ಸ್ವಾತಂತ್ರ್ಯದ ಬಗ್ಗೆ ವಿವಾದಾತ್ಮಕ ಹೇಳಿಕೆ: ನಟಿ ಕಂಗನಾ ವಿರುದ್ಧ ನ್ಯಾಯಾಂಗ ಕ್ರಮಕ್ಕೆ ದೆಹಲಿ ಬಿಜೆಪಿ ನಾಯಕ ಒತ್ತಾಯ
2014 ರಲ್ಲಿ ದೇಶಕ್ಕೆ ನಿಜವಾದ ಸ್ವತಂತ್ರ್ಯ ಸಿಕ್ಕಿದ್ದು, 1947ರಲ್ಲಿ ಸಿಕ್ಕಿದ್ದು ಭಿಕ್ಷೆ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದ ಬಾಲಿವುಡ್ ನಟಿ ಕಂಗನಾ ರನೌತ್ ಅವರ ವಿರುದ್ಧ ದೆಹಲಿ ಬಿಜೆಪಿ ನಾಯಕ ಪ್ರವೀಣ್ ಶಂಕರ್ ಕಪೂರ್ ಅವರು ತೀವ್ರ ವಾಗ್ದಾಳಿ...

ನವದೆಹಲಿ: 2014 ರಲ್ಲಿ ದೇಶಕ್ಕೆ ನಿಜವಾದ ಸ್ವತಂತ್ರ್ಯ ಸಿಕ್ಕಿದ್ದು, 1947ರಲ್ಲಿ ಸಿಕ್ಕಿದ್ದು ಭಿಕ್ಷೆ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದ ಬಾಲಿವುಡ್ ನಟಿ ಕಂಗನಾ ರನೌತ್ ಅವರ ವಿರುದ್ಧ ದೆಹಲಿ ಬಿಜೆಪಿ ನಾಯಕ ಪ್ರವೀಣ್ ಶಂಕರ್ ಕಪೂರ್ ಅವರು ತೀವ್ರ ವಾಗ್ದಾಳಿ ನಡೆಸಿದ್ದು, ನಟಿಯ ವಿರುದ್ಧ ಕ್ರಮ ಕೈಗೊಳ್ಳುವಂತೆ ನ್ಯಾಯಾಂಗವನ್ನು ಒತ್ತಾಯಿಸಿದ್ದಾರೆ.
ರನೌತ್ ಅವರು "ಸ್ವಾತಂತ್ರ್ಯ ಹೋರಾಟಗಾರರ ತ್ಯಾಗಕ್ಕೆ ಅವಮಾನ" ಮಾಡಿದ್ದಾರೆ ಎಂದು ದೆಹಲಿ ಬಿಜೆಪಿ ವಕ್ತಾರರಾಗಿರುವ ಪ್ರವೀಣ್ ಶಂಕರ್ ಕಪೂರ್ ಅವರು ಹೇಳಿದ್ದಾರೆ.
“ಸ್ವಾತಂತ್ರ್ಯ ಹೋರಾಟಗಾರನ ಮಗನಾಗಿರುವುದರಿಂದ ಮತ್ತು ಸ್ವಾತಂತ್ರ್ಯ ಹೋರಾಟಗಾರರ ಕುಟುಂಬದಿಂದ ಬಂದ ನಾನು, ಕಂಗನಾ ಅವರು ಭಾರತದ ಸ್ವಾತಂತ್ರ್ಯ ಭಿಕ್ಷೆ ಎಂದು ಹೇಳಿರುವುದು ಸ್ವಾತಂತ್ರ್ಯದ ಅತಿದೊಡ್ಡ ದುರುಪಯೋಗ ಮತ್ತು ಸ್ವಾತಂತ್ರ್ಯ ಹೋರಾಟಗಾರರ ತ್ಯಾಗಕ್ಕೆ ಮಾಡಿದ ಅವಮಾನವಾಗಿದೆ ಎಂದು ಬಯಸುತ್ತೇನೆ. ಭಾರತದ ನ್ಯಾಯಾಂಗ ವ್ಯವಸ್ಥೆಯು ಇದನ್ನು ಗಂಭೀರವಾಗಿ ಪರಿಗಣಿಸಬೇಕು" ಎಂದು ಕಪೂರ್ ಅವರು ಗುರುವಾರ ಹಿಂದಿಯಲ್ಲಿ ಟ್ವೀಟ್ ಮಾಡಿದ್ದಾರೆ.
ಈ ಹಿಂದೆ ಟೈಮ್ಸ್ ನೌ ಸಮಿಟ್ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಕಂಗನಾ ರನೌತ್ ಅವರು, ಸ್ವಾತಂತ್ರ್ಯದ ಕುರಿತು ಮಾತನಾಡಿದ್ದರು. '1947 ರಲ್ಲಿ ಸಿಕ್ಕಿದ್ದು ಸ್ವಾತಂತ್ರ್ಯವಲ್ಲ ಅದು ಭಿಕ್ಷೆ. ನಮಗೆ ನಿಜವಾದ ಸ್ವಾತಂತ್ರ್ಯ ಸಿಕ್ಕಿದ್ದು 2014 ರಲ್ಲಿ ಎಂದಿದ್ದರು. ಕಂಗನಾ ಅವರ ಈ ಹೇಳಿಕೆಗೆ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ಬಿಜೆಪಿ ಸಂಸದ ವರುಣ್ ಗಾಂಧಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


