ಬಿಹಾರ: ರಸ್ತೆ ಅಪಘಾತದಲ್ಲಿ ಸುಶಾಂತ್ ಸಿಂಗ್ ರಜಪೂತ್ ನ ಐವರು ಸಂಬಂಧಿಕರು ಸಾವು
ಬಿಹಾರದ ಲಖಿಸರೈ ಜಿಲ್ಲೆಯಲ್ಲಿ ಮಂಗಳವಾರ ಬೆಳಗ್ಗೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಬಾಲಿವುಡ್ ನ ದಿವಂಗತ ನಟ ಸುಶಾಂತ್ ಸಿಂಗ್ ರಜಪೂತ್ ಅವರ ಐವರು ದೂರದ ಸಂಬಂಧಿಕರು ಸೇರಿದಂತೆ ಆರು ಮಂದಿ ಸಾವನ್ನಪ್ಪಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

ಪಾಟ್ನಾ: ಬಿಹಾರದ ಲಖಿಸರೈ ಜಿಲ್ಲೆಯಲ್ಲಿ ಮಂಗಳವಾರ ಬೆಳಗ್ಗೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಬಾಲಿವುಡ್ ನ ದಿವಂಗತ ನಟ ಸುಶಾಂತ್ ಸಿಂಗ್ ರಜಪೂತ್ ಅವರ ಐವರು ದೂರದ ಸಂಬಂಧಿಕರು ಸೇರಿದಂತೆ ಆರು ಮಂದಿ ಸಾವನ್ನಪ್ಪಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ಎಸ್ ಯುವಿ ಕಾರು ಟ್ರಕ್ ವೊಂದಕ್ಕೆ ಡಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಇತರ ನಾಲ್ವರು ಗಾಯಗೊಂಡಿದ್ದಾರೆ. ಟ್ರಕ್ ಡ್ರೈವರ್ ಹಾಗೂ ಸಹಾಯಕ ಹೇಗೂ ಅಲ್ಲಿಂದ ಪರಾರಿಯಾಗಿದ್ದಾರೆ.
ಮೃತರು ಹರಿಯಾಣ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಒಪಿ ಸಿಂಗ್ ಅವರ ಸಹೋದರಿಯ ಅಂತ್ಯಕ್ರಿಯೆ ಮುಗಿಸಿಕೊಂಡು ಪಾಟ್ನಾದಿಂದ ಜಮುಯಿಗೆ ಮರಳುತ್ತಿರುವುದಾಗಿ ಈ ಅಪಘಾತ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಸಿಂಗ್ ಸುಶಾಂತ್ ಸಿಂಗ್ ಅವರ ಸಹೋದರಿಯನ್ನು ವಿವಾಹವಾಗಿದ್ದಾರೆ.
ಗಾಯಾಗಳುಗಳಿಗೆ ಸಿಕಂದರ ಉಪ ವಿಭಾಗೀಯ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿ, ತದನಂತರ ಪಾಟ್ನಾದ ವೈದ್ಯಕೀಯ ಕಾಲೇಜ್ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


