ದೇಶ

3 ಕೃಷಿ ತಿದ್ದುಪಡಿ ಕಾಯ್ದೆ ವಾಪಸ್: ಭಾರತದಲ್ಲಿ ಈ ಕೃಷಿ ಕಾನೂನನ್ನು ಹೇಗೆ ರದ್ದುಗೊಳಿಸಲಾಗುತ್ತದೆ?

ಗುರುನಾನಕ್ ಜಯಂತಿಯ ಸಂದರ್ಭದಲ್ಲಿ ದೇಶವನ್ನುದ್ದೇಶಿಸಿ ಮಾಡಿದ ಭಾಷಣದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಮುಂಬರುವ ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲಿ ಮೂರು ಕೃಷಿ ಕಾನೂನುಗಳನ್ನು ರದ್ದುಗೊಳಿಸಲಾಗುವುದು ಎಂದು ಹೇಳಿದರು.

3 ಕೃಷಿ ತಿದ್ದುಪಡಿ ಕಾಯ್ದೆ ವಾಪಸ್: ಭಾರತದಲ್ಲಿ ಈ ಕೃಷಿ ಕಾನೂನನ್ನು ಹೇಗೆ ರದ್ದುಗೊಳಿಸಲಾಗುತ್ತದೆ?
ಪ್ರಧಾನಿ ಮೋದಿ ಮತ್ತು ಪ್ರತಿಭಟನಾ ನಿರತ ರೈತರು
Published On :

ನವದೆಹಲಿ: ಗುರುನಾನಕ್ ಜಯಂತಿಯ ಸಂದರ್ಭದಲ್ಲಿ ದೇಶವನ್ನುದ್ದೇಶಿಸಿ ಮಾಡಿದ ಭಾಷಣದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಮುಂಬರುವ ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲಿ ಮೂರು ಕೃಷಿ ಕಾನೂನುಗಳನ್ನು ರದ್ದುಗೊಳಿಸಲಾಗುವುದು ಎಂದು ಹೇಳಿದರು.

"ನಾನು ಏನು ಮಾಡಿದ್ದೇನೋ, ಅದನ್ನು ರೈತರಿಗಾಗಿ ಮಾಡಿದ್ದೇನೆ. ನಾನು ಮಾಡುತ್ತಿರುವುದು ದೇಶಕ್ಕಾಗಿ. ಮುಂಬರುವ ಸಂಸತ್ತಿನ ಅಧಿವೇಶನದಲ್ಲಿ ಈ ಕೃಷಿ ಕಾನೂನುಗಳನ್ನು ರದ್ದುಗೊಳಿಸಲು ನಾವು ಸಾಂವಿಧಾನಿಕ ಕ್ರಮಗಳನ್ನು ತೆಗೆದುಕೊಳ್ಳುತ್ತೇವೆ" ಎಂದು ಪ್ರಧಾನಿ ಮೋದಿ ಹೇಳಿದರು.

ಸಂಸತ್ತಿನ ಚಳಿಗಾಲದ ಅಧಿವೇಶನ ನವೆಂಬರ್ 29 ರಂದು ಪ್ರಾರಂಭವಾಗಲಿದ್ದು, ಡಿಸೆಂಬರ್ 23 ರಂದು ಮುಕ್ತಾಯಗೊಳ್ಳುವ ಸಾಧ್ಯತೆಯಿದೆ. 

ಭಾರತದಲ್ಲಿ ಕಾನೂನನ್ನು ಹೇಗೆ ರದ್ದುಗೊಳಿಸಲಾಗುತ್ತದೆ?
ಯಾವುದೇ ಕಾನೂನಿನ ರೀತಿಯಲ್ಲಿಯೇ ತಿದ್ದುಪಡಿ ಮಸೂದೆಯನ್ನು ಸಂಸತ್ತಿನಲ್ಲಿ ಮಂಡಿಸಬೇಕಾಗುತ್ತದೆ. ಈ ಅಧಿವೇಶನದಲ್ಲಿಯೇ ಇದನ್ನು ಮಂಡಿಸಬಹುದು. ಸಂಸತ್ತಿನಲ್ಲಿ ಅದನ್ನು ಮಂಡಿಸಬೇಕು, ನಂತರ ಚರ್ಚೆ ಮತ್ತು ಮತ ಚಲಾಯಿಸಬೇಕು. ಸಮಯಾವಧಿಯು ರಾಜಕೀಯ ಪ್ರಕ್ರಿಯೆಯ ಮೇಲೆ ಅವಲಂಬಿತವಾಗಿರುತ್ತದೆ. ಪ್ರತಿಪಕ್ಷಗಳು ಸಂಸತ್ತು ಸರಿಯಾಗಿ ಕಾರ್ಯನಿರ್ವಹಿಸಲು ಅವಕಾಶ ನೀಡುತ್ತವೆಯೇ ಎಂದು ಸುಭಾಷ್ ಕಶ್ಯಪ್ ಹೇಳಿದರು.

ತಿದ್ದುಪಡಿಗಾಗಿ ಪ್ರಸ್ತಾವನೆಯನ್ನು ಸಂಬಂಧಪಟ್ಟ ಸಚಿವಾಲಯವು ಕಾನೂನು ಸಚಿವಾಲಯಕ್ಕೆ ಕಳುಹಿಸಬೇಕಾಗುತ್ತದೆ. ಸಚಿವಾಲಯವು ಕಾನೂನು ಅಂಶಗಳನ್ನು ಪರಿಶೀಲಿಸುತ್ತದೆ. ನಂತರ ಸಂಬಂಧಪಟ್ಟ ಸಚಿವರು, ಅಂದ್ರೆ ಕಾನೂನು ಸಚಿವರಲ್ಲ. ಸಂಸತ್ತಿನಲ್ಲಿ ಮಸೂದೆಯನ್ನು ಮಂಡಿಸುತ್ತಾರೆ ಎಂದು ಸುಭಾಷ್ ಕಶ್ಯಪ್ ಹೇಳಿದರು.

ಹೆಚ್ಚಾಗಿ ಪಂಜಾಬ್, ಹರಿಯಾಣ ಮತ್ತು ಪಶ್ಚಿಮ ಉತ್ತರ ಪ್ರದೇಶದ ಸಾವಿರಾರು ರೈತರು ನವೆಂಬರ್ 28, 2020 ರಿಂದ ದೆಹಲಿಯ ಹಲವಾರು ಗಡಿ ಭಾಗಗಳಲ್ಲಿ ಕ್ಯಾಂಪ್ ಹಾಕಿ, ಮೂರು ಕೃಷಿ ಕಾನೂನುಗಳನ್ನು ಸಂಪೂರ್ಣವಾಗಿ ರದ್ದುಗೊಳಿಸಬೇಕು ಮತ್ತು ತಮ್ಮ ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ (MSP) ನೀಡಬೇಕು ಎಂದು ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿದ್ದರು.

Related Article

ಬಿಜೆಪಿಯ ಕ್ರೂರತ್ವವನ್ನು ಮೆಟ್ಟಿನಿಂತು ಹೋರಾಟ ನಡೆಸಿ ಜಯಿಸಿದ್ದೀರಿ: ಮಮತಾ, ರೈತರಿಗೆ ಸೆಲ್ಯೂಟ್ ಎಂದ ವಿಪಕ್ಷ ನಾಯಕರು

ಸತ್ಯಾಗ್ರಹ ಅಹಂಕಾರವನ್ನು ಸೋಲಿಸಿತು: 3 ಕೃಷಿ ಮಸೂದೆಗಳ ರದ್ದು ಕುರಿತು ರಾಹುಲ್ ಗಾಂಧಿ

ಸಂಸತ್ತಿನಲ್ಲಿ ಮಸೂದೆ ರದ್ದಾಗುವವರೆಗೂ ಪ್ರತಿಭಟನೆ ಮುಂದುವರೆಯಲಿದೆ: ರಾಕೇಶ್ ಟಿಕಾಯತ್

ವಿವಾದಿತ 3 ಕೃಷಿ ಕಾಯ್ದೆಗಳ ಹಿಂಪಡೆದ ಕೇಂದ್ರ ಸರ್ಕಾರ: ಘಾಜಿಪುರ ಗಡಿಯಲ್ಲಿ ಸಿಹಿ ಹಂಚಿ ಸಂಭ್ರಮಿಸುತ್ತಿರುವ ರೈತರು!

ರೈತರು-ಕೇಂದ್ರ ಸರ್ಕಾರದ ನಡುವೆ ತಿಕ್ಕಾಟ, ತೀವ್ರ ಸಂಘರ್ಷಕ್ಕೆ ಎಡೆಮಾಡಿದ್ದ ಆ ಮೂರು ತಿದ್ದುಪಡಿ ಕೃಷಿ ಕಾಯ್ದೆಗಳು ಯಾವುವು?

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.