ಕೂಲಿ ಕೇಳಿದ್ದಕ್ಕೆ ಕಾರ್ಮಿಕನ ಕೈ ಕತ್ತರಿಸಿದ ಮಾಲೀಕ, ಮಧ್ಯ ಪ್ರದೇಶದಲ್ಲಿ ಮೂವರ ಬಂಧನ
ಕಾರ್ಮಿಕನೊಬ್ಬ ತನ್ನ ಬಾಕಿ ಕೂಲಿಯನ್ನು ಕೇಳಿದ್ದಕ್ಕೆ ಆಕ್ರೋಶಗೊಂಡ ಮಾಲೀಕ ಆತನ ಕೈಯನ್ನೇ ಕತ್ತರಿಸಿ ಹಾಕಿರುವ ಘಟನೆ ಮಧ್ಯ ಪ್ರದೇಶದಲ್ಲಿ ನಡೆದಿದೆ.

ಭೋಪಾಲ್: ಕಾರ್ಮಿಕನೊಬ್ಬ ತನ್ನ ಬಾಕಿ ಕೂಲಿಯನ್ನು ಕೇಳಿದ್ದಕ್ಕೆ ಆಕ್ರೋಶಗೊಂಡ ಮಾಲೀಕ ಆತನ ಕೈಯನ್ನೇ ಕತ್ತರಿಸಿ ಹಾಕಿರುವ ಘಟನೆ ಮಧ್ಯ ಪ್ರದೇಶದಲ್ಲಿ ನಡೆದಿದೆ.
ಮಧ್ಯಪ್ರದೇಶದ ರೇವಾ ಜಿಲ್ಲೆಯಲ್ಲಿ ಈ ಘಟನೆ ನಡೆದಿದ್ದು, ರೇವಾ ಜಿಲ್ಲಾ ಕೇಂದ್ರದಿಂದ 40 ಕಿ.ಮೀ. ದೂರದಲ್ಲಿರುವ ಸಿರ್ಮೌರ್ ಪೊಲೀಸ್ ಠಾಣಾ ವ್ಯಾಪ್ತಿಯ ಡೊಲ್ಮಾವು ಗ್ರಾಮದಲ್ಲಿ ಶನಿವಾರ ಈ ಘಟನೆ ನಡೆದಿದೆ ಎಂದು ತಿಳಿದುಬಂದಿದೆ.
ಕಾರ್ಮಿಕನೊಬ್ಬ ತನ್ನ ಬಾಕಿ ಕೂಲಿಯನ್ನು ಕೇಳಿದ್ದಕ್ಕೆ ಮಾಲೀಕರು ಆತನ ಕೈ ಕತ್ತರಿಸಿದ್ದಾರೆ. ಸಂತ್ರಸ್ತ ಕೂಲಿ ಕಾರ್ಮಿಕ ಅಶೋಕ್ ಸಾಕೇತ್, ಪಾಡ್ರಿ ಗ್ರಾಮದ ನಿವಾಸಿಯಾಗಿದ್ದು ಈ ಮೊದಲು ಡೊಲ್ಮಾವು ಗ್ರಾಮದ ಗಣೇಶ ಮಿಶ್ರಾ ಅವರ ನಿರ್ಮಾಣ ಕೆಲಸದಲ್ಲಿ ಕಾರ್ಮಿಕನಾಗಿ ದುಡಿಯುತ್ತಿದ್ದರು. ಬಾಕಿ ಕೂಲಿಯ ಸಂಬಂಧ ಸಾಕೇತ್ ಮತ್ತು ಮಿಶ್ರಾ ನಡುವೆ ಮಾತಿನ ಚಕಮಕಿ ನಡೆದಿತ್ತು. ಬಳಿಕ ಮಾತು ವಿಕೋಪಕ್ಕೆ ತಿರುಗಿ ಮಿಶ್ರಾ ಮತ್ತು ಆತನ ಕಡೆಯವರು ಹರಿತ ಆಯುಧದಿಂದ ಸಾಕೇತ್ ಮೇಲೆ ಹಲ್ಲೆ ನಡೆಸಿದ್ದಾರೆ. ಮಾಲೀಕ ಮಿಶ್ರಾ ಹರಿತವಾದ ಆಯುಧದಿಂದ ಸಾಕೇತ್ ಕೈ ಕತ್ತರಿಸಿದ್ದಾರೆ ಎನ್ನಲಾಗಿದೆ.
ಇನ್ನು ಪ್ರಕರಣ ಸಂಬಂಧ ಪೊಲೀಸರು ಮೂವರನ್ನು ಬಂಧಿಸಿದ್ದಾರೆ. ಘಟನೆ ನಡೆದ ಸ್ವಲ್ಪ ಸಮಯದಲ್ಲೇ ಗಾಯಗೊಂಡ ಕಾರ್ಮಿಕನನ್ನು ಪೊಲೀಸರು ಸಂಜಯ ಗಾಂಧಿ ಸ್ಮಾರಕ ಆಸ್ಪತ್ರೆಗೆ ರವಾನಿಸಿದರು. ಅಲ್ಲಿ ವೈದ್ಯರ ತಂಡವೊಂದು ಶಸ್ತ್ರಚಿಕಿತ್ಸೆಯ ಮೂಲಕ ಕಾರ್ಮಿಕನಿಗೆ ಕೈಯನ್ನು ಮರುಜೋಡಿಸಿದ್ದಾರೆ. ಬಹಳ ರಕ್ತ ಹೋಗಿದ್ದರಿಂದ ಕಾರ್ಮಿಕನ ಸ್ಥಿತಿ ಗಂಭೀರವಾಗಿದೆ ಎಂದು ಸಹಾಯಕ ಪೊಲೀಸ್ ಅಧೀಕ್ಷಕ ಶಿವಕುಮಾರ್ ವರ್ಮಾ ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


