ಪುಲ್ವಾಮಾದಲ್ಲಿ ಹಿಜ್ಬುಲ್ ಮುಜಾಹಿದ್ದೀನ್ ಉಗ್ರ ಸಂಘಟನೆಯ ಇಬ್ಬರು ಸಹಚರರ ಬಂಧನ
ಜಮ್ಮು-ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ಇಂದು ಹಿಜ್ಬುಲ್ ಮುಜಾಹಿದ್ದೀನ್ ಉಗ್ರ ಸಂಘಟನೆಯ ಇಬ್ಬರು ಸಹಚರರನ್ನು ಬಂಧಿಸಿದ್ದು, ಅವರಿಂದ ಶಸಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಶ್ರೀನಗರ: ಜಮ್ಮು-ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ಇಂದು ಹಿಜ್ಬುಲ್ ಮುಜಾಹಿದ್ದೀನ್ ಉಗ್ರ ಸಂಘಟನೆಯ ಇಬ್ಬರು ಸಹಚರರನ್ನು ಬಂಧಿಸಿದ್ದು, ಅವರಿಂದ ಶಸಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಬಂಧಿಸಲಾಗಿರುವ ಉಗ್ರ ಸಹಚರರನ್ನು ಅವಂತಿಪೋರಾದ ಮುಜಾಮಿಲ್ ಆಯೊಬ್ ಭಟ್ ಮತ್ತು ಸುಹೈಲ್ ಮನ್ಜೂರ್ ಮೊಹಮ್ಮದ್ ಎಂದು ಗುರುತಿಸಲಾಗಿದೆ. ಇವರು ಹಿಜ್ಬುಲ್ ಮುಜಾಹಿದ್ದೀನ್ ಉಗ್ರ ಸಂಘಟನೆಯೊಂದಿಗೆ ನಂಟು ಹೊಂದಿದ್ದ ಆರೋಪದ ಮೇರೆಗೆ ದಕ್ಷಿಣ ಕಾಶ್ಮೀರ ಜಿಲ್ಲೆಯ ಅವಂತಿಪೋರಾದಲ್ಲಿ ಬಂಧಿಸಲಾಯಿತು ಎಂದು ಪೊಲೀಸ್ ವಕ್ತಾರರೊಬ್ಬರು ತಿಳಿಸಿದ್ದಾರೆ.
ಬಂಧಿತರಿಂದ ಎಕೆ-47 ರೈಫಲ್ಸ್ ನ 383 ಸುತ್ತು ಗುಂಡುಗಳು ಸೇರಿದಂತೆ ಅಪಾರದ ಪ್ರಮಾಣದ ಶಸಾಸ್ತ್ರಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ವಕ್ತಾರರು ಮಾಹಿತಿ ನೀಡಿದ್ದಾರೆ.
ಬಂಧಿತ ಉಗ್ರರ ಸಹಚರರು ಹಿಜ್ಬುಲ್ ಮುಜಾಹಿದ್ದೀನ್ ಸಂಘಟನೆಯ ಕಮಾಂಡರ್ ಗಳೊಂದಿಗೆ ಸಂಪರ್ಕ ಹೊಂದಿದ್ದರು. ಉಗ್ರ ಚಟುವಟಿಕೆಗಳಿಗೆ ನೆಲೆ ಒದಗಿಸುತ್ತದಲ್ಲದೇ ಶಸಾಸ್ತ್ರಗಳ ಪೂರೈಕೆಯಲ್ಲಿ ತೊಡಗಿಸಿಕೊಂಡಿದ್ದರು ಎಂದು ಅವರು ತಿಳಿಸಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ ಎಂದು ವಕ್ತಾರರು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


