ನಾಳೆ ಸಂವಿಧಾನ ದಿನ, ವಿವಿಧ ಕಾರ್ಯಕ್ರಮಗಳಲ್ಲಿ ಪ್ರಧಾನಿ ಮೋದಿ, ರಾಷ್ಟ್ರಪತಿ ಕೋವಿಂದ್ ಭಾಗಿ
೧೯೪೯ರಲ್ಲಿ ಸಂವಿಧಾನ ರಚನಾ ಸಭೆಯು ಭಾರತದ ಸಂವಿಧಾನವನ್ನು ಅಂಗೀಕರಿಸಿದ ನೆನಪಿಗಾಗಿ ದೇಶ ನಾಳೆ ’ಸಂವಿಧಾನ ದಿನ’ವನ್ನು ಆಚರಿಸಲಿದೆ. ಈ ಐತಿಹಾಸಿಕ ದಿನಾಂಕದ ಮಹತ್ವಕ್ಕೆ ಸೂಕ್ತ ಮಾನ್ಯತೆ ನೀಡುವ...

ನವದೆಹಲಿ: ೧೯೪೯ರಲ್ಲಿ ಸಂವಿಧಾನ ರಚನಾ ಸಭೆಯು ಭಾರತದ ಸಂವಿಧಾನವನ್ನು ಅಂಗೀಕರಿಸಿದ ನೆನಪಿಗಾಗಿ ದೇಶ ನಾಳೆ ’ಸಂವಿಧಾನ ದಿನ’ವನ್ನು ಆಚರಿಸಲಿದೆ. ಈ ಐತಿಹಾಸಿಕ ದಿನಾಂಕದ ಮಹತ್ವಕ್ಕೆ ಸೂಕ್ತ ಮಾನ್ಯತೆ ನೀಡುವ ಪ್ರಧಾನಮಂತ್ರಿಯವರ ದೂರದೃಷ್ಟಿ ಆಧರಿಸಿ, ೨೦೧೫ರಿಂದ ’ಸಂವಿಧಾನ ದಿನ’ ಆಚರಣೆ ಸಂಪ್ರದಾಯ ಪ್ರಾರಂಭಿಸಲಾಯಿತು.
ಸಂವಿಧಾನ ದಿನಾಚರಣೆ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಸಂಸತ್ತು ಮತ್ತು ವಿಜ್ಞಾನ ಭವನದಲ್ಲಿ ಆಯೋಜಿಸಿರುವ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ.
ಸಂಸತ್ತಿನ ಸೆಂಟ್ರಲ್ ಹಾಲ್ ನಲ್ಲಿ ಆಯೋಜಿಸಲಾದ ಕಾರ್ಯಕ್ರಮದಲ್ಲಿ ರಾಷ್ಟ್ರಪತಿ, ಉಪರಾಷ್ಟ್ರಪತಿ, ಪ್ರಧಾನಿ ಮತ್ತು ಲೋಕಸಭಾ ಸ್ಪೀಕರ್ ಭಾಗವಹಿಸಿ ಮಾತನಾಡಲಿದ್ದಾರೆ. ರಾಷ್ಟ್ರಪತಿಗಳ ಭಾಷಣದ ನಂತರ, ಅವರು ಸಂವಿಧಾನದ ಪೀಠಿಕೆ ವಾಚನ ಮಾಡಲಿದ್ದು, ರಾಷ್ಟ್ರಾದ್ಯಂತ ಜನರು ಅವರೊಂದಿಗೆ ಲೈವ್ ಆಗಿ ಪಾಲ್ಗೊಳ್ಳಲಿದ್ದಾರೆ.
ಇದೇ ವೇಳೆ ಸಂವಿಧಾನ ರಚನಾ ಸಭೆಯ ಚರ್ಚೆಗಳ ಡಿಜಿಟಲ್ ಆವೃತ್ತಿ, ಭಾರತದ ಸಂವಿಧಾನದ ಕ್ಯಾಲಿಗ್ರಾಫ್ ಪ್ರತಿಯ ಡಿಜಿಟಲ್ ಆವೃತ್ತಿ ಮತ್ತು ಇಲ್ಲಿಯವರೆಗಿನ ಎಲ್ಲಾ ತಿದ್ದುಪಡಿಗಳನ್ನು ಒಳಗೊಂಡಿರುವ ಭಾರತದ ಸಂವಿಧಾನದ ನವೀಕರಿಸಿದ ಆವೃತ್ತಿಯನ್ನು ರಾಷ್ಟ್ರಪತಿಗಳು ಬಿಡುಗಡೆ ಮಾಡಲಿದ್ದಾರೆ. ಅಲ್ಲದೆ ’ಸಾಂವಿಧಾನಿಕ ಪ್ರಜಾಪ್ರಭುತ್ವ ಕುರಿತ ಆನ್ಲೈನ್ ರಸಪ್ರಶ್ನೆ’ಯನ್ನು ಉದ್ಘಾಟಿಸಲಿದ್ದಾರೆ.
ನವದೆಹಲಿಯ ವಿಜ್ಞಾನ ಭವನದಲ್ಲಿ ಸಂಜೆ ಸುಪ್ರೀಂಕೋರ್ಟ್ ಆಯೋಜಿಸಿರುವ ಎರಡು ದಿನಗಳ ಸಂವಿಧಾನ ದಿನಾಚರಣೆಯನ್ನು ಪ್ರಧಾನಿ ಮೋದಿ ಉದ್ಘಾಟಿಸಿ ಭಾಷಣ ಮಾಡಲಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


