ವಾಯುಮಾಲಿನ್ಯ: ದೆಹಲಿಯಲ್ಲಿ ಮತ್ತೆ ನಿರ್ಮಾಣ ಚಟುವಟಿಕೆ ನಿಷೇಧಿಸಿದ ಸುಪ್ರೀಂ ಕೋರ್ಟ್
ಹದಗೆಡುತ್ತಿರುವ ಗಾಳಿಯ ಗುಣಮಟ್ಟವನ್ನು ಗಮನಿಸಿದ ಸುಪ್ರೀಂ ಕೋರ್ಟ್ ದೆಹಲಿ ಮತ್ತು ರಾಷ್ಟ್ರ ರಾಜಧಾನಿ ಪ್ರದೇಶದಲ್ಲಿ (ಎನ್‌ಸಿಆರ್) ಮತ್ತೆ ನಿರ್ಮಾಣ ಚಟುವಟಿಕೆಗಳ ಮೇಲೆ ನಿಷೇಧ ವಿಧಿಸಿದೆ ಮತ್ತು ಈ ಅವಧಿಗೆ ಕಾರ್ಮಿಕ ಸೆಸ್‌ನಂತೆ...

ನವದೆಹಲಿ: ಹದಗೆಡುತ್ತಿರುವ ಗಾಳಿಯ ಗುಣಮಟ್ಟವನ್ನು ಗಮನಿಸಿದ ಸುಪ್ರೀಂ ಕೋರ್ಟ್ ದೆಹಲಿ ಮತ್ತು ರಾಷ್ಟ್ರ ರಾಜಧಾನಿ ಪ್ರದೇಶದಲ್ಲಿ (ಎನ್‌ಸಿಆರ್) ಮತ್ತೆ ನಿರ್ಮಾಣ ಚಟುವಟಿಕೆಗಳ ಮೇಲೆ ನಿಷೇಧ ವಿಧಿಸಿದೆ ಮತ್ತು ಈ ಅವಧಿಗೆ ಕಾರ್ಮಿಕ ಸೆಸ್‌ನಂತೆ ಸಂಗ್ರಹಿಸಲಾದ ನಿಧಿಯಿಂದ ಸಂತ್ರಸ್ತ ಕಾರ್ಮಿಕರಿಗೆ ಜೀವನಾಧಾರ ಒದಗಿಸುವಂತೆ ರಾಜ್ಯ ಸರ್ಕಾರಗಳಿಗೆ ನಿರ್ದೇಶಿಸಿದೆ.
ಮುಖ್ಯ ನ್ಯಾಯಮೂರ್ತಿ ಎನ್‌ವಿ ರಮಣ ನೇತೃತ್ವದ ವಿಶೇಷ ಪೀಠ, ಬುಧವಾರ ರಾತ್ರಿ ಅಪ್‌ಲೋಡ್ ಮಾಡಿದ ಮಧ್ಯಂತರ ಆದೇಶದಲ್ಲಿ, ಮಧ್ಯಂತರ ಕ್ರಮವಾಗಿ ಮತ್ತು ಮುಂದಿನ ಆದೇಶದವರೆ, ನಾವು ಈ ಕೆಳಗಿನ ಎರಡು ಷರತ್ತುಗಳಿಗೆ ಒಳಪಟ್ಟು ಎನ್‌ಸಿಆರ್‌ನಲ್ಲಿನ ನಿರ್ಮಾಣ ಚಟುವಟಿಕೆಗಳ ಮೇಲೆ ನಿಷೇಧವನ್ನು ಪುನಃ ವಿಧಿಸುತ್ತೇವೆ ಎಂದು ತಿಳಿಸಲಾಗಿದೆ.
ಕೊಳಾಯಿ ಕೆಲಸ, ಒಳಾಂಗಣ ಅಲಂಕಾರ, ವಿದ್ಯುತ್ ಕೆಲಸ ಮತ್ತು ಮರದ ಕೆಲಸದಿಂದ ಕೂಡಿದ ಮಾಲಿನ್ಯರಹಿತ ನಿರ್ಮಾಣ ಚಟುವಟಿಕೆಗಳನ್ನು ಮುಂದುವರಿಸಲು ಸುಪ್ರೀಂ ಕೋರ್ಟ್ ಅನುಮತಿ ನೀಡಿದೆ.
ಕಟ್ಟಡ ಕಾರ್ಮಿಕರ ಕಲ್ಯಾಣಕ್ಕಾಗಿ ಕಾರ್ಮಿಕ ಸೆಸ್‌ನಂತೆ ಸಂಗ್ರಹಿಸಿದ ಹಣವನ್ನು ರಾಜ್ಯಗಳು ನಿರ್ಮಾಣ ಚಟುವಟಿಕೆಗಳನ್ನು ನಿಷೇಧಿಸುವ ಅವಧಿಗೆ ಜೀವನಾಧಾರವನ್ನು ಒದಗಿಸಲು ಮತ್ತು ಆಯಾ ವರ್ಗದ ಕಾರ್ಮಿಕರಿಗೆ ಕನಿಷ್ಠ ವೇತನ ಕಾಯ್ದೆಯಡಿಯಲ್ಲಿ ಸೂಚಿಸಲಾದ ವೇತನ ಪಾವತಿಸಲು ಬಳಸಬೇಕು ಎಂದು ಸೂಚಿಸಿದೆ.
ದೆಹಲಿಯಲ್ಲಿ ವಾಯು ಗುಣಮಟ್ಟದಲ್ಲಿ ಸುಧಾರಣೆ ಕಂಡುಬಂದ ಹಿನ್ನೆಲೆಯಲ್ಲಿ ಕಳೆದ ಸೋಮವಾರ ದೆಹಲಿ ಸರ್ಕಾರ ನಿರ್ಮಾಣ ಮತ್ತು ನೆಲಸಮ ಮಾಡುವ ಚಟುವಟಿಕೆಗಳ ಮೇಲಿನ ನಿಷೇಧವನ್ನು ತೆರವುಗೊಳಿಸಿತ್ತು. ಇದೀಗ ಸುಪ್ರೀಂ ಕೋರ್ಟ್ ಮತ್ತೆ ನಿಷೇಧ ಹೇರಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


