ಸಂಸತ್ ಚಳಿಗಾಲದ ಅಧಿವೇಶನ: ನವೆಂಬರ್ 29ರಂದು ಸದನ ನಾಯಕರ ಸಭೆ ಕರೆದ ಸ್ಪೀಕರ್
ಸುಗಮ ಕಲಾಪಕ್ಕಾಗಿ ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರು ನವೆಂಬರ್ 29ರಂದು ಉಭಯ ಸದನಗಳ ನಾಯಕರ ಸಭೆ ಕರೆದಿದ್ದಾರೆ.

ನವದೆಹಲಿ: ಸುಗಮ ಕಲಾಪಕ್ಕಾಗಿ ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರು ನವೆಂಬರ್ 29ರಂದು ರಾಜಕೀಯ ಪಕ್ಷಗಳ ಸದನ ನಾಯಕರ ಸಭೆ ನಡೆಸಲಿದ್ದಾರೆ ಎಂದು ಶನಿವಾರ ಮೂಲಗಳು ತಿಳಿಸಿವೆ.
ಲೋಕಸಭಾ ವ್ಯವಹಾರಗಳ ಸಲಹಾ ಸಮತಿಯೊಂದಿಗೆ ಸ್ಪೀಕರ್ ಓಂ ಬಿರ್ಲಾ ಅವರು ಸದನ ನಾಯಕರ ಸಭೆ ನಡೆಸುವ ಸಾಧ್ಯತೆ ಅವರು ಹೇಳಿದ್ದಾರೆ.
ನವೆಂಬರ್ 26 ರಂದು ಲೋಕಸಭೆಯ ಸೆಕ್ರೆಟರಿಯೇಟ್ ಸಂಸತ್ತಿನ ಸೆಂಟ್ರಲ್ ಹಾಲ್ನಲ್ಲಿ ಆಯೋಜಿಸಿದ್ದ ಸಂವಿಧಾನ ದಿನಾಚರಣೆ ಕಾರ್ಯಕ್ರಮವನ್ನು ಬಹುತೇಕ ಎಲ್ಲಾ ವಿರೋಧ ಪಕ್ಷಗಳು ಬಹಿಷ್ಕರಿಸಿದ್ದವು. ಪ್ರತಿಪಕ್ಷಗಳು ಸಂವಿಧಾನ ಕಾರ್ಯಕ್ರಮವನ್ನು ಬಹಿಷ್ಕರಿಸಿದ ಬಗ್ಗೆ ಅವರು ಬಿರ್ಲಾ ತೀವ್ರ "ನೋವು" ವ್ಯಕ್ತಪಡಿಸಿದ್ದರು.
ಕಾರ್ಯಕ್ರಮದ ನಂತರ ಮಾಧ್ಯಮಗಳೊಂದಿಗೆ ಸಂವಾದ ನಡೆಸಿದ ಬಿರ್ಲಾ, ಸುಗಮ ಕಾಲಪಕ್ಕಾಗಿ ಒಮ್ಮತವನ್ನು ಮೂಡಿಸಲು ಪ್ರತಿಪಕ್ಷಗಳು ಮತ್ತು ಆಡಳಿತ ಪಕ್ಷದೊಂದಿಗೆ ಕುಳಿತು ಮಾತನಾಡುವುದಾಗಿ ಹೇಳಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


