ಸಿಎಎ ರದ್ಧತಿಗೆ ಎನ್ ಡಿಎ ಮೈತ್ರಿ ಪಕ್ಷ ಒತ್ತಾಯ
ಸಂಸತ್ತಿನ ಚಳಿಗಾಲದ ಅಧಿವೇಶನದ ಹಿನ್ನೆಲೆಯಲ್ಲಿ ಭಾನುವಾರ ನಡೆದ ರಾಷ್ಟ್ರೀಯ ಪ್ರಜಾಸತಾತ್ಮಕ ಮೈತ್ರಿಕೂಟದ ಮಿತ್ರಪಕ್ಷಗಳ (ಎನ್ ಡಿಎ) ಸಭೆಯಲ್ಲಿ ಪೌರತ್ವ (ತಿದ್ದುಪಡಿ) ಕಾಯ್ದೆಯನ್ನು ರದ್ದುಪಡಿಸುವಂತೆ ರಾಷ್ಟ್ರೀಯ ಫೀಪಲ್ಸ್ ಪಾರ್ಟಿ ಮುಖಂಡರಾದ ಅಗತಾ ಸಂಗ್ಮಾ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ನವದೆಹಲಿ: ಸಂಸತ್ತಿನ ಚಳಿಗಾಲದ ಅಧಿವೇಶನದ ಹಿನ್ನೆಲೆಯಲ್ಲಿ ಭಾನುವಾರ ನಡೆದ ರಾಷ್ಟ್ರೀಯ ಪ್ರಜಾಸತಾತ್ಮಕ ಮೈತ್ರಿಕೂಟದ ಮಿತ್ರಪಕ್ಷಗಳ (ಎನ್ ಡಿಎ) ಸಭೆಯಲ್ಲಿ ಪೌರತ್ವ (ತಿದ್ದುಪಡಿ) ಕಾಯ್ದೆಯನ್ನು ರದ್ದುಪಡಿಸುವಂತೆ ರಾಷ್ಟ್ರೀಯ ಫೀಪಲ್ಸ್ ಪಾರ್ಟಿ ಮುಖಂಡರಾದ ಅಗತಾ ಸಂಗ್ಮಾ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ.
ಸಭೆ ಬಳಿಕ ಪಿಟಿಐ ಸುದ್ದಿಸಂಸ್ಥೆಯೊಂದಿಗೆ ಮಾತನಾಡಿದ ಅಗತಾ ಸಂಗ್ಮಾ, ಜನರ ಹಿತಾಸಕ್ತಿ ಗಮನದಲ್ಲಿ ಇಟ್ಟುಕೊಂಡು ಕೃಷಿ ಕಾನೂನುಗಳನ್ನು ರದ್ದುಪಡಿಸಲಾಗುತ್ತಿದೆ. ಅದೇ ರೀತಿಯಲ್ಲಿ ಈಶಾನ್ಯ ವಲಯದ ಜನರ ಭಾವನೆಗಳನ್ನು ಗಮನದಲ್ಲಿಟ್ಟುಕೊಂಡು ಸಿಎಎ ರದ್ದುಪಡಿಸಬೇಕೆಂದು ಸರ್ಕಾರದ ಬಳಿ ಮನವಿ ಮಾಡಿರುವುದಾಗಿ ತಿಳಿಸಿದರು.
ಸರ್ಕಾರದಿಂದ ಯಾವುದೇ ಪ್ರತಿಕ್ರಿಯೆ ಬಂದಿಲ್ಲ ಆದರೆ, ಇದನ್ನು ಬೇಡಿಕೆಯನ್ನಾಗಿ ಪರಿಗಣಿಸಲಾಗಿದೆ. ಈಶಾನ್ಯ ಭಾಗದ ಜನರು ಹಾಗೂ ನನ್ನ ಪಕ್ಷದ ಪರವಾಗಿ ಈ ಬೇಡಿಕೆಯನ್ನು ಸರ್ಕಾರದ ಮುಂದಿಟ್ಟಿರುವುದಾಗಿ ಸಂಗ್ಮಾ ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


