ದೇಶ

ಮಟನ್ ಚೀಲ ಹೊತ್ಯೊಯ್ದ ಬೀದಿ ನಾಯಿಯನ್ನು ನಿರ್ದಯವಾಗಿ ದೊಣ್ಣೆಯಿಂದ ಬಡಿದು ಕೊಂದ ವ್ಯಕ್ತಿ!

ಇಂದೋರ್‌ನಲ್ಲಿ ಬೀದಿ ನಾಯಿಯನ್ನು ದೊಣ್ಣೆಯಿಂದ ಹೊಡೆದು ಕೊಂದ ಆರೋಪದ ಮೇಲೆ 40 ವರ್ಷದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ.

ಮಟನ್ ಚೀಲ ಹೊತ್ಯೊಯ್ದ ಬೀದಿ ನಾಯಿಯನ್ನು ನಿರ್ದಯವಾಗಿ ದೊಣ್ಣೆಯಿಂದ ಬಡಿದು ಕೊಂದ ವ್ಯಕ್ತಿ!
ಸಂಗ್ರಹ ಚಿತ್ರ
Published On :

ಇಂದೋರ್ (ಮಧ್ಯಪ್ರದೇಶ): ಇಂದೋರ್‌ನಲ್ಲಿ ಬೀದಿ ನಾಯಿಯನ್ನು ದೊಣ್ಣೆಯಿಂದ ಹೊಡೆದು ಕೊಂದ ಆರೋಪದ ಮೇಲೆ 40 ವರ್ಷದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. 

ಆರೋಪಿಯ ಮನೆಗೆ ನುಗ್ಗಿದ್ದ ನಾಯಿ ಮೇಕೆ ಮಾಂಸದ ಚೀಲದೊಂದಿಗೆ ಪರಾರಿಯಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ. 

ವಿಜಯ ನಗರ ಪೊಲೀಸ್ ಠಾಣೆಯ ಪ್ರಭಾರಿ ತಹಜೀಬ್ ಖಾಜಿ ಮಾತನಾಡಿ, ಬೀದಿಯಲ್ಲಿ ತಿರುಗಾಡಿಕೊಂಡಿದ್ದ ನಾಯಿ ಭಾನುವಾರ ರಾತ್ರಿ ಜಗದೀಶ್ ಚೌಹಾಣ್ ಅಲಿಯಾಸ್ ಠಾಕೂರ್(40) ಎಂಬುವರ ಮನೆಗೆ ನುಗ್ಗಿ ಕುರಿ ಮಾಂಸದ ಚೀಲವನ್ನು ಬಾಯಿಗೆ ತುರುಕಿಕೊಂಡು ಅಲ್ಲಿಂದ ಪರಾರಿಯಾಗಿತ್ತು. ಇದರಿಂದ ಆಕ್ರೋಶಗೊಂಡ ಜಗದೀಶ್ ಹಿಂಬಾಲಿಸಿಕೊಂಡು ಬಂದು ನಾಯಿ ಸಾಯುವವರೆಗೂ ಕೋಲಿನಿಂದ ನಿರ್ದಯವಾಗಿ ಥಳಿಸಿದ್ದಾನೆ ಎಂದು ಹೇಳಿದರು.

ಪ್ರಾಣಿಗಳ ಮೇಲಿನ ದೌರ್ಜನ್ಯ ತಡೆ ಕಾಯ್ದೆ ಮತ್ತು ಭಾರತೀಯ ದಂಡ ಸಂಹಿತೆಯ ಸಂಬಂಧಿತ ನಿಬಂಧನೆಗಳ ಅಡಿಯಲ್ಲಿ ಚೌಹಾಣ್ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಲಾಗಿದೆ ಎಂದು ಎಸ್ಎಚ್ಒ ಹೇಳಿದರು. ಪೀಪಲ್ ಫಾರ್ ಅನಿಮಲ್ಸ್ ಇಂದೋರ್ ಘಟಕದ ಅಧ್ಯಕ್ಷ ಪ್ರಿಯಾಂಶು ಜೈನ್ ಅವರ ದೂರಿನ ಮೇರೆಗೆ ದೂರು ದಾಖಲಿಸಲಾಗಿದೆ ಎಂದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.