ಸಂಸತ್ತಿನಲ್ಲಿ ಮಸೂದೆ ರದ್ದಾಗುವವರೆಗೂ ಪ್ರತಿಭಟನೆ ಮುಂದುವರೆಯಲಿದೆ: ರಾಕೇಶ್ ಟಿಕಾಯತ್
ಸಂಸತ್ತಿನಲ್ಲಿ 3 ಕೃಷಿ ಮಸೂದೆ ರದ್ದಾಗುವವರೆಗೂ ನಮ್ಮ ಪ್ರತಿಭಟನೆ ಮುಂದುವರೆಯಲಿದೆ ಎಂದು ಭಾರತೀಯ ಕಿಸಾನ್ ಯೂನಿಯನ್ ನಾಯಕ ರಾಕೇಶ್ ಟಿಕಾಯತ್ ಅವರು ಶುಕ್ರವಾರ ಹೇಳಿದ್ದಾರೆ.

ನವದೆಹಲಿ: ಸಂಸತ್ತಿನಲ್ಲಿ 3 ಕೃಷಿ ಮಸೂದೆ ರದ್ದಾಗುವವರೆಗೂ ನಮ್ಮ ಪ್ರತಿಭಟನೆ ಮುಂದುವರೆಯಲಿದೆ ಎಂದು ಭಾರತೀಯ ಕಿಸಾನ್ ಯೂನಿಯನ್ ನಾಯಕ ರಾಕೇಶ್ ಟಿಕಾಯತ್ ಅವರು ಶುಕ್ರವಾರ ಹೇಳಿದ್ದಾರೆ.
ಇಂದು ದೇಶದ ಜನತೆಯನ್ನುದ್ದೇಶಿಸಿ ಮಾತನಾಡಿರುವ ಪ್ರಧಾನಿ ಮೋದಿ ಅವರು, ನೂತನವಾಗಿ ಜಾರಿಗೆ ತರಲಾಗಿರುವ ಮೂರು ಕೃಷಿ ಕಾನೂನುಗಳನ್ನು ವಾಪಸ್ ಪಡೆಯುವುದಾಗಿ ಘೋಷಿಸಿದ್ದಾರೆ.
ಕೇಂದ್ರ ಸರ್ಕಾರ ಈ ನಿರ್ಧಾರ ಬೆನ್ನಲ್ಲೇ ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ರಾಕೇಶ್ ಟಿಕಾಯತ್ ಅವರು, ಪ್ರತಿಭಟನೆಯನ್ನು ಹಿಂಪಡೆಯುವುದಿಲ್ಲ.ಸಂಸತ್ತಿನಲ್ಲಿ ಕೃಷಿ ಕಾನೂನುಗಳನ್ನು ರದ್ದುಪಡಿಸುವ ದಿನಕ್ಕಾಗಿ ನಾವು ಕಾಯುತ್ತೇವೆ. ಎಂಎಸ್'ಪಿ ಜೊತೆಗೆ ರೈತರ ಇತರೆ ಸಮಸ್ಯೆಗಳ ಬಗ್ಗೆಯೂ ಸರ್ಕಾರ ಮಾತನಾಡಬೇಕು ಎಂದು ಹೇಳಿದ್ದಾರೆ.
ಕೇಂದ್ರ ಸರ್ಕಾರ ವಿವಾದಿತ ಕಾನೂನನ್ನು ಹಿಂದಕ್ಕೆ ತೆಗೆದುಕೊಂಡಿದೆ, ಇದೀಗ ಸಂಸತ್ತಿನಲ್ಲಿ ಈ ಕಾಯ್ದೆಗಳು ರದ್ದುಕೊಳ್ಳಬೇಕು. ಇಂದು ಸಂಯುಕ್ತ ಮೋರ್ಚಾ ಸಭೆ ನಡೆಯಲಿದೆ. ಎಲ್ಲಾ ವಿಚಾರಗಳ ಕುರಿತು ಸಭೆಯಲ್ಲಿ ನಿರ್ಧರಿಸಲಾಗುತ್ತದೆ. ಎಂಎಸ್ಪಿ ಕೂಡ ಒಂದು ಸಮಸ್ಯೆಯಾಗಿದೆ. ಇತರ ವಿಷಯಗಳ ಬಗ್ಗೆ ಸರ್ಕಾರದೊಂದಿಗೆ ಮಾತುಕತೆ ನಡೆಸಲು ಸಮಿತಿಯನ್ನು ರಚಿಸಲಾಗುತ್ತದೆ.
ಈಗಲೇ ನಮ್ಮ ಪ್ರತಿಭಟನೆ ಅಂತ್ಯಗೊಳ್ಳುವುದಿಲ್ಲ. ಸಂಯುಕ್ತ ಮೋರ್ಚಾದ 9 ಮಂದಿಯ ಸಮಿತಿಯು ಇಂದು ಸಭೆ ನಡೆಸಿ ಕಾನೂನು ಬದ್ಧವಾಗಿ ಕಾರ್ಯನಿರ್ವಹಿಸಲಾಗುತ್ತದೆ ಎಂದು ತಿಳಿಸಿದ್ದಾರೆ.
ಕೇಂದ್ರದ ನಿರ್ಧಾರ ಸ್ವಾಗತಿಸಿದ ಸಂಯುಕ್ತ ಕಿಸಾನ್ ಮೋರ್ಚಾ
ಮೂರು ಕೃಷಿ ಮಸೂದೆಗಳ ರದ್ದು ಪಡಿಸಿರುವ ಕೇಂದ್ರ ಸರ್ಕಾರದ ನಿರ್ಧಾರವನ್ನು ಸಂಯುಕ್ತ ಕಿಸಾನ್ ಮೋರ್ಚಾ ಸ್ವಾಗತಿಸಿದೆ.
ಎಲ್ಲಾ 3 ರೈತ ವಿರೋಧಿ ಕಾನೂನುಗಳನ್ನು ರದ್ದುಗೊಳಿಸುವ ಪ್ರಧಾನಿ ನರೇಂದ್ರ ಮೋದಿಯವರ ನಿರ್ಧಾರವನ್ನು ನಾವು ಸ್ವಾಗತಿಸುತ್ತೇವೆ. ಮಸೂದೆಗಳ ರದ್ದು ಕುರಿತು ಸಂಸತ್ತಿನ ಕಾರ್ಯವಿಧಾನಗಳ ಮೂಲಕ ಜಾರಿಯಾಗುವ ಘೋಷಣೆಗಾಗಿ ಕಾಯುತ್ತೇವೆ. ಇದು ಸಾಧ್ಯವಾದರೆ, ಇದು ಭಾರತದಲ್ಲಿ ಒಂದು ವರ್ಷದ ರೈತರ ಹೋರಾಟಕ್ಕೆ ಐತಿಹಾಸಿಕ ವಿಜಯ ಸಿಕ್ಕಂತಾಗುತ್ತದೆ ಎಂದು ಹೇಳಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


