744 ಕೇರಳ ಪೊಲೀಸರು ಕ್ರಿಮಿನಲ್ ಪ್ರಕರಣಗಳಲ್ಲಿ ಆರೋಪಿಗಳು: ಪಿಣರಾಯಿ ವಿಜಯನ್ ಬಹಿರಂಗ
ರಾಜ್ಯದಲ್ಲಿ ಪೊಲೀಸರು ಕ್ರಿಮಿನಲ್ ದೌರ್ಜನ್ಯಗಳಲ್ಲಿ ಭಾಗಿಯಾಗುತ್ತಿರುವ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಆತಂಕ ವ್ಯಕ್ತವಾಗಿದೆ.

ಕೊಚ್ಚಿ: ಕೇರಳ ರಾಜ್ಯದಲ್ಲಿ ಒಟು 744 ಮಂದಿ ಪೊಲೀಸರು ಕ್ರಿಮಿನಲ್ ಪ್ರಕರಣಗಳನ್ನು ಎದುರಿಸುತ್ತಿದ್ದಾರೆ ಹಾಗೂ ಅವರಲ್ಲಿ 18 ಮಂದಿ ಸೇವೆಯಿಂದ ಅಮಾನತುಗೊಂಡಿದ್ದಾರೆ ಎನ್ನುವ ಸಂಗತಿ ತಿಳಿದುಬಂದಿದೆ.
ಈ ಸಂಗತಿಯನ್ನು ಸಿ.ಎಂ ಪಿಣರಾಯಿ ವಿಜಯನ್ ಅವರೇ ವಿಧಾನಸಭೆಯಲ್ಲಿ ತಿಳಿಸಿದ್ದಾರೆ. ಶಾಸಕರೊಬ್ಬರು ವಿಧಾನಸಭೆಯಲ್ಲಿ ಕೇಳಿದ್ದ ಪ್ರಶ್ನೆಗೆ ಉತ್ತರಿಸುತ್ತಾ ಪಿಣರಾಯಿ ವಿಜಯನ್ ಈ ವಿವರ ನೀಡಿದ್ದಾರೆ.
ಇದನ್ನೂ ಓದಿ: ತ್ರಿವಳಿ ತಲಾಕ್ ಹೇಳಲು ನಿರಾಕರಿಸಿದ ಯುವಕನಿಗೆ ಥಳಿತ
ರಾಜ್ಯದಲ್ಲಿ ಪೊಲೀಸರು ಕ್ರಿಮಿನಲ್ ದೌರ್ಜನ್ಯಗಳಲ್ಲಿ ಭಾಗಿಯಾಗುತ್ತಿರುವ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಆತಂಕ ವ್ಯಕ್ತವಾಗಿದೆ. ಹೀಗಾಗಿ ತಾವು ವಿಧಾನಸಭೆಯಲ್ಲಿ ಪ್ರಶ್ನೆ ಕೇಳಿದ್ದಾಗಿ ಶಾಸಕ ರೇಮ ಅವರು ತಿಳಿಸಿದ್ದಾರೆ. ಪೊಲೀಸರ ಸಮೂಹದಲ್ಲೇ ಕ್ರಿಮಿನಲ್ ಗಳು ಇದ್ದಾರೆ ಎನ್ನುವುದು ಆತಂಕದ ಸಂಗತಿ ಎಂದು ಅವರು ಭಿಪ್ರಾಯಪಟ್ಟಿದ್ದಾರೆ.
ಡಿಪಾರ್ಟ್ ಮೆಂಟ್ ಮಟ್ಟದಲ್ಲಿ ಕ್ರಿಮಿನಲ್ ಪೊಲೀಸರ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಸರ್ಕಾರ ಸ್ಪಷ್ಟನೆ ನೀಡುತ್ತಿದ್ದರೂ ಅದರಿಂದ ಪ್ರಯೋಜನವಾಗುತ್ತಿಲ್ಲ ಎನ್ನುವ ಆರೋಪ ಕೇಳಿಬಂದಿದೆ.
Related Article
ಒಡಿಶಾ: ಆಪ್ ಮೂಲಕ 1465 ಬೋಗಸ್ ರೈತರ ಪತ್ತೆ: ಉಪಗ್ರಹ ಚಿತ್ರಗಳ ನೆರವು
ವಾಯುಮಾಲಿನ್ಯ: ದೆಹಲಿಯಲ್ಲಿ ಮತ್ತೆ ನಿರ್ಮಾಣ ಚಟುವಟಿಕೆ ನಿಷೇಧಿಸಿದ ಸುಪ್ರೀಂ ಕೋರ್ಟ್
ಸಿಖ್ ಸಮುದಾಯದ ಬಗ್ಗೆ ಆಕ್ಷೇಪಾರ್ಹ ಹೇಳಿಕೆ: ನಟಿ ಕಂಗನಾಗೆ ದೆಹಲಿ ಸರ್ಕಾರದ ಸಮನ್ಸ್!
ಕೋರ್ಟ್ ಆದೇಶದಂತೆ ತನಿಖೆಗೆ ಸಹಕರಿಸುತ್ತೇನೆ: ಮುಂಬೈನಲ್ಲಿ ಪರಮ್ ಬೀರ್ ಸಿಂಗ್ ಹೇಳಿಕೆ
ಭಾರತದಲ್ಲಿಂದು ಕೊರೋನಾ ಅಬ್ಬರ ಇಳಿಕೆ: ದೇಶದಲ್ಲಿಂದು 9,119 ಹೊಸ ಕೇಸ್ ಪತ್ತೆ, 396 ಮಂದಿ ಸಾವು
ಕತ್ರಿನಾ ಕೈಫ್ ಕೆನ್ನೆಯಂತಹ ರಸ್ತೆ ಮಾಡಬೇಕು: ರಾಜಸ್ಥಾನ ಸಚಿವರಿಂದ ವಿವಾದಾತ್ಮಕ ಹೇಳಿಕೆ
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


