ಬಿಜೆಪಿ ಸರ್ಕಾರ ಮೀಸಲಾತಿ ನಿಷ್ಪರಿಣಾಮಕಾರಿಯಾಗಿ ಮಾಡಲು ಯತ್ನಿಸುತ್ತಿದೆ: ಮಾಯಾವತಿ
ಬಿಜೆಪಿ ಸರ್ಕಾರ ವಿವಿಧ ರೀತಿಯಲ್ಲಿ ಮೀಸಲಾತಿಯನ್ನು ನಿಷ್ಪರಿಣಾಮಕಾರಿಯಾಗಿ ಮಾಡಲು ಪ್ರಯತ್ನಿಸುತ್ತಿದೆ ಎಂದು ಬಹುಜನ ಸಮಾಜ ಪಕ್ಷದ(ಬಿಎಸ್ಪಿ) ಮುಖ್ಯಸ್ಥೆ ಮತ್ತು ಮಾಜಿ ಮುಖ್ಯಮಂತ್ರಿ ಮಾಯಾವತಿ ಅವರು ಮಂಗಳವಾರ ಆರೋಪಿಸಿದ್ದಾರೆ.

ಲಖನೌ: ಬಿಜೆಪಿ ಸರ್ಕಾರ ವಿವಿಧ ರೀತಿಯಲ್ಲಿ ಮೀಸಲಾತಿಯನ್ನು ನಿಷ್ಪರಿಣಾಮಕಾರಿಯಾಗಿ ಮಾಡಲು ಪ್ರಯತ್ನಿಸುತ್ತಿದೆ ಎಂದು ಬಹುಜನ ಸಮಾಜ ಪಕ್ಷದ(ಬಿಎಸ್ಪಿ) ಮುಖ್ಯಸ್ಥೆ ಮತ್ತು ಮಾಜಿ ಮುಖ್ಯಮಂತ್ರಿ ಮಾಯಾವತಿ ಅವರು ಮಂಗಳವಾರ ಆರೋಪಿಸಿದ್ದಾರೆ.
ತನ್ನ ಜಾತಿವಾದಿ ಮನಸ್ಥಿತಿಯಿಂದಾಗಿ, ಮೋದಿ ಸರ್ಕಾರವು ಜಾತಿ ಆಧಾರಿತ ಒಬಿಸಿ ಜನಗಣತಿಯ ಬೇಡಿಕೆ ಬಗ್ಗೆ ಜಾಣ ಕಿವುಡುತನ ಪ್ರದರ್ಶಿಸುತ್ತಿದೆ ಎಂದು ಮಾಯಾವತಿ ವಾಗ್ದಾಳಿ ನಡೆಸಿದ್ದಾರೆ.
ಇಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಸಂವಾದ ನಡೆಸಿದ ಬಿಎಸ್ ಪಿ ಮುಖ್ಯಸ್ಥೆ, ತಮ್ಮ ಪಕ್ಷದ ಒಬಿಸಿ ಸಮುದಾಯ, ಅಲ್ಪಸಂಖ್ಯಾತ ಸಮುದಾಯ ವಿಶೇಷವಾಗಿ ಮುಸ್ಲಿಂ ಮತ್ತು ಜಾಟ್ ಸಮುದಾಯದ ನಾಯಕರಿಗೆ ತಮ್ಮ ಸಮುದಾಯದ ಜನರನ್ನು ಮೀಸಲು ಸ್ಥಾನಗಳಿಗೆ ಕರೆತರುವ ಜವಾಬ್ದಾರಿಯನ್ನು ವಹಿಸಲಾಗಿದೆ ಎಂದು ಹೇಳಿದರು.
"ರಾಜ್ಯದಲ್ಲಿ ಬಿಎಸ್‌ಪಿ ಅಧಿಕಾರಕ್ಕೆ ಬಂದರೆ ನಮ್ಮ ಸರ್ಕಾರವು ಮೊದಲಿನಂತೆಯೇ ಒಬಿಸಿಗಳು, ಮುಸ್ಲಿಮರು ಮತ್ತು ಜಾಟ್‌ಗಳ ಹಕ್ಕುಗಳು ಮತ್ತು ಅಭಿವೃದ್ಧಿಯನ್ನು ಗಮನದಲ್ಲಿಟ್ಟುಕೊಂಡು ಕೆಲಸ ಮಾಡಲಿದೆ" ಎಂದು ಮಾಯಾವತಿ ಹೇಳಿದರು.
ಬಿಎಸ್‌ಪಿ 2022ರ ಉತ್ತರ ಪ್ರದೇಶ ಚುನಾವಣೆಯಲ್ಲಿ ಸ್ವತಂತ್ರವಾಗಿ ಸ್ಪರ್ಧಿಸುತ್ತದೆ ಎಂದು ಮತ್ತೊಮ್ಮೆ ಹೇಳಿದ ಮಾಯಾವತಿ, ಯಾವುದೇ ಪಕ್ಷದೊಂದಿಗೆ ಚುನಾವಣಾ ಪೂರ್ವ ಮೈತ್ರಿ ಮಾಡಿಕೊಳ್ಳುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


