ಆರ್ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ಗೆ ಜ್ವರ: ಏಮ್ಸ್ ಆಸ್ಪತ್ರೆಗೆ ದಾಖಲು
ಆರ್ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಅವರು ಜ್ವರಿಂದ ಬಳಲುತ್ತಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ. ಲಾಲು ಅವರು ಜ್ವರದಿಂದ ಬಳಲುತ್ತಿದ್ದಾರೆ.

ನವದೆಹಲಿ: ಆರ್ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಅವರು ಜ್ವರಿಂದ ಬಳಲುತ್ತಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ. ಲಾಲು ಅವರು ಜ್ವರದಿಂದ ಬಳಲುತ್ತಿದ್ದಾರೆ.
ಅವರನ್ನು ಶುಕ್ರವಾರ ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ಅವರ ಆರೋಗ್ಯ ಸ್ಥಿರವಾಗಿದೆ ಎಂದು ಮೂಲಗಳನ್ನು ಉಲ್ಲೇಖಿಸಿ ‘ಎಎನ್ಐ’ ಸುದ್ದಿಸಂಸ್ಥೆ ವರದಿ ಮಾಡಿದೆ.
ಮೇವು ಹಗರಣಕ್ಕೆ ಸಂಬಂಧಿಸಿದ ದುಮ್ಕಾ ಖಜಾನೆ ಪ್ರಕರಣದ ಪ್ರಮುಖ ಆರೋಪಿಯಾಗಿರುವ ಲಾಲೂ ಪ್ರಸಾದ್ ಜ್ವರ ಹಾಗೂ ದಣಿವಿನಿಂದ ಬಳಲುತ್ತಿದ್ದಾರೆ ಎಂದು ತಿಳಿದುಬಂದಿದೆ. ಅವರ ಸ್ಥಿತಿ ಗಂಭೀರವಾಗಿಲ್ಲದಿದ್ದರೂ ರಕ್ತ ಪರೀಕ್ಷೆಯ ವರದಿಗಾಗಿ ಕಾಯಲಾಗುತ್ತಿದೆ.
90ರ ದಶಕದ ಮೇವು ಹಗರಣಕ್ಕೆ ಸಂಬಂಧಿಸಿದ ಮತ್ತೊಂದು ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ನ್ಯಾಯಾಲಯಕ್ಕೆ ಹಾಜರಾಗಲು ಅವರು ಪಾಟ್ನಾಕ್ಕೆ ತೆರಳಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


