ಶಿಮ್ಲಾದಲ್ಲಿ ಭೂಕುಸಿತ ಪರಿಣಾಮ ಬಹುಅಂತಸ್ತಿನ ಕಟ್ಟಡ ಕುಸಿತ!
ಶಿಮ್ಲಾದಲ್ಲಿ ಗುರುವಾರ ಸಂಜೆ ಸುರಿದ ಭಾರೀ ಮಳೆಯಿಂದಾಗಿ ಭೂಕುಸಿತ ಸಂಭವಿಸಿದ್ದು, ಪರಿಣಾಮ ಬಹುಮಹಡಿ ಕಟ್ಟಡವೊಂದು ಕುಸಿದುಬಿದ್ದಿದೆ.

ಶಿಮ್ಲಾ: ಶಿಮ್ಲಾದಲ್ಲಿ ಗುರುವಾರ ಸಂಜೆ ಸುರಿದ ಭಾರೀ ಮಳೆಯಿಂದಾಗಿ ಭೂಕುಸಿತ ಸಂಭವಿಸಿದ್ದು, ಪರಿಣಾಮ ಬಹುಮಹಡಿ ಕಟ್ಟಡವೊಂದು ಕುಸಿದುಬಿದ್ದಿದೆ.
ನಿನ್ನೆ ಸಂಜೆ 5.45ರ ಸುಮಾರಿಗೆ ಶಿಮ್ಲಾದ ಹಾಲಿ ಪ್ಯಾಲೇಸ್ ಬಳಿಯ ಘೋಡಾ ಚೌಕಿಯಲ್ಲಿ ಈ ಘಟನೆ ನಡೆದಿದೆ ಎಂದು ರಾಜ್ಯ ವಿಪತ್ತು ನಿರ್ವಹಣಾ ನಿರ್ದೇಶಕ ಸುದೇಶ್ ಕುಮಾರ್ ಮೊಖ್ತಾ ತಿಳಿಸಿದ್ದಾರೆ. ಈ ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಕಟ್ಟಡ ಕುಸಿತದ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಆದಾಗ್ಯೂ, ಘಟನೆಯ ಬಗ್ಗೆ ತನಿಖೆ ನಡೆಸಲು ಸರ್ಕಾರದಿಂದ ಆದೇಶಿಸಲಾಗಿದೆ ಎಂದು ನಗರಾಭಿವೃದ್ಧಿ ಸಚಿವ ಸುರೇಶ್ ಭಾರದ್ವಾಜ್ ಹೇಳಿರುವುದಾಗಿ ಎಎನ್ಐ ಸುದ್ದಿ ಸಂಸ್ಥೆ ವರದಿ ಮಾಡಿದೆ.
8 ಅಂತಸ್ತಿನ ಕಟ್ಟಡದ ಭಾಗಗಳು ಎರಡು ಎರಡು ಅಂತಸ್ತಿನ ಕಟ್ಟಡಗಳಿಗೆ ತಗುಲಿ ಹಾನಿಗೊಳಗಾದವು, ಹೋಟೆಲ್ ಸೇರಿದಂತೆ ಎರಡು ಪಕ್ಕದ ಕಟ್ಟಡಗಳು ಕೂಡ ಅಪಾಯದಲ್ಲಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಜಿಲ್ಲಾಡಳಿತವು ಕಟ್ಟಡಗಳ ಪ್ರತಿ ನಿವಾಸಿಗಳಿಗೆ ತಕ್ಷಣದ ಹಣಕಾಸಿನ ಸಹಾಯವಾಗಿ 10,000 ರೂಗಳನ್ನು ಒದಗಿಸಿದೆ ಎಂದು ಮೊಖ್ತಾ ಮಾಹಿತಿ ನೀಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


