ದೇಶ

ಮುಂಬೈ ಮಾಜಿ ಪೊಲೀಸ್‌ ಆಯುಕ್ತ ಪರಮ್ ಬೀರ್ ಸಿಂಗ್ ಗೆ ಬಂಧನದಿಂದ ಬಿಗ್ ರಿಲೀಫ್​ ನೀಡಿದ 'ಸುಪ್ರೀಂ'

ಮಹಾರಾಷ್ಟ್ರದ ಮಾಜಿ ಗೃಹ ಸಚಿವ ಅನಿಲ್ ದೇಶಮುಖ್ ವಿರುದ್ಧ ಸುಲಿಗೆ ಆರೋಪ ಮಾಡಿದ್ದ ಮುಂಬೈನ ಮಾಜಿ ಪೊಲೀಸ್ ಕಮಿಷನರ್ ಪರಮ್ ಬೀರ್ ಸಿಂಗ್ ವಿರುದ್ಧ ದಾಖಲಾಗಿರುವ ಆರು ಪ್ರಕರಣಗಳಿಗೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ಸೋಮವಾರ ಬಂಧನದಿಂದ ರಕ್ಷಣೆ ನೀಡಿದೆ.

ಮುಂಬೈ ಮಾಜಿ ಪೊಲೀಸ್‌ ಆಯುಕ್ತ ಪರಮ್ ಬೀರ್ ಸಿಂಗ್ ಗೆ ಬಂಧನದಿಂದ ಬಿಗ್ ರಿಲೀಫ್​ ನೀಡಿದ 'ಸುಪ್ರೀಂ'
ಪರಮ್ ಬೀರ್ ಸಿಂಗ್
Published On :

ನವದೆಹಲಿ: ಮಹಾರಾಷ್ಟ್ರದ ಮಾಜಿ ಗೃಹ ಸಚಿವ ಅನಿಲ್ ದೇಶಮುಖ್ ವಿರುದ್ಧ ಸುಲಿಗೆ ಆರೋಪ ಮಾಡಿದ್ದ ಮುಂಬೈನ ಮಾಜಿ ಪೊಲೀಸ್ ಕಮಿಷನರ್ ಪರಮ್ ಬೀರ್ ಸಿಂಗ್ ವಿರುದ್ಧ ದಾಖಲಾಗಿರುವ ಆರು ಪ್ರಕರಣಗಳಿಗೆ ಸಂಬಂಧಿಸಿದಂತೆ  ಸುಪ್ರೀಂಕೋರ್ಟ್ ಸೋಮವಾರ ಬಂಧನದಿಂದ ರಕ್ಷಣೆ ನೀಡಿದೆ.

ಸಿಂಗ್ ಭಾರತದಲ್ಲಿ ಇದ್ದಾರೆ ಎಂದು ಅವರ ಪರ ವಕೀಲರು ಸುಪ್ರೀಂಕೋರ್ಟ್ ಗೆ ತಿಳಿಸಿದ ನಂತರ ದೇಶದ ಎರಡನೇ ಹಿರಿಯ-ಐಪಿಎಸ್ ಅಧಿಕಾರಿ ಸಿಂಗ್ ಬಂಧನದಿಂದ ರಕ್ಷಣೆ ಪಡೆದರು.

ನಾನು ದೇಶದಲ್ಲಿಯೇ ಇದ್ದೇನೆ ಎಂದು ಸಿಂಗ್ ಅವರ ವಕೀಲರು ನ್ಯಾಯಾಲಯಕ್ಕೆ ತಿಳಿಸಿದರು. ಮಹಾರಾಷ್ಟ್ರಕ್ಕೆ ಬರಲು ನನಗೆ ಮುಂಬೈ ಪೊಲೀಸರಿಂದ ಜೀವ ಬೆದರಿಕೆ ಇದೆ ಮತ್ತು ಅದಕ್ಕಾಗಿಯೇ ನಾನು ಅಕ್ಟೋಬರ್ ಮೊದಲ ವಾರದಿಂದ ಕಾಣೆಯಾಗಿದ್ದಾರೆ ಎಂದು ಸಿಂಗ್ ಆರೋಪಿಸಿದ್ದಾರೆ.

ನ್ಯಾಯಮೂರ್ತಿಗಳಾದ ಎಸ್ ಕೆ ಕೌಲ್ ಮತ್ತು ಎಂ ಎಂ ಸುಂದ್ರೇಶ್ ಅವರನ್ನೊಳಗೊಂಡ ಪೀಠವು ಸಿಂಗ್ ಅವರ ಮನವಿಯ ಮೇರೆಗೆ ಮಹಾರಾಷ್ಟ್ರ ಸರ್ಕಾರ, ಅದರ ಡಿಜಿಪಿ ಸಂಜಯ್ ಪಾಂಡೆ ಮತ್ತು ಸಿಬಿಐಗೆ ನೋಟಿಸ್ ಜಾರಿ ಮಾಡಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.