ಸರ್ವಪಕ್ಷ ಸಭೆಯಲ್ಲಿ 31 ಪಕ್ಷಗಳ ಮುಖಂಡರು ಭಾಗಿ, ಅಡಚಣೆಯಿಲ್ಲದೆ ಚರ್ಚೆಗೆ ಸರ್ಕಾರ ಸಿದ್ಧ- ಪ್ರಹ್ಲಾದ ಜೋಶಿ
ಚಳಿಗಾಲದ ಸಂಸತ್ ಅಧಿವೇಶನ ಹಿನ್ನೆಲೆಯಲ್ಲಿ ನಡೆದ ಸರ್ವ ಪಕ್ಷ ಸಭೆಯಲ್ಲಿ 31 ರಾಜಕೀಯ ಪಕ್ಷಗಳಿಂದ 42 ಮುಖಂಡರು ಪಾಲ್ಗೊಂಡಿದ್ದರು ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ ಜೋಶಿ ಭಾನುವಾರ ತಿಳಿಸಿದ್ದಾರೆ.

ನವದೆಹಲಿ: ಚಳಿಗಾಲದ ಸಂಸತ್ ಅಧಿವೇಶನ ಹಿನ್ನೆಲೆಯಲ್ಲಿ ನಡೆದ ಸರ್ವ ಪಕ್ಷ ಸಭೆಯಲ್ಲಿ 31 ರಾಜಕೀಯ ಪಕ್ಷಗಳಿಂದ 42 ಮುಖಂಡರು ಪಾಲ್ಗೊಂಡಿದ್ದರು ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ ಜೋಶಿ ಭಾನುವಾರ ತಿಳಿಸಿದ್ದಾರೆ.
ಯಾವುದೇ ಅಡಚಣೆಯಿಲ್ಲದೆ ಸ್ಪೀಕರ್ ಹಾಗೂ ಸಭಾಪತಿ ಅನುಮತಿಸಿದ ಯಾವುದೇ ವಿಚಾರಗಳ ಬಗ್ಗೆ ಚರ್ಚೆಗೆ ಸರ್ಕಾರ ಸಿದ್ಧವಿದೆ ಎಂದು ಅವರು ಎಎನ್ ಐ ಸುದ್ದಿಸಂಸ್ಥೆಗೆ ಹೇಳಿದ್ದಾರೆ.
ಈ ಮಧ್ಯೆ ಕೃಷಿ ಕಾನೂನುಗಳ ಜಾರಿಗೆ ಆಗ್ರಹಿಸಿ ನಡೆದ ಪ್ರತಿಭಟನೆ ವೇಳೆ ಸಾವಿಗೀಡಾದ ಹಾಗೂ ಕೋವಿಡ್-19 ಸೋಂಕಿನಿಂದ ಮೃತಪಟ್ಟ ಕುಟುಂಬ ಸದಸ್ಯರಿಗೆ ಪರಿಹಾರ ನೀಡಬೇಕೆಂದು ಪ್ರತಿಪಕ್ಷಗಳು ಸಭೆಯಲ್ಲಿ ಸರ್ಕಾರವನ್ನು ಒತ್ತಾಯಿಸಿದವು.
ಅಧಿವೇಶನದಲ್ಲಿ ಮೂರು ಕೃಷಿ ಕಾನೂನುಗಳ ರದ್ಧತಿಗೆ ಸರ್ಕಾರ ಆದ್ಯತೆ ನೀಡಲಿದೆ ಎಂದು ಸಭೆ ಬಳಿಕ ಕೇಂದ್ರ ವಾರ್ತಾ ಸಚಿವ ಅನುರಾಗ್ ಠಾಕೂರ್ ತಿಳಿಸಿದರು. ನಾಳೆಯಿಂದ ಆರಂಭವಾಗಲಿರುವ ಸಂಸತ್ತಿನ ಚಳಿಗಾಲದ ಅಧಿವೇಶನ, ಡಿಸೆಂಬರ್ 23 ರಂದು ಕೊನೆಗೊಳ್ಳಲಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


