ಕಳೆದ 5 ವರ್ಷದಲ್ಲಿ 6 ಲಕ್ಷಕ್ಕೂ ಹೆಚ್ಚು ಭಾರತೀಯರು ಪೌರತ್ವ ತ್ಯಜಿಸಿದ್ದಾರೆ: ಕೇಂದ್ರ
ಕಳೆದ ಐದು ವರ್ಷಗಳಲ್ಲಿ ಆರು ಲಕ್ಷಕ್ಕೂ ಹೆಚ್ಚು ಭಾರತೀಯರು ತಮ್ಮ ಪೌರತ್ವವನ್ನು ತ್ಯಜಿಸಿದ್ದಾರೆ ಎಂದು ಲೋಕಸಭೆಗೆ ಮಂಗಳವಾರ ಕೇಂದ್ರ ಸರ್ಕಾರ ಮಾಹಿತಿ ನೀಡಿದೆ.

ನವದೆಹಲಿ: ಕಳೆದ ಐದು ವರ್ಷಗಳಲ್ಲಿ ಆರು ಲಕ್ಷಕ್ಕೂ ಹೆಚ್ಚು ಭಾರತೀಯರು ತಮ್ಮ ಪೌರತ್ವವನ್ನು ತ್ಯಜಿಸಿದ್ದಾರೆ ಎಂದು ಲೋಕಸಭೆಗೆ ಮಂಗಳವಾರ ಕೇಂದ್ರ ಸರ್ಕಾರ ಮಾಹಿತಿ ನೀಡಿದೆ.
ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ನಿತ್ಯಾನಂದ ರೈ ಅವರು ವಿದೇಶಾಂಗ ಸಚಿವಾಲಯದಲ್ಲಿ ಲಭ್ಯವಿರುವ ಮಾಹಿತಿಯ ಪ್ರಕಾರ, ಒಟ್ಟು 1,33,83,718 ಭಾರತೀಯರು ವಿದೇಶಗಳಲ್ಲಿ ವಾಸಿಸುತ್ತಿದ್ದಾರೆ ಎಂದು ಹೇಳಿದರು.
ಪ್ರಶ್ನೆಯೊಂದಕ್ಕೆ ಲಿಖಿತ ಉತ್ತರ ನೀಡಿದ ಅವರು 2017 ರಲ್ಲಿ 1,33,049 ಭಾರತೀಯರು, 2018 ರಲ್ಲಿ 1,34,561, 2019 ರಲ್ಲಿ 1,44,017, 2020 ರಲ್ಲಿ 85,248 ಮತ್ತು ಸೆಪ್ಟೆಂಬರ್, 30 2021 ರವರೆಗೆ 1,11,287 ಭಾರತೀಯರು ಭಾರತೀಯ ಪೌರತ್ವವನ್ನು ತ್ಯಜಿಸಿದ್ದಾರೆ ಎಂದು ಹೇಳಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


