ದೇಶ

ಖುರ್ಷಿದ್ ಪುಸ್ತಕದ ವಿರುದ್ಧ ದೆಹಲಿ ಕೋರ್ಟ್ ನಲ್ಲಿ ಪ್ರಕರಣ ದಾಖಲು; ಕಾಂಗ್ರೆಸ್ ವಿರುದ್ಧ ಬಿಜೆಪಿ ವಾಗ್ದಾಳಿ 

ಮಾಜಿ ಕೇಂದ್ರ ಸಚಿವ ಸಲ್ಮಾನ್ ಖುರ್ಷಿದ್ ಪುಸ್ತಕದ ಮುದ್ರಣ ಹಾಗೂ ಪ್ರಸರಣಕ್ಕೆ ತಡೆ ಕೋರಿ ದೆಹಲಿ ಕೋರ್ಟ್ ನಲ್ಲಿ ಇಂಜೆನ್ಷನ್ ಅರ್ಜಿ ಸಲ್ಲಿಸಲಾಗಿದೆ.

ಖುರ್ಷಿದ್ ಪುಸ್ತಕದ ವಿರುದ್ಧ ದೆಹಲಿ ಕೋರ್ಟ್ ನಲ್ಲಿ ಪ್ರಕರಣ ದಾಖಲು; ಕಾಂಗ್ರೆಸ್ ವಿರುದ್ಧ ಬಿಜೆಪಿ ವಾಗ್ದಾಳಿ 
ಕಾಂಗ್ರೆಸ್ ಮುಖಂಡ ಸಲ್ಮಾನ್ ಖುರ್ಷಿದ್
Published On :

ನವದೆಹಲಿ: ಮಾಜಿ ಕೇಂದ್ರ ಸಚಿವ ಸಲ್ಮಾನ್ ಖುರ್ಷಿದ್ ಪುಸ್ತಕದ ಮುದ್ರಣ ಹಾಗೂ ಪ್ರಸರಣಕ್ಕೆ ತಡೆ ಕೋರಿ ದೆಹಲಿ ಕೋರ್ಟ್ ನಲ್ಲಿ ಇಂಜೆನ್ಷನ್ ಅರ್ಜಿ ಸಲ್ಲಿಸಲಾಗಿದೆ. ಸಮಾಜದ ನಿರ್ದಿಷ್ಟ ಸಮುದಾಯದ ಭಾವನೆಗಳಿಗೆ ಧಕ್ಕೆ ಉಂಟು ಮಾಡುವ ಆರೋಪದಡಿ ಈ ಅರ್ಜಿ ಸಲ್ಲಿಸಲಾಗಿದೆ.

ಹಿಂದೂ ಸೇನಾದ ಅಧ್ಯಕ್ಷ ವಿಷ್ಣು ಗುಪ್ತ ಸಲ್ಮಾನ್ ಖುರ್ಷಿದ್ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಹಿಂದು ಧರ್ಮದ ಇತ್ತೀಚಿನ ಪ್ರಬಲ ರೂಪವನ್ನು ಸಲ್ಮಾನ್ ಖುರ್ಷಿದ್ ತಮ್ಮ ಪುಸ್ತಕದಲ್ಲಿ ಐಎಸ್ಐಎಸ್ ಹಾಗೂ ಬೊಕೊ ಹರಾಮ್ ಹೋಲಿಕೆ ಮಾಡಿ ವಿವಾದಕ್ಕೆ ಕಾರಣರಾಗಿದ್ದರು.

ಉತ್ತರ ಪ್ರದೇಶ ಚುನಾವಣೆ ಮುಂದಿನ ವರ್ಷ ನಡೆಯಲಿದ್ದು, ಅಲ್ಪಸಂಖ್ಯಾತರ ಮತಗಳನ್ನು ಸೆಳೆಯುವ, ಮತಗಳನ್ನು ದ್ರುವೀಕರಿಸುವ ಯತ್ನದ ಭಾಗವಾಗಿ ಸಲ್ಮಾನ್ ಖುರ್ಷಿದ್ ಈ ಪುಸ್ತಕವನ್ನು ಬಿಡುಗಡೆ ಮಾಡಿದ್ದಾರೆ ಎಂದು ಗುಪ್ತ ಅವರ ಪರ ವಕೀಲ ಅಕ್ಷಯ್ ಅಗರ್ವಾಲ್ ಹಾಗೂ ಸುಶಾಂತ್ ಪ್ರಕಾಶ್ ವಾದಿಸಿದ್ದಾರೆ. ದೇಶ ಹಾಗೂ ಸಮಾಜದ ಹಿತ ದೃಷ್ಟಿಯಿಂದ ಪುಸ್ತಕದ ಮಾರಾಟ, ಮುದ್ರಣ, ಹಂಚಿಕೆಯನ್ನು ತಡೆಹಿಡಿಯಬೇಕೆಂದು ಕೋರ್ಟ್ ಗೆ ಅರ್ಜಿದಾರರು ಮನವಿ ಮಾಡಿದ್ದಾರೆ. 

ಸಲ್ಮಾನ್ ಖುರ್ಷಿದ್ ಅವರ ಪುಸ್ತಕ ಹಿಂದೂಗಳ ಭಾವನೆಗಳಿಗೆ ಧಕ್ಕೆ ಉಂಟು ಮಾಡುತ್ತಿರುವುದರಿಂದ ಸಲ್ಮಾನ್ ಖುರ್ಷಿದ್ ಅವರ ಪುಸ್ತಕವನ್ನು ನಿಷೇಧಿಸಬೇಕೆಂದು ಹಿಂದೂ ಸೇನಾ ಆಗ್ರಹಿಸಿದೆ. 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.