ದೇಶ

ಅಮೆಜಾನ್​ ಮೂಲಕ ಗಾಂಜಾ ಸಾಗಾಟ: ಮತ್ತೆ ನಾಲ್ವರನ್ನು ಬಂಧಿಸಿದ ಪೊಲೀಸರು

ಮಧ್ಯಪ್ರದೇಶ ಮತ್ತು ಆಂಧ್ರಪ್ರದೇಶದಿಂದ ಅಮೆಜಾನ್ ಮೂಲಕ ಗಾಂಜಾ ಕಳ್ಳಸಾಗಣೆ ಮಾಡುತ್ತಿದ್ದ ಮತ್ತೆ ನಾಲ್ವರನ್ನು ಪೊಲೀಸರು ಮಂಗಳವಾರ ಬಂಧಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಇದುವರೆಗೆ ಒಟ್ಟು 8 ಆರೋಪಿಗಳನ್ನು ಬಂಧಿಸಲಾಗಿದೆ.

ಅಮೆಜಾನ್​ ಮೂಲಕ ಗಾಂಜಾ ಸಾಗಾಟ: ಮತ್ತೆ ನಾಲ್ವರನ್ನು ಬಂಧಿಸಿದ ಪೊಲೀಸರು
ಸಾಂದರ್ಭಿಕ ಚಿತ್ರ
Published On :

ವಿಶಾಖಪಟ್ಟಣಂ: ಮಧ್ಯಪ್ರದೇಶ ಮತ್ತು ಆಂಧ್ರಪ್ರದೇಶದಿಂದ ಅಮೆಜಾನ್ ಮೂಲಕ ಗಾಂಜಾ ಕಳ್ಳಸಾಗಣೆ ಮಾಡುತ್ತಿದ್ದ ಮತ್ತೆ ನಾಲ್ವರನ್ನು ಪೊಲೀಸರು ಮಂಗಳವಾರ ಬಂಧಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಇದುವರೆಗೆ ಒಟ್ಟು 8 ಆರೋಪಿಗಳನ್ನು ಬಂಧಿಸಲಾಗಿದೆ.

ನವೆಂಬರ್ 13 ರಂದು ಮಧ್ಯಪ್ರದೇಶದ ಭಿಂಡ್ ಪೊಲೀಸರು ಮೊದಲು ಈ ಪ್ರಕರಣವನ್ನು ಭೇದಿಸಿದ್ದರು. ಇದೀಗ ವಿಶಾಖಪಟ್ಟಣಂ ಪೊಲೀಸರ ಭ್ರಷ್ಟಾಚಾರ ನಿಗ್ರಹ ದಳವು ಇಂದು ನಾಲ್ವರನ್ನು ಬಂಧಿಸಿದೆ.

ಭಿಂಡ್​ ಎಸ್ಪಿ ಮನೋಜ್ ಸಿಂಗ್ ಅವರ ಪ್ರಕಾರ, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶಾಖಪಟ್ಟಣಂನಿಂದ ನಾಲ್ವರನ್ನು ಬಂಧಿಸಲಾಗಿದೆ. ಇದುವರೆಗೆ ಒಟ್ಟು 68 ಕೆಜಿ ನಿಷಿದ್ಧ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ವಿಶಾಖಪಟ್ಟಣಂನಲ್ಲಿ ಬಂಧಿತ ಮೂವರು ಆರೋಪಿಗಳಿಂದ ಎರಡು ಸೆಣಬಿನ ಚೀಲಗಳಲ್ಲಿ ಪ್ಯಾಕ್ ಮಾಡಲಾಗಿದ್ದ 48 ಕೆಜಿ ಗಾಂಜಾವನ್ನು ವಶಪಡಿಸಿಕೊಳ್ಳಲಾಗಿದೆ.

ಇನ್ನೂ ನವೆಂಬರ್ 13 ರಂದು ಭಿಂಡ್ ಪೊಲೀಸರು ಬಂಧಿಸಿದ ಇಬ್ಬರಿಂದ 20 ಕೆಜಿ ಯನ್ನು ವಶಪಡಿಸಿಕೊಳ್ಳಲಾಗಿದೆ. ಈ ಗ್ಯಾಂಗ್ ಇದುವರೆಗೆ ಅಮೆಜಾನ್ ಮೂಲಕ 384 ಸರಕುಗಳಲ್ಲಿ 800 ಕೆಜಿ ಗಾಂಜಾವನ್ನು ಸಾಗಿಸಿರುವುದಾಗಿ ತಪ್ಪೊಪ್ಪಿಕೊಂಡಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.