ದೇಶ

ಕೋವಿಡ್-19: ದೇಶದಲ್ಲಿಂದು 12,516 ಹೊಸ ಕೇಸ್ ಪತ್ತೆ, 501 ಮಂದಿ ಸಾವು

ಭಾರತದಲ್ಲಿ ಮಹಾಮಾರಿ ಕೊರೋನಾ ಅಬ್ಬರ ಇಳಿಕೆಯಾಗುತ್ತಿರುವ ಬೆಳವಣಿಗೆಗಳು ಕಂಡು ಬರುತ್ತಿದ್ದು, ದೇಶದಲ್ಲಿ ಶುಕ್ರವಾರ ಬೆಳಿಗ್ಗೆ 8 ಗಂಟೆಗೆ ಕೊನೆಗೊಂಡ 24 ತಾಸುಗಳ ಅವಧಿಯಲ್ಲಿ 12,516 ಕೊರೋನಾ ಪ್ರಕರಣಗಳು ದೃಢಪಟ್ಟಿದ್ದು, ಇದೇ ಅವಧಿಯಲ್ಲಿ 501 ಮಂದಿ ಸಾವನ್ನಪ್ಪಿದ್ದಾರೆಂದು ತಿಳಿದುಬಂದಿದೆ.

ಕೋವಿಡ್-19: ದೇಶದಲ್ಲಿಂದು 12,516 ಹೊಸ ಕೇಸ್ ಪತ್ತೆ, 501 ಮಂದಿ ಸಾವು
ಸಂಗ್ರಹ ಚಿತ್ರ
Published On :

ನವದೆಹಲಿ: ಭಾರತದಲ್ಲಿ ಮಹಾಮಾರಿ ಕೊರೋನಾ ಅಬ್ಬರ ಇಳಿಕೆಯಾಗುತ್ತಿರುವ ಬೆಳವಣಿಗೆಗಳು ಕಂಡು ಬರುತ್ತಿದ್ದು, ದೇಶದಲ್ಲಿ ಶುಕ್ರವಾರ ಬೆಳಿಗ್ಗೆ 8 ಗಂಟೆಗೆ ಕೊನೆಗೊಂಡ 24 ತಾಸುಗಳ ಅವಧಿಯಲ್ಲಿ 12,516 ಕೊರೋನಾ ಪ್ರಕರಣಗಳು ದೃಢಪಟ್ಟಿದ್ದು, ಇದೇ ಅವಧಿಯಲ್ಲಿ 501 ಮಂದಿ ಸಾವನ್ನಪ್ಪಿದ್ದಾರೆಂದು ತಿಳಿದುಬಂದಿದೆ.

ಶುಕ್ರವಾರದ ಅಂಕಿ ಸಂಖ್ಯೆಯೊಂದಿಗೆ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 3,44,14,186ಕ್ಕೆ ತಲುಪಿದ್ದು, ಸಾವಿನ ಸಂಖ್ಯೆ 4,62,690ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

ದೇಶದಲ್ಲಿ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ ದೇಶದಲ್ಲಿ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 1,37,416ಕ್ಕೆ ತಲುಪಿದೆ.

ಈ ನಡುವೆ ಕಳೆದ 24 ಗಂಟೆಗಳಲ್ಲಿ 13,155 ಮಂದಿ ಗುಣಮುಖರಾಗುವುದರೊಂದಿಗೆ ಈವರೆಗೂ ಚೇತರಿಸಿಕೊಂಡವರ ಸಂಖ್ಯೆ  3,38,14,080ಕ್ಕೆ ತಲುಪಿದೆ.

ಇನ್ನು ಭಾರತದಲ್ಲಿ ಒಂದೇ 11,89,470 ಮಂದಿಯನ್ನು ಕೊರೋನಾ ಪರೀಕ್ಷೆಗೊಳಪಡಿಸಲಾಗಿದ್ದು, 61,99,02,064 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ.

ಭಾರತದಲ್ಲಿ ಜನವರಿ 16 ರಂದು ಸ್ವದೇಶಿ ನಿರ್ಮಿತ ಕೋವಿಶೀಲ್ಟ್ ಮತ್ತು ಕೋವ್ಯಾಕ್ಸಿನ್ ಕೊರೋನಾ ಲಸಿಕೆಗೆ ಪ್ರಧಾನಿ ಮೋದಿಯವರು ಚಾಲನೆ ನೀಡಿದ್ದು, ತಮ್ಮ ಜೀವವನ್ನೇ ಪಣಕ್ಕಿಟ್ಟು ಕೊರೋನಾ ವಿರುದ್ಧ ಹೋರಾಟ ಮಾಡುತ್ತಿರುವ ಕೊರೋನಾ ವಾರಿಯರ್ಸ್'ಗೆ ಲಸಿಕೆಯ ಮೊದಲ ಆದ್ಯತೆಯನ್ನು ನೀಡಲಾಗಿತ್ತು. ಬಳಿಕ 45 ವರ್ಷ ಮೇಲ್ಪಟ್ಟ ಎಲ್ಲಾ ನಾಗರೀಕರಿಗೆ ಲಸಿಕೆ ನೀಡಲಾಗಿತ್ತು. ಮೇ.1ರಿಂದ 18-45 ವರ್ಷ ವಯಸ್ಸಿನ ಎಲ್ಲರಿಗೂ ಲಸಿಕೆ ನೀಡಲಾಗುತ್ತಿದೆ.

ಕೇಂದ್ರ ಸರ್ಕಾರ ಮಾಹಿತಿ ನೀಡಿರುವ ಪ್ರಕಾರ ಲಸಿಕೆ ಅಭಿಯಾನ ಆರಂಭವಾಗಿ ಇಲ್ಲಿಯವರೆಗೂ ಒಟ್ಟಾರೆ 1,10,79,51,225 ಜನರಿಗೆ ಲಸಿಕೆಯನ್ನು ನೀಡಲಾಗಿದೆ ಎಂದು ತಿಳಿಸಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.