ಪ್ರತಿಪಕ್ಷ ಸಂಸದರಿಂದ ಗದ್ದಲ: ಪ್ರಾರಂಭವಾದ ಕೆಲವೇ ಕ್ಷಣಗಳಲ್ಲಿ ಲೋಕಸಭೆ ಕಲಾಪ ಮುಂದೂಡಿಕೆ
ಸಂಸತ್ ನ ಚಳಿಗಾಲದ ಅಧಿವೇಶನಕ್ಕೆ ನ.29 ರಿಂದ ಚಾಲನೆ ದೊರೆತಿದ್ದು, ಲೋಕಸಭೆ ಕಲಾಪ ಪ್ರಾರಂಭವಾದ ಕೆಲವೇ ಕ್ಷಣಗಳಲ್ಲಿ ಮುಂದೂಡಲ್ಪಟ್ಟಿದೆ.

ನವದೆಹಲಿ: ಸಂಸತ್ ನ ಚಳಿಗಾಲದ ಅಧಿವೇಶನಕ್ಕೆ ನ.29 ರಿಂದ ಚಾಲನೆ ದೊರೆತಿದ್ದು, ಲೋಕಸಭೆ ಕಲಾಪ ಪ್ರಾರಂಭವಾದ ಕೆಲವೇ ಕ್ಷಣಗಳಲ್ಲಿ ಮುಂದೂಡಲ್ಪಟ್ಟಿದೆ.
ಕಲಾಪ ಪ್ರಾರಂಭವಾಗುತ್ತಿದ್ದಂತೆಯೇ ಪ್ರತಿಪಕ್ಷಗಳ ಸಂಸದರು ಘೋಷಣೆಗಳನ್ನು ಕೂಗಿ ಕಲಾಪಕ್ಕೆ ಅಡ್ಡಿ ಪಡಿಸಿದರು. ತೀವ್ರ ಗದ್ದಲದ ಹಿನ್ನೆಲೆಯಲ್ಲಿ ಸಭಾಧ್ಯಕ್ಷರು ಮಧ್ಯಾಹ್ನ 12: 19 ವರೆಗೆ ಕಲಾಪವನ್ನು ಮುಂದೂಡಲಾಗಿದೆ.
ಸಂಸತ್ ಕಲಾಪಕ್ಕೂ ಮುನ್ನ ಪ್ರಧಾನಿ ನರೇಂದ್ರ ಮೋದಿ ರಕ್ಷಣಾ ಸಚಿವ ರಾಜನಾಥ್ ಸಿಂಗ್, ಗೃಹ ಸಚಿವ ಅಮಿತ್ ಶಾ, ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್, ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಅವರೊಂದಿಗೆ ಸಭೆ ನಡೆಸಿದ್ದರು. ಸರ್ಕಾರ ಎಲ್ಲಾ ರೀತಿಯ ಚರ್ಚೆಗಳಿಗೂ, ಪ್ರತಿಪಕ್ಷಗಳ ಎಲ್ಲಾ ಪ್ರಶ್ನೆಗಳಿಗೂ ಉತ್ತರಿಸುವುದಕ್ಕೆ ಸಿದ್ಧವಿದೆ ಎಂದು ಮೋದಿ ಹೇಳಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


