ಸಂಸತ್ ಚಳಿಗಾಲದ ಅಧಿವೇಶನ: ಸರ್ವ ಪಕ್ಷ ಸಭೆಯಲ್ಲಿ ಪ್ರಧಾನಿ ಮೋದಿ ಭಾಗಿ ಸಾಧ್ಯತೆ
ಮುಂಬರುವ ಸಂಸತ್ತಿನ ಚಳಿಗಾಲದ ಅಧಿವೇಶನ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಭಾನುವಾರ ಸರ್ವ ಪಕ್ಷ ಸಭೆಯನ್ನು ಆಯೋಜಿಸುತ್ತಿದ್ದು, ಪ್ರಧಾನಿ ನರೇಂದ್ರ ಮೋದಿ ಭಾಗವಹಿಸುವ ಸಾಧ್ಯತೆಯಿರುವುದಾಗಿ ಮೂಲಗಳು ಸೋಮವಾರ ಹೇಳಿವೆ.

ನವದೆಹಲಿ: ಮುಂಬರುವ ಸಂಸತ್ತಿನ ಚಳಿಗಾಲದ ಅಧಿವೇಶನ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಭಾನುವಾರ ಸರ್ವ ಪಕ್ಷ ಸಭೆಯನ್ನು ಆಯೋಜಿಸುತ್ತಿದ್ದು, ಪ್ರಧಾನಿ ನರೇಂದ್ರ ಮೋದಿ ಭಾಗವಹಿಸುವ ಸಾಧ್ಯತೆಯಿರುವುದಾಗಿ ಮೂಲಗಳು ಸೋಮವಾರ ಹೇಳಿವೆ.
ಸಂಸತ್ತಿನ ಉಭಯ ಸದನಗಳ ಎಲ್ಲಾ ರಾಜಕೀಯ ಪಕ್ಷಗಳ ಸದನದ ನಾಯಕರನ್ನು ಸಭೆಗೆ ಆಹ್ವಾನಿಸಲಾಗಿದೆ ಎಂದು ಅವು ತಿಳಿಸಿವೆ.
ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಹಿರಿಯ ಸಚಿವರಾದ ಅಮಿತ್ ಶಾ, ರಾಜನಾಥ್ ಸಿಂಗ್, ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಷಿ, ಸಭೆಯಲ್ಲಿ ಸರ್ಕಾರವನ್ನು ಪ್ರತಿನಿಧಿಸಲಿದ್ದಾರೆ. ರಾಜ್ಯಸಭೆ ಸಭಾಪತಿ ಎಂ. ವೆಂಕಯ್ಯ ನಾಯ್ಡು ಭಾನುವಾರ ಸಂಜೆ ಮೇಲ್ಮನೆಯ ಸದನದ ನಾಯಕರ ಸಭೆಯನ್ನು ಕರೆದಿದ್ದಾರೆ.
ಇದೇ ರೀತಿಯಲ್ಲಿ ನವೆಂಬರ್ 27 ರಂದು ಲೋಕಸಭೆಯಲ್ಲಿ ಸದನದ ನಾಯಕರುಗಳ ಸಭೆಯನ್ನು ಸ್ಪೀಕರ್ ಓಂ ಬಿರ್ಲಾ ಕರೆಯುವ ಸಾಧ್ಯತೆಯಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


