ಬಾಲಾಕೋಟ್ ಹಿರೋ ಅಭಿನಂದನ್ ವರ್ಧಮಾನ್ ಗೆ ಇಂದು ವೀರ ಚಕ್ರ ಪ್ರದಾನ
ಬಾಲಾಕೋಟ್ ವೈಮಾನಿಕ ಸರ್ಜಿಕಲ್ ಸ್ಟ್ರೈಕ್ ನಂತರದ ಘಟನೆಯಲ್ಲಿ ಪಾಕಿಸ್ತಾನಕ್ಕೆ ನಡುಕ ಹುಟ್ಟಿಸಿದ ಗ್ರೂಪ್ ಕ್ಯಾಪ್ಟನ್ ಅಭಿನಂದನ್ ವರ್ಧಮಾನ್ ಗೆ ನ.22 ರಂದು ವೀರ ಚಕ್ರ ಪಶಸ್ತಿ ಪ್ರದಾನ ಮಾಡಲಾಗುತ್ತದೆ.

ನವದೆಹಲಿ: ಬಾಲಾಕೋಟ್ ವೈಮಾನಿಕ ಸರ್ಜಿಕಲ್ ಸ್ಟ್ರೈಕ್ ನಂತರದ ಘಟನೆಯಲ್ಲಿ ಪಾಕಿಸ್ತಾನಕ್ಕೆ ನಡುಕ ಹುಟ್ಟಿಸಿದ ಗ್ರೂಪ್ ಕ್ಯಾಪ್ಟನ್ ಅಭಿನಂದನ್ ವರ್ಧಮಾನ್ ಗೆ ನ.22 ರಂದು ವೀರ ಚಕ್ರ ಪಶಸ್ತಿ ಪ್ರದಾನ ಮಾಡಲಾಗುತ್ತದೆ.
ರಾಷ್ಟ್ರಪತಿ ರಾಮನಾಥ್ ಕೋವಿಂದ್ ಇಂದು ನಡೆಯಲಿರುವ ಸಮಾರಂಭದಲ್ಲಿ ಅಭಿನಂದನ್ ಅವರಿಗೆ ವೀರ ಚಕ್ರ ಪ್ರಶಸ್ತಿಯನ್ನು ಪ್ರದಾನ ಮಾಡಲಿದ್ದಾರೆ.
ಪುಲ್ವಾಮ ಉಗ್ರ ದಾಳಿಗೆ ಪ್ರತೀಕಾರವಾಗಿ ಬಾಲಾಕೋಟ್ ನಲ್ಲಿ ಭಾರತ ನಡೆಸಿದ್ದ ವೈಮಾನಿಕ ದಾಳಿಗೆ ಪ್ರತಿಯಾಗಿ ಪಾಕ್ ನಡೆಸಿದ ದಾಳಿಯ ವೇಳೆ ಫೆ.27, 2019 ರಲ್ಲಿ ಪಾಕಿಸ್ತಾನದ ಎಫ್-16 ಫೈಟರ್ ಜೆಟ್ ನ್ನು ಹೊಡೆದುರುಳಿಸಿ, ಸಂಘರ್ಷದ ಪರಿಸ್ಥಿತಿಯಲ್ಲಿ ಶೌರ್ಯದಿಂದ ಹೋರಾಡಿದ್ದಕ್ಕಾಗಿ ಅಭಿನಂದನ್ ಅವರನ್ನು ಗೌರವಿಸಲಾಗುತ್ತಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


