ದೇಶ

ಓಮಿಕ್ರಾನ್ ಸೋಂಕಿತರಿಗೆ ಪ್ರತ್ಯೇಕ ಆಸ್ಪತ್ರೆ ನಿಗದಪಡಿಸಿದ ದೆಹಲಿ ಸರ್ಕಾರ

ಕೋವಿಡ್-19 ಹೊಸ ರೂಪಾಂತರಿ ಓಮಿಕ್ರಾನ್‌ ಸೋಂಕಿತರಿಗೆ ಚಿಕಿತ್ಸೆ ನೀಡಲು ದೆಹಲಿ ಆರೋಗ್ಯ ಇಲಾಖೆಯು ಲೋಕನಾಯಕ್ ಜೈ ಪ್ರಕಾಶ್ ನಾರಾಯಣ್ ಆಸ್ಪತ್ರೆಯನ್ನು ಮೀಸಲಾಗಿಟ್ಟಿದೆ.

ಓಮಿಕ್ರಾನ್ ಸೋಂಕಿತರಿಗೆ ಪ್ರತ್ಯೇಕ ಆಸ್ಪತ್ರೆ ನಿಗದಪಡಿಸಿದ ದೆಹಲಿ ಸರ್ಕಾರ
ಸಾಂದರ್ಭಿಕ ಚಿತ್ರ
Published On :

ನವದೆಹಲಿ: ಕೋವಿಡ್-19 ಹೊಸ ರೂಪಾಂತರಿ ಓಮಿಕ್ರಾನ್‌ ಸೋಂಕಿತರಿಗೆ ಚಿಕಿತ್ಸೆ ನೀಡಲು ದೆಹಲಿ ಆರೋಗ್ಯ ಇಲಾಖೆಯು ಲೋಕನಾಯಕ್ ಜೈ ಪ್ರಕಾಶ್ ನಾರಾಯಣ್ ಆಸ್ಪತ್ರೆಯನ್ನು ಮೀಸಲಾಗಿಟ್ಟಿದೆ.

ಓಮಿಕ್ರಾನ್ ಸೋಂಕಿತ ರೋಗಿಗಳನ್ನು ಪ್ರತ್ಯೇಕಿಸಲು ಮತ್ತು ಚಿಕಿತ್ಸೆ ನೀಡಲು ಪ್ರತೇಕ ವಾರ್ಡ್‌ಗಳನ್ನು ನಿಗದಿಪಡಿಸಲು ಆಸ್ಪತ್ರೆಗೆ ಸೂಚಿಸಲಾಗಿದೆ. 

ಹೊಸ ರೂಪಾಂತರಿ ವೈರಸ್ ತಗುಲಿದ ಯಾವುದೇ ರೋಗಿಗೆ ಯಾವುದೇ ಕಾರಣಕ್ಕೂ ಪ್ರವೇಶ ನಿರಾಕರಿಸಲಾಗುವುದಿಲ್ಲ ಎಂದು ಆರೋಗ್ಯ ಇಲಾಖೆ ಹೇಳಿದೆ.

ಹೊಸ ರೂಪಾಂತರಿ ವೈರಸ್ ಬಗ್ಗೆ ವಿಶ್ವ ಆರೋಗ್ಯ ಸಂಸ್ಥೆ (WHO) ತೀವ್ರ 'ಕಳವಳ' ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ  ಕೇಂದ್ರ ಸರ್ಕಾರ ಅಂತರಾಷ್ಟ್ರೀಯ ಪ್ರಯಾಣಿಕರಿಗೆ ಭಾನುವಾರ ಹೊಸ ಮಾರ್ಗಸೂಚಿಗಳನ್ನು ಹೊರಡಿಸಿದೆ.

ಮಾರ್ಗಸೂಚಿಗಳ ಪ್ರಕಾರ, ಓಮಿಕ್ರಾನ್ ಪಾಸಿಟಿವ್ ದೃಢಪಡುವ ರೋಗಿಗಳಿಗೆ ಪ್ರತ್ಯೇಕ ಘಟಕವನ್ನು ಸ್ಥಾಪಿಸಬೇಕು ಎಂದು ಹೇಳಿದೆ. ಅದರ ಪ್ರಕಾರ ದೆಹಲಿ ಸರ್ಕಾರ ಲೋಕನಾಯಕ ಆಸ್ಪತ್ರೆಯನ್ನು ಹೊಸ ರೂಪಾಂತರಿ ಸೋಂಕಿತರಿಗಾಗಿ ನಿಗದಿಪಡಿಸಲಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.