ಜಮ್ಮು ಮತ್ತು ಕಾಶ್ಮೀರದಲ್ಲಿ ಎನ್ ಕೌಂಟರ್; ಸಿಮೆಂಟ್ ಉದ್ಯಮಿ ಸೇರಿ 3 ಉಗ್ರರು ಹತ
ಜಮ್ಮು ಮತ್ತು ಕಾಶ್ಮೀರದ ಹೈದರ್‌ಪೋರಾ ಪ್ರದೇಶದಲ್ಲಿ ಭದ್ರತಾ ಪಡೆಗಳು ಇಬ್ಬರು ಭಯೋತ್ಪಾದಕರನ್ನು ಎನ್‌ಕೌಂಟರ್ ಮಾಡಿದ್ದಾರೆ.

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಹೈದರ್‌ಪೋರಾ ಪ್ರದೇಶದಲ್ಲಿ ಭದ್ರತಾ ಪಡೆಗಳು ಇಬ್ಬರು ಭಯೋತ್ಪಾದಕರನ್ನು ಎನ್‌ಕೌಂಟರ್ ಮಾಡಿದ್ದಾರೆ.
ಸಾವಿಗೀಡಾದ ಉಗ್ರರನ್ನು ಸಮೀರ್ ಮತ್ತು ಅಮೀರ್ ಎಂದು ಗುರುತಿಸಲಾಗಿದೆ. ಭಯೋತ್ಪಾದನೆ ವಿರುದ್ಧ ನಡೆದ ಕಾರ್ಯಾಚರಣೆಯಲ್ಲಿ ಮೂರನೇ ವ್ಯಕ್ತಿ ಮೊಹಮ್ಮದ್ ಅಲ್ತಾಫ್ ಭಟ್'ನನ್ನು ಭದ್ರತಾ ಪಡೆಗಳು ಕೊಂದಿದ್ದಾರೆ.
ಅಲ್ತಾಫ್ ಸಿಮೆಂಟ್ ಉದ್ಯಮಿಯಾಗಿದ್ದು, ಉಗ್ರರಿಗೆ ಆಶ್ರಯ ನೀಡಿದ್ದ ಎಂದು ಸೇನಾ ಅಧಿಕಾರಿಗಳು ತಿಳಿಸಿದ್ದಾರೆ.
ಮೂರೂವರೆ ಗಂಟೆಗಳ ಕಾಲ ಎನ್‌ಕೌಂಟರ್
ಮೂಲಗಳ ಪ್ರಕಾರ, ನಿನ್ನೆ ರಾತ್ರಿ ಹೈದರ್‌ಪೋರಾದ ಮನೆಯೊಂದರಲ್ಲಿ ಭಯೋತ್ಪಾದಕರು ಅಡಗಿರುವ ಬಗ್ಗೆ ಮಾಹಿತಿ ದೊರೆಯಿತು. ಈ ಗುಪ್ತ ಮಾಹಿತಿ ಆಧಾರದ ಮೇಲೆ ಭಯೋತ್ಪಾದಕರ ವಿರುದ್ಧ ಪೊಲೀಸರು ಹಾಗೂ ಸೇನೆ ಜಂಟಿಯಾಗಿ ಕಾರ್ಯಾಚರಣೆಗಿಳಿದಿದೆ.
ಈ ವೇಳೆ ಅಲರ್ಟ್ ಆದ ಉಗ್ರರು, ಸೇನೆ ಮೇಲೆ ಗುಂಡು ಹಾರಿಸಲು ಪ್ರಾರಂಭಿಸಿದ್ದಾರೆ. ಭಯೋತ್ಪಾದಕರಿಗೆ ಶರಣಾಗುವಂತೆ ಕೇಳಿಕೊಂಡರೂ ಯಾವುದೇ ಪ್ರಯೋಜನವಾಗಲಿಲ್ಲ. ಈ ವೇಳೆ ಪ್ರತಿದಾಳಿ ನಡೆಸಿದ ಸೇನೆ, ಮೂವರನ್ನು ಹೊಡೆದುರುಳಿಸಿದೆ ಅಂತಾ ಕಾಶ್ಮೀರ ಐಜಿಪಿ ವಿಜಯ್ ಕುಮಾರ್ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


