವ ಅಥವಾ ಖಂಡಿಸುವ ಮೊದಲು ಏನು ಮಾತನಾಡುತ್ತಿದ್ದೇವೆ ಎಂದು ತಿಳಿದುಕೊಳ್ಳಬೇಕು. ಫಡ್ನವಿಸ್ ಅವರು ನನ್ನ ಕುಟುಂಬದ ಮೇಲೆ ಮಾಡಿರುವ ಸುಳ್ಳು ಹೇಳಿಕೆಗಳಿಗಾಗಿ ಈ ಮಾನನಷ್ಟ ಮೊಕದ್ದಮೆಯ ನೋಟಿಸ್ ನೀಡಲಾಗುತ್ತಿದೆ ಎಂದು ಬರೆದುಕೊಂಡಿದ್ದಾರೆ.
ಈ ವರ್ಷದ ಜನವರಿಯಲ್ಲಿ ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ ಡ್ರಗ್ಸ್ ಪ್ರಕರಣದಲ್ಲಿ ಸಮೀರ್ ಖಾನ್ ಅವರನ್ನು ಬಂಧಿಸಿತ್ತು. ನಂತರ ಸಾಕ್ಷ್ಯಾಧಾರಗಳ ಕೊರತೆ ಹಿನ್ನೆಲೆ ನ್ಯಾಯಾಲಯ ಅವರಿಗೆ ಸೆಪ್ಟೆಂಬರ್‌ನಲ್ಲಿ ಜಾಮೀನು ನೀಡಿತ್ತು.
ನವೆಂಬರ್ 1 ರಂದು ಸುದ್ದಿ ವಾಹಿನಿಯೊಂದಕ್ಕೆ ನೀಡಿದ ಹೇಳಿಕೆಯಲ್ಲಿ ಫಡ್ನವಿಸ್ ಅವರು ಮಲಿಕ್ ವಿರುದ್ಧ ವಾಗ್ದಾಳಿ ನಡೆಸಿದ್ದರು. ಯಾರ ಮನೆಯಲ್ಲಿ ಡ್ರಗ್ಸ್ ಪತ್ತೆಯಾಗಿದೆಯೋ ಆ ಪಕ್ಷದ ಸ್ಥಿತಿಯನ್ನು ನೀವು ಊಹಿಸಬಹುದು ಎಂದಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


