ದೆಹಲಿ ವಾಯುಮಾಲಿನ್ಯ: ಸರ್ಕಾರಿ ನೌಕರರ 'ವರ್ಕ್ ಫ್ರಂ ಹೋಂ' ಗೆ ಕೇಂದ್ರ ವಿರೋಧ, ಕಾರ್‌ಪೂಲಿಂಗ್'ಗೆ ಸಲಹೆ
ಸರ್ಕಾರಿ ನೌಕರರು ಮನೆಯಿಂದ ಕೆಲಸ ಮಾಡಲು ಅನುಮತಿ ನೀಡಲು ವಿರೋಧ ವ್ಯಕ್ತಪಡಿಸಿರುವ ಕೇಂದ್ರ ಸರ್ಕಾರ, ಇದರ ಬದಲಿಗೆ ಕಾರ್ಪೂಲಿಂಗ್ ಅನುಸರಿಸಲು ಸಿಬ್ಬಂದಿಗಳಿಗೆ ಸಲಹೆ ನೀಡಿದೆ ಎಂದು ತಿಳಿದುಬಂದಿದೆ.

ನವದೆಹಲಿ: ಸರ್ಕಾರಿ ನೌಕರರು ಮನೆಯಿಂದ ಕೆಲಸ ಮಾಡಲು ಅನುಮತಿ ನೀಡಲು ವಿರೋಧ ವ್ಯಕ್ತಪಡಿಸಿರುವ ಕೇಂದ್ರ ಸರ್ಕಾರ, ಇದರ ಬದಲಿಗೆ ಕಾರ್ಪೂಲಿಂಗ್ ಅನುಸರಿಸಲು ಸಿಬ್ಬಂದಿಗಳಿಗೆ ಸಲಹೆ ನೀಡಿದೆ ಎಂದು ತಿಳಿದುಬಂದಿದೆ.
ದೆಹಲಿ ಹಾಗೂ ನೆರೆಹೊರೆಯ ನಗರಗಳಲ್ಲಿನ ವಾಯು ಮಾಲಿನ್ಯದ ಕುರಿತು ವಿಚಾರಣೆಗೆ ಮುಂಚಿತವಾಗಿ ಸುಪ್ರೀಂಕೋರ್ಟ್'ಗೆ ಕೇಂದ್ರ ಸರ್ಕಾರ ಅವಿಡವಿಟ್ ಸಲ್ಲಿಸಿದೆ.
ಅಫಿಡವಿಟ್ ನಲ್ಲಿ ಇತ್ತೀಚಿನ ದಿನಗಳಲ್ಲಿ ಕೋವಿಡ್-19 ಸಾಂಕ್ರಾಮಿಕ ರೋಗದಿಂದಾಗಿ ಹಲವಾರು ಸರ್ಕಾರಿ ಕಾರ್ಯಗಳ ಮೇಲೆ ಗಣನೀಯವಾಗಿ ದೀರ್ಘಾವಧಿಯವರೆಗೆ ಪರಿಣಾಮ ಬೀರಿವೆ. ಇದು ಇಡೀ ದೇಶದ ಮೇಲೆ ಪರಿಣಾಮ ಉಂಟು ಮಾಡಿತು. ಸರ್ಕಾರಿ ನೌಕರರು ಮನೆಯಿಂದ ಕೆಲಸ ಮಾಡುವುದರಿಂದ ಯಾವುದೇ ಪ್ರಯೋಜನ ಹಾಗೂ ಪರಿಣಾಮಕಾರಿಯಾಗುವುದಿಲ್ಲ. ನೌಕರರಿಗೆ ಮನೆಯಿಂದ ಕೆಲಸ ಮಾಡಲು ಅವಕಾಶ ನೀಡುವ ಬದಲು, ಅವರು ಪ್ರಯಾಣಕ್ಕೆ ಬಳಲುವ ವಾಹನಗಳ ಸಂಖ್ಯೆ ಮಾಡಿ, ಕಾರ್ಪೂಲಿಂಗ್ ಅನುಸರಿಸುವುದು ಉತ್ತಮವಾಗಿರುತ್ತದೆ ಎಂದು ಹೇಳಿದೆ.
ದೆಹಲಿ-ಎನ್'ಸಿಆರ್'ನ ವಾಯು ಮಾಲಿನ್ಯ ನಿರ್ವಹಣೆಯ ಆಯುಕ್ತರಿಗೆ ಅಗತ್ಯವಸ್ತುಗಳ ಸಾಗಿಸುವ ಲಾರಿಗಳ ಹೊರತುಪಡಿಸಿ, ಭಾರೀ ಗಾತ್ರದ ಟ್ರಕ್ ಗಳ, ಧರ್ಮಲ್ ಪ್ಲಾಂಟ್, ನಿರ್ಮಾಣ ಕಾರ್ಯಗಳನ್ನು ನವೆಂಬರ್ 21ರವರೆಗೂ ಸ್ಥಗಿತಗೊಳಿಸುವಂತೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದೆ.
ಈ ನಡುವೆ ಕೇಂದ್ರ ಸರ್ಕಾರದ ಸಿಬ್ಬಂದಿ ಮತ್ತು ತರಬೇತಿ ಇಲಾಖೆ ತನ್ನ ಅಧಿಕಾರಿಗಳು ಹಾಗೂ ಸಿಬ್ಬಂದಿಗಳಿಗೆ ಸಲಹೆಗಳನ್ನು ನೀಡಿದ್ದು, ಸಂಚಾರಕ್ಕೆ ವಾಹನಗಳನ್ನು ಕಡಿಮೆ ಬಳಕೆ ಮಾಡುವಂತೆ ಹಾಗೂ ಇತರೆ ಸಿಬ್ಬಂದಿಗಳೊಂದಿಗೆ ಹಂಚಿಕೊಳ್ಳುವಂತೆ ಸಲಹೆ ನೀಡಿದೆ. ಇದರಿಂದ ಕೇಂದ್ರ ಸರ್ಕಾರದ ವಾಹನಗಳ ಸಂಖ್ಯೆ ಗಣನೀಯವಾಗಿ ಕಡಿಮೆಯಾಗಲಿದೆ.
ಈ ಹಿಂದೆ ಆದೇಶ ನೀಡಿದ್ದ ಸುಪ್ರೀಂ ಕೋರ್ಟ್ ಪಂಜಾಬ್, ದೆಹಲಿ, ಹರಿಯಾಣ ಮತ್ತು ಉತ್ತರ ಪ್ರದೇಶಗಳೊಂದಿಗೆ ನವೆಂಬರ್ 16 ರಂದು "ತುರ್ತು ಸಭೆ" ನಡೆಸುವಂತೆ ಹಾಗೂ ಈ ವೇಳೆ ದೆಹಲಿ-ಎನ್‌ಸಿಆರ್‌ನಲ್ಲಿನ ವಾಯುಮಾಲಿನ್ಯವನ್ನು ತಡೆಯಲು ಕ್ರಿಯಾ ಯೋಜನೆಯನ್ನು ಸಿದ್ಧಪಡಿಸುವಂತೆ ಸೂಚಿಸಿತ್ತು. ಅಲ್ಲದೆ, ಉದ್ಯೋಗಿಗಳಿಗೆ ಕನಿಷ್ಠ ಒಂದು ವಾರದವರೆಗೆ ಮನೆಯಿಂದ ಕೆಲಸ ಮಾಡಲು ಪರಿಗಣಿಸುವಂತೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳಿಗೆ ಸಲಹೆ ನೀಡಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


