ಉತ್ತರ ಪ್ರದೇಶ ಚುನಾವಣೆ 2022: ಮತ್ತೆ ಬಿಜೆಪಿ ಅಧಿಕಾರಕ್ಕೆ?: ಚುನಾಣಾ ಪೂರ್ವ ಸಮೀಕ್ಷೆ ಅಂಕಿ-ಅಂಶ ಇಂತಿದೆ...
ದೇಶದ ಅತಿ ದೊಡ್ಡ ರಾದೇಶದ ಅತಿ ದೊಡ್ಡ ರಾಜ್ಯ ಉತ್ತರ ಪ್ರದೇಶ ವಿಧಾಸಭಾ ಚುನಾವಣೆಗೆ ಇನ್ನು ಕೆಲವೇ ತಿಂಗಳು ಬಾಕಿ ಇದ್ದು ಚುನಾವಣಾ ಪೂರ್ವ ಸಮೀಕ್ಷೆಗಳು ನಡೆಯುತ್ತಿವೆ.

ಲಖನೌ: ದೇಶದ ಅತಿ ದೊಡ್ಡ ರಾಜ್ಯ ಉತ್ತರ ಪ್ರದೇಶ ವಿಧಾಸಭಾ ಚುನಾವಣೆಗೆ ಇನ್ನು ಕೆಲವೇ ತಿಂಗಳು ಬಾಕಿ ಇದ್ದು ಚುನಾವಣಾ ಪೂರ್ವ ಸಮೀಕ್ಷೆಗಳು ನಡೆಯುತ್ತಿವೆ.
ಪ್ರಧಾನಿ ನರೇಂದ್ರ ಮೋದಿ ಸಿಎಂ ಯೋಗಿ ಆದಿತ್ಯನಾಥ್ ರ "ವಿಕಾಸ ಪಥ" ಜನಮನ ಗೆದ್ದಿದೆಯಾ ಎಂಬುದರ ಪರೀಕ್ಷೆಯೂ ಈ ಚುನಾವಣೆಯಾಗಿರಲಿದ್ದು, ಟೈಮ್ಸ್ ನೌ-ಪೋಲ್ ಸ್ಟಾರ್ಟ್ ಚುನಾವಣಾ ಪೂರ್ವ ಸಮೀಕ್ಷೆ ನಡೆದಿದ್ದು ಅಚ್ಚರಿಯ ಅಂಕಿ-ಅಂಶಗಳು ಹೊರಬಿದ್ದಿವೆ.
403 ವಿಧಾನಸಭಾ ಕ್ಷೇತ್ರಗಳನ್ನು ಹೊಂದಿರುವ ಉತ್ತರ ಪ್ರದೇಶದಲ್ಲಿ ಈ ಬಾರಿ ಬಿಜೆಪಿ 239-245 ಸ್ಥಾನಗಳನ್ನು ಗೆಲ್ಲುವ ಮೂಲಕ ಸ್ಪಷ್ಟ ಬಹುಮತ ಪಡೆದು ಮತ್ತೆ ಅಧಿಕಾರಕ್ಕೆ ಬರಲಿದೆ ಎನ್ನುತ್ತಿದೆ ಟೈಮ್ಸ್ ನೌ ನಡೆಸಿರುವ ಚುನಾವಣಾ ಪೂರ್ವ ಸಮೀಕ್ಷೆ.
ಇನ್ನು ಬಿಜೆಪಿಗೆ ಪ್ರತಿಸ್ಪರ್ಧಿಯಾಗಿರುವ ಅಖಿಲೇಶ್ ಯಾದವ್ ನೇತೃತ್ವದ ಸಮಾಜವಾದಿ ಪಕ್ಷ 119-125 ಸ್ಥಾನಗಳಿಗೆ ತೃಪ್ತಿಪಟ್ಟುಕೊಳ್ಳಬೇಕಾಗುತ್ತದೆ, ಬಿಎಸ್ ಪಿ 28-32 ಸ್ಥಾನಗಳಲ್ಲಿ ಮಾತ್ರ ತನ್ನ ಶಾಸಕರ ಪ್ರಾತಿನಿಧ್ಯದ ಅಸ್ತಿತ್ವ ಉಳಿಸಿಕೊಳ್ಳಲಿದೆ ಎಂದು ಟೈಮ್ಸ್ ನೌ ಸಮೀಕ್ಷೆ ಭವಿಷ್ಯ ನುಡಿದಿದೆ. ಇನ್ನು ಉತ್ತರ ಪ್ರದೇಶದಲ್ಲಿ ಕಾಂಗ್ರೆಸ್ ನ ಪುನರುಜ್ಜೀವನಕ್ಕೆ ತಮ್ಮ ಶತಪ್ರಯತ್ನದ ನಡುವೆಯೂ ಪ್ರಿಯಾಂಕ ವಾಧ್ರ ರಾಜ್ಯದ ಜನಮನ ಗೆಲ್ಲುವುದರಲ್ಲಿ ವಿಫಲರಾಗಲಿದ್ದಾರೆ ಎಂದೂ ಸಮೀಕ್ಷೆ ಹೇಳಿದೆ.
ಬುಂದೇಲ್ ಖಂಡ್ ಪ್ರಾಂತ್ಯದಲ್ಲಿ 19 ಸ್ಥಾನಗಳಿದ್ದು, ಬಿಜೆಪಿ 15-17 ಸ್ಥಾನಗಳನ್ನು ಗೆಲ್ಲಲಿದೆ. ಎಸ್ ಪಿ- 0-1 ಸ್ಥಾನಗಳನ್ನು ಗೆಲ್ಲುವ ಸಾಧ್ಯತೆ ಇದ್ದರೆ ಬಿಎಸ್ ಪಿ 2-5 ಸ್ಥಾನಗಳನ್ನು ಗೆಲ್ಲುವ ನಿರೀಕ್ಷೆ ಇದೆ, ಕಾಂಗ್ರೆಸ್ ಗೆ 1-2 ಸ್ಥಾನಗಳು ಸಿಗಬಹುದು.
ದೋಬ್ ಪ್ರದೇಶದಲ್ಲಿ 71 ಸ್ಥಾನಗಳಿದ್ದು, ಬಿಜೆಪಿ ಇಲ್ಲೂ ಉತ್ತಮ ಸಾಧನೆ ಮಾಡುವ ಸಾಧ್ಯತೆಗಳಿವೆ. ಆಡಳಿತಾರೂಢ ಪಕ್ಷಕ್ಕೆ ಈ ಪ್ರದೇಶದಲ್ಲಿ 37-40 ಸ್ಥಾನಗಳು ಸಿಗುವುದಿದ್ದರೆ, ಸಮಾಜವಾದಿ ಪಕ್ಷ 26-28 ಸ್ಥಾನಗಳನ್ನು ಗೆಲ್ಲಲಿದ್ದು, ಬಿಎಸ್ ಪಿ 4-6 ಸ್ಥಾನಗಳಲ್ಲಿ ಕಾಂಗ್ರೆಸ್ 0-2 ಸ್ಥಾನಗಳಲ್ಲಿ ಗೆಲ್ಲು ಸಾಧ್ಯತೆಗಳಿವೆ.
ಅಖಿಲೇಶ್ ಯಾದವ್ ಅವರು ಚುನಾವಣಾ ರ್ಯಾಲಿಯಲ್ಲಿ ಜಿನ್ನಾ ಪರ ಹೇಳಿಕೆ ನೀಡಿದ್ದಕ್ಕಿಂತಲೂ ಮುನ್ನ ಈ ಸಮೀಕ್ಷೆ ನಡೆದಿದ್ದು, ಈ ಹೇಳಿಕೆ ಬಳಿಕ ಅಖಿಲೇಶ್ ಯಾದವ್ ವಿರುದ್ಧದ ಅಭಿಪ್ರಾಯ ಸೃಷ್ಟಿಯಾಗಿದ್ದು, ಪರಿಣಾಮಗಳು ಮತ್ತಷ್ಟು ನಾಟಕೀಯವಾಗಿ ಬದಲಾಗಬಹುದು ಎಂದು ಚುನಾವಣಾ ವಿಶ್ಲೇಷಕರು ಅಭಿಪ್ರಾಯಪಟ್ಟಿದ್ದಾರೆ. 92 ವಿಧಾನಸಭಾ ಕ್ಷೇತ್ರಗಳನ್ನು ಹೊಂದಿರುವ ಪೂರ್ವಾಂಚಲದಲ್ಲಿ ಬಿಜೆಪಿ 47-50 ಕ್ಷೇತ್ರದಲ್ಲಿ ಗೆದ್ದರೆ, ಎಸ್ ಪಿ 31-35 ಕ್ಷೇತ್ರಗಳಲ್ಲಿ ಗೆಲ್ಲುವ ಸಾಧ್ಯತೆ ಇದೆ.
ಪಶ್ಚಿಮ ಉತ್ತರ ಪ್ರದೇಶದಲ್ಲಿ ಬಿಜೆಪಿ 40-42 ಸ್ಥಾನಗಳನ್ನು ಎಸ್ ಪಿ 21-24 ಸ್ಥಾನಗಳನ್ನು, ಬಿಎಸ್ ಪಿ 2-3 ಸ್ಥಾನ ಗಳಲ್ಲಿ ಗೆಲುವು ಸಾಧಿಸಲಿದೆ ಎನ್ನುತ್ತಿದೆ ಟೈಮ್ಸ್ ನೌ ಸಮೀಕ್ಷೆ.
2017 ರಲ್ಲಿ ಬಿಜೆಪಿ 403 ವಿಧಾನಸಭಾ ಕ್ಷೇತ್ರಗಳ ಪೈಕಿ 312 ಸ್ಥಾನಗಳನ್ನು ಗೆಲ್ಲುವ ಮೂಲಕ ಭರ್ಜರಿ ಬಹುಮತ ಪಡೆದಿತ್ತು. ಸಿಎಂ ಯೋಗಿ ಆದಿತ್ಯನಾಥ್ ಅವರು ಈಗ ಅವಧಿಯನ್ನು ಪೂರ್ಣಗೊಳಿಸುತ್ತಿದ್ದಾರೆ. 2017 ರ ಚುನಾವಣೆಯಲ್ಲಿ ಬಿಜೆಪಿ ಶೇ.40 ರಷ್ಟು ಮತಗಳನ್ನು ಪಡೆದಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


