ದೇಶ

ಓಮಿಕ್ರಾನ್ ಆತಂಕ ನಡುವೆ ಕೋವಿಡ್ ಸಕ್ರಿಯ ಪ್ರಕರಣ ಮತ್ತಷ್ಟು ಇಳಿಕೆ: ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 8,309 ಹೊಸ ಕೇಸು, 236 ಸಾವು

ಓಮಿಕ್ರಾನ್ ರೂಪಾಂತರಿ ಕೊರೋನಾ ಆತಂಕದ ನಡುವೆ ಭಾರತದಲ್ಲಿ ಸೋಂಕಿನ ಅಬ್ಬರ ನಿನ್ನೆಗಿಂತ ಇಂದು ಸೋಮವಾರ ಮತ್ತಷ್ಟು ಕಡಿಮೆಯಾಗಿದ್ದು, ಇಂದು ಬೆಳಗ್ಗೆ 8 ಗಂಟೆಗೆ ಕೊನೆಗೊಂಡ 24 ತಾಸುಗಳ ಅವಧಿಯಲ್ಲಿ 8 ಸಾವಿರದ 309 ಮಂದಿಯಲ್ಲಿ ಕೊರೋನಾ ಪ್ರಕರಣಗಳು ದೃಢಪಟ್ಟಿದ್ದು, ಇದೇ ಅವಧಿಯಲ್ಲಿ 236 ಮಂದಿ ಮೃತಪಟ್ಟಿದ್ದಾರೆ.

ಓಮಿಕ್ರಾನ್ ಆತಂಕ ನಡುವೆ ಕೋವಿಡ್ ಸಕ್ರಿಯ ಪ್ರಕರಣ ಮತ್ತಷ್ಟು ಇಳಿಕೆ: ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 8,309 ಹೊಸ ಕೇಸು, 236 ಸಾವು
ಸಾಂದರ್ಭಿಕ ಚಿತ್ರ
Published On :

ನವದೆಹಲಿ: ಓಮಿಕ್ರಾನ್ ರೂಪಾಂತರಿ ಕೊರೋನಾ ಆತಂಕದ ನಡುವೆ ಭಾರತದಲ್ಲಿ ಸೋಂಕಿನ ಅಬ್ಬರ ನಿನ್ನೆಗಿಂತ ಇಂದು ಸೋಮವಾರ ಮತ್ತಷ್ಟು ಕಡಿಮೆಯಾಗಿದ್ದು, ಇಂದು ಬೆಳಗ್ಗೆ 8 ಗಂಟೆಗೆ ಕೊನೆಗೊಂಡ 24 ತಾಸುಗಳ ಅವಧಿಯಲ್ಲಿ 8 ಸಾವಿರದ 309 ಮಂದಿಯಲ್ಲಿ ಕೊರೋನಾ ಪ್ರಕರಣಗಳು ದೃಢಪಟ್ಟಿದ್ದು, ಇದೇ ಅವಧಿಯಲ್ಲಿ 236 ಮಂದಿ ಮೃತಪಟ್ಟಿದ್ದಾರೆ.

ಸೋಮವಾರ ಬೆಳಗ್ಗೆ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 3,45,72,523ಕ್ಕೆ ತಲುಪಿದ್ದು, ಸಾವಿನ ಸಂಖ್ಯೆ 4,68,554ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

ದೇಶದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 1 ಲಕ್ಷದ 03 ಸಾವಿರದ 859 ಇದ್ದು ಕಳೆದ 24 ಗಂಟೆಗಳಲ್ಲಿ 9 ಸಾವಿರದ 905 ಗುಣಮುಖರಾಗಿದ್ದಾರೆ, ಕಳೆದ 544 ದಿನಗಳಲ್ಲಿಯೇ ಕಡಿಮೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

ಇನ್ನು ಭಾರತದಲ್ಲಿ ಇದುವರೆಗೆ 64.02 ಕೋಟಿ ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ.
ಕೇಂದ್ರ ಸರ್ಕಾರ ಮಾಹಿತಿ ನೀಡಿರುವ ಪ್ರಕಾರ ಲಸಿಕೆ ಅಭಿಯಾನ ಆರಂಭವಾಗಿ ಇಲ್ಲಿಯವರೆಗೂ ಒಟ್ಟಾರೆ 122.41 ಕೋಟಿ ಜನರಿಗೆ ಲಸಿಕೆಯನ್ನು ನೀಡಲಾಗಿದೆ ಎಂದು ತಿಳಿಸಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.