ತಿರುಮಲ ತಿರುಪತಿ ದೇವಸ್ಥಾನಮ್ ನ ಒಎಸ್ ಡಿ ಡಾಲರ್ ಶೇಷಾದ್ರಿ ನಿಧನ
ತಿರುಮಲ ತಿರುಪತಿ ದೇವಸ್ಥಾನಮ್ ನ ಪ್ರಧಾನ ಅರ್ಚಕರಾಗಿದ್ದ ಡಾಲರ್ ಶೇಷಾದ್ರಿ ನಿಧನರಾಗಿದ್ದಾರೆ.

ವಿಶಾಖಪಟ್ಟಣ: ತಿರುಮಲ ತಿರುಪತಿ ದೇವಸ್ಥಾನಮ್ ನ ಪ್ರಧಾನ ಅರ್ಚಕರಾಗಿದ್ದ ಡಾಲರ್ ಶೇಷಾದ್ರಿ ನಿಧನರಾಗಿದ್ದಾರೆ.
ಡಾಲರ್ ಶೇಷಾದ್ರಿ ಅವರಿಗೆ ಹೃದಯಾಘಾತ ಉಂಟಾಗಿತ್ತು. ಆಸ್ಪತ್ರೆಗೆ ಚಿಕಿತ್ಸೆಗಾಗಿ ತೆರಳುತ್ತಿದ್ದ ಮಾರ್ಗಮಧ್ಯದಲ್ಲಿ ಸಾವನ್ನಪ್ಪಿದ್ದಾರೆ. 1978 ರಿಂದಲೂ ಡಾಲರ್ ಶೇಷಾದ್ರಿ ಅವರು ದೇವಾಲಯದಲ್ಲಿ ಕಾರ್ಯನಿರ್ವಹಿಸುತ್ತಿದ್ದರು. 2007 ರಲ್ಲಿ ನಿವೃತ್ತರಾಗಿದ್ದರು. ನಂತರ ಒಎಸ್ ಡಿ ಆಗಿ ಮುಂದುವರೆದಿದ್ದರು.
ಟಿಟಿಡಿಯ ಹೆಚ್ಚುವರಿ ಇಒ ಧರ್ಮ ರೆಡ್ಡಿ ಡಾಲರ್ ಶೇಷಾದ್ರಿ ಅವರ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ. ಟಿಟಿಡಿಯಿಂದ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದಾಗಲೇ ಶೇಷಾದ್ರಿ ಅವರಿಗೆ ಹೃದಯಾಘಾತ ಸಂಭವಿಸಿದೆ.
ಡಾಲರ್ ಶೇಷಾದ್ರಿ ನಿಧನಕ್ಕೆ ಟಿ ಟಿ ಡಿ ಅಧ್ಯಕ್ಷ ವೈ.ವಿ ಸುಬ್ಬಾರೆಡ್ಡಿ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


