'ಚಾರ್ಧಾಮ್ ದೇವಸ್ಥಾನ ಮಂಡಳಿ' ರದ್ದುಗೊಳಿಸಿದ ಉತ್ತರಾಖಂಡ ಸರ್ಕಾರ
ಚಾರ್ಧಾಮ್ ದೇವಸ್ಥಾನ ಮಂಡಳಿಯನ್ನು ರದ್ದುಗೊಳಿಸಲು ಉತ್ತರಾಖಂಡ ಸರ್ಕಾರ ಮಂಗಳವಾರ ನಿರ್ಧರಿಸಿದೆ.

ಡೆಹ್ದ್ರಾಡೂನ್: ಚಾರ್ಧಾಮ್ ದೇವಸ್ಥಾನ ಮಂಡಳಿಯನ್ನು ರದ್ದುಗೊಳಿಸಲು ಉತ್ತರಾಖಂಡ ಸರ್ಕಾರ ಮಂಗಳವಾರ ನಿರ್ಧರಿಸಿದೆ.
2019ರ ಉತ್ತರಾಖಂಡ ಚಾರ್‌ಧಾಮ್ ದೇವಸ್ಥಾನ ನಿರ್ವಹಣೆ ಕಾಯಿದೆಯನ್ನು ರದ್ದುಗೊಳಿಸಬೇಕೆಂದು ಅರ್ಚಕರು ಆಗ್ರಹ ವ್ಯಕ್ತಪಡಿಸಿದ್ದು, ಈ ಸಂಬಂಧ ಸಾಕಷ್ಟು ಬಾರಿ ಪ್ರತಿಭಟನೆಯನ್ನೂ ನಡೆಸಿದ್ದರು. ಚಾರ್ಧಾಮ್ ದೇವಸ್ಥಾನ ಮಂಡಳಿ ಸ್ಥಾಪನೆಯಿಂದ ದೇವಾಲಯಗಳ ಮೇಲಿನ ಸಾಂಪ್ರದಾಯಿಕ ಹಕ್ಕುಗಳ ಉಲ್ಲಂಘನೆ ಮಾಡಿದಂತಾಗುತ್ತದೆ ಎಂದು ಹೇಳಿದ್ದರು.
ಮಂಡಳಿ ಸ್ಥಾಪನೆಗೆ ಅರ್ಚಕರು ವಿರೋಧ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಉತ್ತರಾಖಂಡ ಸರ್ಕಾರ ಈ ಕುರಿತು ಅಧ್ಯಯನ ನಡೆಸಲು ಉನ್ನತ ಮಟ್ಟದ ಸಮಿತಿಯನ್ನು ರಚನೆ ಮಾಡಿತ್ತು.
ಈ ಸಂಬಂಧ ಅಧ್ಯಯನ ನಡೆಸಿದ ಸಮಿತಿಯು ಭಾನುವಾರ ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಅವರಿಗೆ ಕೆಲ ಶಿಫಾರಸುಗಳನ್ನು ಮಾಡಿತ್ತು.
ಮನೋಹರ್ ಕಾಂತ್ ಧ್ಯಾನಿ ನೇತೃತ್ವದ ಸಮಿತಿಯು ಸಲ್ಲಿಸಿದ ವರದಿಯ ವಿವರಗಳನ್ನು ನಾವು ಪರಿಶೀಲಿಸಿದ್ದೇವೆ. ಸಮಸ್ಯೆಯ ಎಲ್ಲಾ ಅಂಶಗಳನ್ನು ಪರಿಗಣಿಸಿದ ನಂತರ ಸರ್ಕಾರವು ಕಾಯಿದೆಯನ್ನು ಹಿಂಪಡೆಯಲು ನಿರ್ಧರಿಸಿದೆ" ಎಂದು ಪುಷ್ಕರ್ ಸಿಂಗ್ ಧಾಮಿ ಅವರು ಹೇಳಿದ್ದಾರೆ.
ಮಾಜಿ ಮುಖ್ಯಮಂತ್ರಿ ತ್ರಿವೇಂದ್ರ ಸಿಂಗ್ ರಾವತ್ ಅವರ ಅಧಿಕಾರಾವಧಿಯಲ್ಲಿ ಸ್ಥಾಪಿಸಲಾಗಿದ್ದ ಚಾರ್ಧಾಮ್ ದೇವಸ್ಥಾನ ಮಂಡಳಿಯು ಕೇದಾರನಾಥ, ಬದರಿನಾಥ್, ಗಂಗೋತ್ರಿ ಮತ್ತು ಯಮುನೋತ್ರಿಯ ಪ್ರಸಿದ್ಧ ದೇವಾಲಯಗಳು ಸೇರಿದಂತೆ 51 ದೇವಾಲಯಗಳ ವ್ಯವಹಾರಗಳನ್ನು ನಿರ್ವಹಿಸುತ್ತಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


