ಸಿಎಂ ನವೀನ್ ಪಟ್ನಾಯಕ್ ಬೆಂಗಾವಲು ವಾಹನದ ಮೇಲೆ ಮೊಟ್ಟೆ ಎಸೆತ, ವಿಡಿಯೋ ವೈರಲ್
ಶ್ರೀಮಂದಿರ ಪರಿಕ್ರಮ ಯೋಜನೆಗೆ ಶಂಕುಸ್ಥಾಪನೆ ನೆರವೇರಿಸಿ ಹಿಂತಿರುಗುತ್ತಿರುವಾಗ ಪುರಿಯಲ್ಲಿ ಒಡಿಶಾ ಸಿಎಂ ನವೀನ್ ಪಟ್ನಾಯಕ್ ಅವರ ಬೆಂಗಾವಲು ಪಡೆ ವಾಹನದ ಮೇಲೆ ಮೊಟ್ಟೆಗಳನ್ನು ಎಸೆಯಲಾಯಿತು.

ಭುವನೇಶ್ವರ: ಶ್ರೀಮಂದಿರ ಪರಿಕ್ರಮ ಯೋಜನೆಗೆ ಶಂಕುಸ್ಥಾಪನೆ ನೆರವೇರಿಸಿ ಹಿಂತಿರುಗುತ್ತಿರುವಾಗ ಪುರಿಯಲ್ಲಿ ಒಡಿಶಾ ಸಿಎಂ ನವೀನ್ ಪಟ್ನಾಯಕ್ ಅವರ ಬೆಂಗಾವಲು ಪಡೆ ವಾಹನದ ಮೇಲೆ ಮೊಟ್ಟೆಗಳನ್ನು ಎಸೆಯಲಾಯಿತು.
ಪುರಿಯ ಆಸ್ಪತ್ರೆ ಛಕ್ ಬಳಿ ಬಿಜೆಪಿ ಕಾರ್ಯಕರ್ತರು ಮುಖ್ಯಮಂತ್ರಿಗಳ ಬೆಂಗಾವಲು ಪಡೆ ವಾಹನದ ಮೇಲೆ ಮೊಟ್ಟೆಗಳನ್ನು ಎಸೆದರು. ಅಷ್ಟೇಅಲ್ಲದೇ ಕಪ್ಪು ಬಾವುಟವನ್ನು ಬೀಸಿದರು ಎಂದು ಮೂಲಗಳು ತಿಳಿಸಿವೆ. ಕಾರ್ಯಕರ್ತರು "ನವೀನ್ ಪಟ್ನಾಯಕ್ ಡೌನ್ ಡೌನ್" ಎಂದು ಘೋಷಣೆ ಕೂಗಿದರು ಮತ್ತು ಅವರ ಭೇಟಿಯನ್ನು ವಿರೋಧಿಸಿದರು.
ಮಮಿತಾ ಮೆಹರ್ ಹತ್ಯೆಯಲ್ಲಿ ಗೃಹ ಖಾತೆ ರಾಜ್ಯ ಸಚಿವೆ ದಿಬ್ಯಾ ಶಂಕರ್ ಮಿಶ್ರಾ ಅವರ ಕೈವಾಡವಿದೆ ಎಂಬ ಆರೋಪದ ಮೇಲೆ ಬಿಜೆಪಿ ಮತ್ತು ಕಾಂಗ್ರೆಸ್‌ನ ವಿರೋಧ ಪಕ್ಷದ ನಾಯಕರು ಮೊಟ್ಟೆಯಿಂದ ಹೊಡೆದಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಜಗನ್ನಾಥ ದೇಗುಲದಲ್ಲಿ ನಡೆಯುತ್ತಿರುವ ಮೂರು ದಿನಗಳ ಮಹಾಯಜ್ಞದ ಕೊನೆಯ ದಿನದಂದು ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಅವರ ಸಮ್ಮುಖದಲ್ಲಿ ಶ್ರೋತ್ರಿಯ ಬ್ರಾಹ್ಮಣ ಸಮುದಾಯದ ಪುರೋಹಿತರು ಪಠಣ ಮಾಡುವ ಭಜನೆಗಳ ಮಧ್ಯೆ ಪೂರಿ ಗಜಪತಿ ದಿಬ್ಯಸಿಂಗ ದೇಬ್ ಅವರು ಬುಧವಾರ ಶ್ರೀಮಂದಿರ ಪರಿಕ್ರಮ ಯೋಜನೆಗೆ ಶಂಕುಸ್ಥಾಪನೆ ಮಾಡಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


