ಪಂಜಾಬ್ನಲ್ಲಿ ಆಪ್ ಆಧಿಕಾರಕ್ಕೆ ಬಂದರೆ 18 ತುಂಬಿದ ಮಹಿಳೆಯರಿಗೆ ತಿಂಗಳಿಗೆ ಸಾವಿರ ರೂ: ದೆಹಲಿ ಸಿಎಂ ಕೇಜ್ರಿವಾಲ್
ಪಂಜಾಬ್ನಲ್ಲಿ ಆಮ್ ಆದ್ಮಿ ಪಕ್ಷ ಸರ್ಕಾರ ರಚನೆ ಮಾಡಿದರೆ, 18 ವರ್ಷ ತುಂಬಿದ ಎಲ್ಲಾ ಯುವತಿಯರಿಗೂ ಪ್ರತಿ ತಿಂಗಳು 1 ಸಾವಿರ ರೂ. ಸಹಾಯಧನ ನೀಡುವುದಾಗಿ ಆಮ್ ಆದ್ಮಿ ಪಕ್ಷದ ಮುಖ್ಯಸ್ಥ ಹಾಗೂ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಭರವಸೆ ನೀಡಿದ್ದಾರೆ.

ಮೊಗಾ: ಪಂಜಾಬ್ನಲ್ಲಿ ಆಮ್ ಆದ್ಮಿ ಪಕ್ಷ ಸರ್ಕಾರ ರಚನೆ ಮಾಡಿದರೆ, 18 ವರ್ಷ ತುಂಬಿದ ಎಲ್ಲಾ ಯುವತಿಯರಿಗೂ ಪ್ರತಿ ತಿಂಗಳು 1 ಸಾವಿರ ರೂ. ಸಹಾಯಧನ ನೀಡುವುದಾಗಿ ಆಮ್ ಆದ್ಮಿ ಪಕ್ಷದ ಮುಖ್ಯಸ್ಥ ಹಾಗೂ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಭರವಸೆ ನೀಡಿದ್ದಾರೆ.
ಇದನ್ನೂ ಓದಿ: ಪಂಜಾಬ್ ನಲ್ಲಿ ಎಎಪಿ ಅಧಿಕಾರಕ್ಕೆ ಬಂದರೆ ಸರ್ಕಾರಿ ಆಸ್ಪತ್ರೆಗಳಲ್ಲಿ ಉಚಿತ ಚಿಕಿತ್ಸೆ: ಕೇಜ್ರಿವಾಲ್ ಭರವಸೆ
ಎರಡು ದಿನಗಳ ಪಂಜಾಬ್ ಪ್ರವಾಸದಲ್ಲಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮೊಗಾದಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದರು. 'ಪಂಜಾಬ್ನಲ್ಲಿ 2022ರ ಆರಂಭದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ. ಪಂಜಾಬ್ ಚುನಾವಣೆಗೋಸ್ಕರ ಈಗಾಗಲೇ 10 ಅಭ್ಯರ್ಥಿಗಳ ಮೊದಲ ಪಟ್ಟಿ ರಿಲೀಸ್ ಮಾಡಲಾಗಿದೆ. ಈ ಹಿಂದೆ ಕೂಡ ಇಲ್ಲಿಗೆ ಭೇಟಿ ನೀಡಿದ್ದ ವೇಳೆ ರಾಜ್ಯದಲ್ಲಿ ಸರ್ಕಾರ ಅಧಿಕಾರಕ್ಕೆ ಬಂದರೆ ರೈತರ ಪಂಪ್ಸೆಟ್, ಮನೆಯ ವಿದ್ಯುತ್ ಬಿಲ್ ಸಂಪೂರ್ಣವಾಗಿ ಮನ್ನಾ' ಮಾಡುವುದಾಗಿ ಕೇಜ್ರಿವಾಲ್ ತಿಳಿಸಿದ್ದರು.
ಇದೀಗ ಮಹಿಳೆಯರಿಗೋಸ್ಕರ ಈ ಯೋಜನೆ ಜಾರಿಗೆ ತರುವುದಾಗಿ ಹೇಳಿದ್ದಾರೆ. ಒಂದು ವೇಳೆ ಮನೆಯಲ್ಲಿ ಮೂವರು (ಅತ್ತೆ , ಸೊಸೆ, ಮಗಳು) ಇದ್ದರೆ ಎಲ್ಲರಿಗೂ ಪ್ರತಿ ತಿಂಗಳು ಸಾವಿರ ರೂಪಾಯಿ ನೀಡಲಾಗುತ್ತದೆ. ಇದರಲ್ಲಿ ಪಿಂಚಣಿ ಪಡೆಯುವವರು ಇದ್ದರೆ ಅದರ ಜೊತೆಗೆ ಈ ಹಣವನ್ನೂ ಸಹ ಜಮೆ ಮಾಡಲಾಗುತ್ತದೆ ಎಂದು ಹೇಳಿದ್ದಾರೆ. ಹಾಗೆ 1 ಕೋಟಿಗೂ ಹೆಚ್ಚು ಮಹಿಳೆಯರು ಇದರಿಂದ ಪ್ರಯೋಜನ ಪಡೆಯಲಿದ್ದಾರೆ ಎಂದು ಆಮ್ ಆದ್ಮಿ ಪಕ್ಷ ಹೇಳಿಕೊಂಡಿದೆ.
Related Article
ರೈತರ ವಿರುದ್ಧ ಏಕೆ ಅಷ್ಟೊಂದು ದ್ವೇಷ?: ಲಖಿಂಪುರ್ ಖೇರಿ ಘಟನೆ ಕುರಿತು ಪ್ರಧಾನಿ ಮೋದಿಗೆ ಕೇಜ್ರಿವಾಲ್ ಪ್ರಶ್ನೆ
ಪಂಜಾಬ್ ನಲ್ಲಿ ಎಎಪಿ ಅಧಿಕಾರಕ್ಕೆ ಬಂದರೆ ಸರ್ಕಾರಿ ಆಸ್ಪತ್ರೆಗಳಲ್ಲಿ ಉಚಿತ ಚಿಕಿತ್ಸೆ: ಕೇಜ್ರಿವಾಲ್ ಭರವಸೆ
ಮುಂದಿನ ವರ್ಷ ಗೋವಾದಲ್ಲಿ ಎಎಪಿ ಅಧಿಕಾರಕ್ಕೆ ಬಂದರೆ ಸ್ಥಳೀಯರಿಗೆ ಶೇ. 80 ರಷ್ಟು ಉದ್ಯೋಗ: ಕೇಜ್ರಿವಾಲ್
ದೆಹಲಿಯಲ್ಲಿ ವಾಯು ಮಾಲೀನ್ಯ ಭೀತಿ: ಈ ವರ್ಷವೂ ಪಟಾಕಿ ಬಳಕೆ, ಮಾರಾಟ ನಿಷೇಧಿಸಿದ ಕೇಜ್ರಿವಾಲ್ ಸರ್ಕಾರ!
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


