ಕೋವಿಡ್-19: ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 8,488 ಹೊಸ ಪ್ರಕರಣ, 12,510 ಮಂದಿ ಗುಣಮುಖ, 249 ಸಾವು
ಭಾರತದಲ್ಲಿ ಮಹಾಮಾರಿ ಕೊರೋನಾ ಅಬ್ಬರ ಸೋಮವಾರ ಮತ್ತಷ್ಟು ಇಳಿಕೆಯಾಗಿದೆ. ದೇಶದಲ್ಲಿ ಸೋಮವಾರ ಬೆಳಗ್ಗೆ 8 ಗಂಟೆಗೆ ಕೊನೆಗೊಂಡ 24 ತಾಸುಗಳ ಅವಧಿಯಲ್ಲಿ 8 ಸಾವಿರದ 488 ಕೊರೋನಾ ಪ್ರಕರಣಗಳು ದೃಢಪಟ್ಟಿದ್ದು, ಇದೇ ಅವಧಿಯಲ್ಲಿ 249 ಮಂದಿ ಮೃತಪಟ್ಟಿದ್ದಾರೆ. ಇದು ಕಳೆದ 538 ದಿನಗಳಲ್ಲಿಯೇ ಅತಿ ಕಡಿಮೆಯಾಗಿದೆ ಎಂದು ಕೇಂದ್ರ ಆರೋಗ್ಯ ಇಲಾಖೆಯ ಅಂಕಿಅಂಶ ತಿಳಿಸಿದೆ.

ನವದೆಹಲಿ: ಭಾರತದಲ್ಲಿ ಮಹಾಮಾರಿ ಕೊರೋನಾ ಅಬ್ಬರ ಸೋಮವಾರ ಮತ್ತಷ್ಟು ಇಳಿಕೆಯಾಗಿದೆ. ದೇಶದಲ್ಲಿ ಸೋಮವಾರ ಬೆಳಗ್ಗೆ 8 ಗಂಟೆಗೆ ಕೊನೆಗೊಂಡ 24 ತಾಸುಗಳ ಅವಧಿಯಲ್ಲಿ 8 ಸಾವಿರದ 488 ಕೊರೋನಾ ಪ್ರಕರಣಗಳು ದೃಢಪಟ್ಟಿದ್ದು, ಇದೇ ಅವಧಿಯಲ್ಲಿ 249 ಮಂದಿ ಮೃತಪಟ್ಟಿದ್ದಾರೆ. ಇದು ಕಳೆದ 538 ದಿನಗಳಲ್ಲಿಯೇ ಅತಿ ಕಡಿಮೆಯಾಗಿದೆ ಎಂದು ಕೇಂದ್ರ ಆರೋಗ್ಯ ಇಲಾಖೆಯ ಅಂಕಿಅಂಶ ತಿಳಿಸಿದೆ.
ದೇಶದಲ್ಲಿ ಒಟ್ಟು ಸಕ್ರಿಯ ಸೋಂಕಿತರ ಸಂಖ್ಯೆ 1 ಲಕ್ಷದ 18 ಸಾವಿರದ 443 ಇದ್ದು, ಕಳೆದ 534 ದಿನಗಳಲ್ಲಿಯೇ ಅತಿ ಕಡಿಮೆಯಾಗಿದೆ.ಒಟ್ಟು ಸೋಂಕಿತರ ಸಂಖ್ಯೆಯಲ್ಲಿ ಶೇಕಡಾ 1ಕ್ಕಿಂತ ಕಡಿಮೆಯಿದ್ದು ಕಳೆದ ವರ್ಷ ಮಾರ್ಚ್ ತಿಂಗಳಿನಿಂದ ಅತಿ ಕಡಿಮೆಯಾಗಿದೆ. ಇನ್ನು 12 ಸಾವಿರದ 510 ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ.
ಇಂದು 8 ಸಾವಿರದ 488 ಹೊಸ ಪ್ರಕರಣಗಳಲ್ಲಿ ಕೇರಳ ರಾಜ್ಯದಲ್ಲಿ 5 ಸಾವಿರದ 80 ಮಂದಿ ಕೇಸುಗಳು ವರದಿಯಾಗಿದ್ದು, 7 ಸಾವಿರದ 908 ಮಂದಿ ಗುಣಮುಖರಾಗಿದ್ದು 40 ಮಂದಿ ಮೃತಪಟ್ಟಿದ್ದಾರೆ. ಇದುವರೆಗೆ ದೇಶದಲ್ಲಿ ಕೋವಿಡ್ ನಿಂದ ಗುಣಮುಖ ಹೊಂದಿದವರ ಸಂಖ್ಯೆ 3 ಕೋಟಿಯ 39 ಲಕ್ಷದ 34 ಸಾವಿರದ 547 ಆಗಿದೆ.
ಇನ್ನು ಭಾರತದಲ್ಲಿ ಒಂದೇ 7 ಲಕ್ಷದ 83 ಸಾವಿರದ 567 ಮಂದಿಯನ್ನು ಕೊರೋನಾ ಪರೀಕ್ಷೆಗೊಳಪಡಿಸಲಾಗಿದ್ದು, 63 ಕೋಟಿಯ 25 ಲಕ್ಷದ 24 ಸಾವಿರದ 259 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ.
ಕೇಂದ್ರ ಸರ್ಕಾರ ಮಾಹಿತಿ ನೀಡಿರುವ ಪ್ರಕಾರ ಲಸಿಕೆ ಅಭಿಯಾನ ಆರಂಭವಾಗಿ ಇಲ್ಲಿಯವರೆಗೂ ಒಟ್ಟಾರೆ 116.87 ಕೋಟಿ ಲಸಿಕೆ ಡೋಸ್ ನ್ನು ನೀಡಲಾಗಿದೆ ಎಂದು ತಿಳಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


