ದೇಶ

ನವದೆಹಲಿ: ಮಾಯಾವತಿಯವರ ತಾಯಿ ರಾಮ ರತಿ ನಿಧನ

ಬಿಎಸ್ ಪಿ ಅಧ್ಯಕ್ಷೆ ಮಾಯಾವತಿ ಅವರ ತಾಯಿ ರಾಮ ರತಿ ಅವರು ಹೃದಯ ಸಮಸ್ಯೆಯಿಂದ ದೆಹಲಿಯಲ್ಲಿ ಶನಿವಾರ ನಿಧನರಾಗಿದ್ದಾರೆ.

ನವದೆಹಲಿ: ಮಾಯಾವತಿಯವರ ತಾಯಿ ರಾಮ ರತಿ ನಿಧನ
ಮಾಯಾವತಿ
Published On :

ನವದೆಹಲಿ: ಬಿಎಸ್ ಪಿ ಅಧ್ಯಕ್ಷೆ ಮಾಯಾವತಿ ಅವರ ತಾಯಿ ರಾಮ ರತಿ ಅವರು ಹೃದಯ ಸಮಸ್ಯೆಯಿಂದ ದೆಹಲಿಯಲ್ಲಿ ಶನಿವಾರ ನಿಧನರಾಗಿದ್ದಾರೆ.  ರಾಮ ರತಿ ಅವರಿಗೆ 92 ವರ್ಷ ವಯಸ್ಸಾಗಿತ್ತು ಅವರು ಕೆಲ ದಿನಗಳಿಂದ ಚಿಕಿತ್ಸೆ ಪಡೆಯುತ್ತಿದ್ದ ರಾಷ್ಟ್ರ ರಾಜಧಾನಿಯ ಆಸ್ಪತ್ರೆಯೊಂದರಲ್ಲಿ ನಿಧನರಾಗಿರುವುದಾಗಿ ಬಹುಜನ ಸಮಾಜ ಪಕ್ಷ(ಬಿಎಸ್ ಪಿ) ತಿಳಿಸಿದೆ. 

ತಾಯಿಯ ನಿಧನದ ಸುದ್ದಿ ತಿಳಿಯುತ್ತಿದ್ದಂತೆ ಮಾಯಾವತಿ ದೆಹಲಿಗೆ ತೆರಳಿದ್ದಾರೆ. ಭಾನುವಾರ ದೆಹಲಿಯಲ್ಲಿ ಅಂತ್ಯ ಕ್ರಿಯೆ ನಡೆಯಲಿದೆ ಎಂದು ಹೇಳಲಾಗಿದೆ.

ಪಕ್ಷದ ಅಧ್ಯಕ್ಷರ ತಾಯಿ ನಿಧನಕ್ಕೆ ಬಿಎಸ್ ಪಿ ಮುಖಂಡರು ಹಾಗೂ ಕಾರ್ಯಕರ್ತರು ಸಂತಾಪ ಸೂಚಿಸಿದ್ದಾರೆ.  ಕಳೆದ ವರ್ಷವಷ್ಟೇ  ಮಾಯಾವತಿ ಅವರ ತಂದೆ ಪ್ರಭುದಯಾಳ್ ನಿಧನರಾಗಿದ್ದರು ಎಂದು ಬಿಎಸ್ ಪಿ  ಪಕ್ಷ ತಿಳಿಸಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.